ರಂಗಭೂಮಿ (ರಿ.) ಉಡುಪಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ರಾಜ್ಯದ ಪ್ರತಿಷ್ಠಿತ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ಯ 60ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 20ರಂದು ಉಡುಪಿ ಹೊಟೇಲ್ ಡಯಾನಾದಲ್ಲಿ ಜರುಗಿತು. ರಂಗಭೂಮಿ (ರಿ.) ಉಡುಪಿ” ಯ 2025-26 ನೇ ಸಾಲಿನ ಮಾರ್ಗದರ್ಶಕರಾಗಿ ಡಾ| ಹೆಚ್. ಶಾಂತರಾಮ್, ಗೌರವಾಧ್ಯಕ್ಷರಾಗಿ ಡಾ| ಹೆಚ್. ಎಸ್. ಬಲ್ಲಾಳ್, ಅಧ್ಯಕ್ಷರಾಗಿ ಡಾ| ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾದರು. 2025-26ನೇ ಸಾಲಿನ ಉಪಾಧ್ಯಕ್ಷರಾಗಿ ಭಾಸ್ಕರ ರಾವ್ ಕಿದಿಯೂರು ಹಾಗೂ ಎನ್. ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿಯಾಗಿ […]