ಸಿದ್ದರಾಮಯ್ಯ ಸಂಪುಟ ಸದಸ್ಯರಿಂದಲೇ ಸಮೀಕ್ಷೆಗೆ ವಿರೋಧ: ವಿ.ಸುನಿಲ್‌ಕುಮಾರ್

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಿಜೆಪಿ ವಿರೋಧ ಮಾಡಿಲ್ಲ. ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಿದ್ದರಾಮಯ್ಯ ಸಂಪುಟದ ಸದಸ್ಯರಿಂದ ಅದನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಅವರು ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ವಿ.ಸುನಿಲ್‌ಕುಮಾರ್ ಟೀಕಿಸಿದ್ದಾರೆ. ಸಹೋದ್ಯೋಗಿಗಳೇ ಗಣತಿಗೆ ವಿರೋಧಿಸಿದರು ಎಂಬ ಕಾರಣಕ್ಕೆ ನೀವು ಸಂಪುಟ ಸಭೆಯಲ್ಲೇ ಖಿನ್ನರಾಗಿದ್ದು, ಗದ್ಗದಿತರಾಗಿದ್ದು ಸುಳ್ಳೇ’ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ಪ್ರಶ್ನಿಸಿದರು. ನನ್ನನ್ನು ಜಾತಿವಾದಿ ಎಂದು ಬಿಂಬಿಸುತ್ತಿದ್ದರೂ ನೀವೆಲ್ಲ ಸುಮ್ಮನೆ ಇದ್ದಿದ್ದೇಕೆ ಎಂದು ಸಂಪುಟದಲ್ಲಿ […]
‘ಗಾರ್ಬಾ’ ನೃತ್ಯ ಮಾಡುವಾಗ ಏಕಾಏಕಿ ಕುಸಿದು ಬಿದ್ದು 19 ವರ್ಷದ ನವ ವಿವಾಹಿತೆ ಮೃತ್ಯು.

ಮಧ್ಯಪ್ರದೇಶ: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ‘ಗಾರ್ಬಾ’ ನೃತ್ಯ ಕಾರ್ಯಕ್ರಮದಲ್ಲಿ 19 ವರ್ಷದ ನವವಿವಾಹಿತೆಯೊಬ್ಬರು ತನ್ನ ಪತಿಯೊಂದಿಗೆ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಬಿಕಾನ್ ಗ್ರಾಮದ ಸಂತ ಸಿಂಗಾಜಿ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಪೊಲೀಸರಿಗೆ ಈ ಕುರಿತು ಮಾಹಿತಿ ಬಂದಿಲ್ಲವಾದರೂ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಘಟನೆಯ ವಿಡಿಯೊದಲ್ಲಿ, ಮಹಿಳೆ ತನ್ನ ಪತಿಯೊಂದಿಗೆ ದುರ್ಗಾ ವಿಗ್ರಹದ […]
ಉಡುಪಿ: ಬಂಟಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪದಪ್ರದಾನ ಸಮಾರಂಭ

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್ ಕ್ರಾಸ್ ಘಟಕವು ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ದಿನಾಂಕ 27 ಸೆಪ್ಟೆಂಬರ್ 2025ರಂದು ಕಾಲೇಜಿನ ಆವರಣದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿಯ ಖ್ಯಾತ ಸಮಾಜ ಸೇವಕ ಶ್ರೀ ರವಿ ಕಟ್ಪಾಡಿ ಇವರು ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿ ಸಮುದಾಯ ಸೇವೆಯ ಮಹತ್ವದ ಬಗ್ಗೆ ತಿಳಿಸಿದರು ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆ ಮತ್ತುಸಹಾನುಭೂತಿಯಿಂದ ಸಾಮಾಜಿಕ ಕಾರ್ಯಗಳಿಗೆ ತಮ್ಮನ್ನು […]
ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ […]
ಕ್ರೈಸ್ಟ್ ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಜೀವ ವಿಮೆಯ ವಿಧಗಳು ಮತ್ತು ಅಗತ್ಯತೆ ಉಪನ್ಯಾಸ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಜೀವ ವಿಮೆಯ ವಿಧಗಳು ಮತ್ತು ಅವುಗಳ ಅಗತ್ಯತೆಯ ಕುರಿತು ಉಪನ್ಯಾಸ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ವಿಭಾಗದ ಅಭಿವೃದ್ಧಿ ಅಧಿಕಾರಿ ಅಶ್ವಿತ್ ನಾಯ್ಕ್ ಅವರು ಸಂಪನ್ಮೂಲ ಅಧಿಕಾರಿಗಳಾಗಿದ್ದರು. ಅವರು ಮಾತನಾಡಿ “ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯವಾಗಿದ್ದು, ವಿಮೆ ಮಾಡಿಸುವ ಮೊದಲು ಅದರ ನಿಯಮ ನಿಬಂಧನೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ವಿಮಾಕ್ಷೇತ್ರದಲ್ಲಿ ಪೂರ್ಣಕಾಲಿಕ, ಅರೆಕಾಲಿಕ ಮುಂತಾದ ಅನೇಕ ಉದ್ಯೋಗಾವಕಾಶಗಳಿದ್ದು ವಿದ್ಯಾರ್ಥಿಗಳು ಉದ್ಯೋಗಕ್ಷೇತ್ರ […]