ಬೆಡ್ ರೂಂನಲ್ಲಿ ಸಿಸಿ ಕ್ಯಾಮೆರಾ: ಪತ್ನಿ ಜತೆ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳಿಸುತ್ತಿದ್ದ ಪತಿ: ದೂರು ದಾಖಲು, ಆರೋಪಿಯ ಪತ್ತೆಗೆ ತೀವ್ರ ಹುಡುಕಾಟ!

ಬೆಂಗಳೂರು: ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರೋಪಿ ಸೈಯದ್ ಇನಾಮುಲ್ ಎಂಬಾತನೊಂದಿಗೆ ಆಕೆಯ ಮದುವೆಯಾಗಿತ್ತು. ಆದರೆ, ಆತ ಈಗಾಗಲೇ ಮತ್ತೊಂದು ಮದುವೆಯಾಗಿದ್ದ. ಆ ವಿಚಾರವನ್ನು ತಿಳಿಸದೇ ಎರಡನೇ ಮದುವೆ ಮಾಡಿಕೊಂಡಿದ್ದಾನೆ ಎಂದು ಸಂತ್ರಸ್ತೆ ಆರೂಪಿಸಿದ್ದಾರೆ. 19 ಮಂದಿ ಮಹಿಳೆಯರ ಜತೆ ಸಂಬಂಧ:ಆರೋಪಿ ಪ್ರತಿದಿನ ಹೆಂಡತಿಗೆ ಕಿರುಕುಳ ನೀಡುತ್ತಿದ್ದುದಲ್ಲದೆ, 19 ಮಂದಿ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದೇನೆ ಎಂದು […]

ಸಾಮರ್ಥ್ಯ, ಆತ್ಮ ವಿಶ್ವಾಸ ಇದ್ದಾಗ ಯಶಸ್ವಿ ಉದ್ಯಮಿಯಾಗಲು ಸಾಧ್ಯ – ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ: ಯಾರಲ್ಲಿ ಕನಸು, ಛಲ, ಸ್ವಸಾಮರ್ಥ್ಯ, ಆತ್ಮ ವಿಶ್ವಾಸ ಇದ್ದಾಗ ಓರ್ವ ಯಶಸ್ವಿ ಉದ್ಯಮಿಯಾಗಲು ಸಾಧ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಗುರುವಾರ ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಮುದಾಯ ಭವನದಲ್ಲಿ ಕರಾವಳಿ ಕ್ರಿಶ್ಚಿಯನ್ ಛೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀ ಇದರ ವಾರ್ಷಿಕ ಸಹಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ಪ್ರದಾನದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರತಿಯೊಬ್ಬ ಸ್ವಉದ್ಯಮಿಯಲ್ಲಿ ವಿಶೇಷವಾದ ಕಲೆ ಇದ್ದು, ರಾಜ್ಯ ಮತ್ತು ಕೇಂದ್ರ ಸರಕಾರಗಳಿಂದ ಸ್ವ […]

ಉಡುಪಿ – ಉಚ್ಚಿಲ ದಸರಾಗೆ ವೈಭವದ ತೆರೆ

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವದುರ್ಗೆಯರ ಸಹಿತ ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ 10 ದಿನಗಳ ಕಾಲ ನಡೆದ ಉಡುಪಿ- ಉಚ್ಚಿಲ ದಸರಾ ಮಹೋತ್ಸವ ವೈಭವದಿಂದ ಸಂಪನ್ನಗೊಂಡಿತು. ಚಂಡಿಕಾ ಯಾಗ ವಿಸರ್ಜನಾ ಶೋಭಾಯಾತ್ರೆಯ ಪ್ರಯುಕ್ತ ಬೆಳಗ್ಗಿನಿಂದಲೇ ಸಹಸ್ರಾರು ಮಂದಿ ಕ್ಷೇತ್ರಕ್ಕೆ ಬಂದಿದ್ದು ಬೆಳಿಗ್ಗೆ 10.30 ಕ್ಕೆ ಪಲ್ಲ ಪೂಜೆ ನೆರವೇರಿಸಿ 11 ರಿಂದಲೇ ಮಹಾ ಅನ್ನಸಂತರ್ಪಣೆ ಆರಂಭವಾಯಿತು. ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಹಾಗೂ ಶಾರದಾ ಮಾತೆಗೆ ಮಹಾ ಮಂಗಳಾರತಿ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ರಾಘವೇಂದ್ರ ತಂತ್ರಿ […]

ಅ.26 ರಿಂದ ಭಾರತ-ಚೀನಾ ನೇರ ವಿಮಾನಯಾನ ಪುನರಾರಂಭ; ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ.

ನವದೆಹಲಿ: ಭಾರತ ಮತ್ತು ಚೀನಾ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸೇವೆ ಅಕ್ಟೋಬರ್ 26 ರಿಂದ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಸಮ್ಮತಿಸಿವೆ. ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು […]

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 3,705 ಕೋಟಿ ರೂ ತೆರಿಗೆ ಬಿಡುಗಡೆ.

ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ […]