ಇಂದಿನಿಂದ ಎಲ್ಲಾ ಬ್ಯಾಂಕ್ ಗಳಲ್ಲಿ ಒಂದೇ ದಿನದಲ್ಲಿ ಚೆಕ್ ಕ್ಲಿಯರ್: ಆರ್ ಬಿಐ

ಮುಂಬಯಿ: ತ್ವರಿತ ಹಾಗೂ ಹೆಚ್ಚು ಸುರಕ್ಷಿತ ಎಲ್ಲ ಬ್ಯಾಂಕ್‌ಗಳು ಆ.4ರಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರ್ ಮಾಡಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೇಳಿದೆ. ಚೆಕ್ ಬೌನ್ಸ್ ಆಗುವುದನ್ನು ತಡೆಗಟ್ಟಲು ಹಾಗೂ ವಿಳಂಬ ಅಥವಾ ನಿರಾಕರಣೆಗಳನ್ನು ತಪ್ಪಿಸಲು ಈ ಹೊಸ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಖಾತೆದಾರರು 50,000 ರೂ.ಗಿಂತ ಹೆಚ್ಚಿನ ಚೆಕ್‌ಗಳನ್ನು ಠೇವಣಿ ಮಾಡುವ ಖಾತೆ ಸಂಖ್ಯೆ, ಚೆಕ್ ಸಂಖ್ಯೆ, ದಿನಾಂಕ, ಮೊತ್ತ ಮತ್ತು ಫಲಾನುಭವಿಯ ಹೆಸರನ್ನು ಬ್ಯಾಂಕಿಗೆ ಒದಗಿಸಬೇಕು. ಎಲ್ಲಾ ವಿವರಗಳು ಸರಿಯಿದ್ದರೆ ಬ್ಯಾಂಕ್‌ಗಳು […]
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ; ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

ಬೆಂಗಳೂರು: 2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಪ್ರಕಟಗೊಂಡಿದ್ದು, ರಕ್ಷಿತ್ ಶೆಟ್ಟಿ ಅವರು ‘ಚಾರ್ಲಿ 777’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಅರ್ಚನಾ ಜೋಯಿಸ್ ‘ಮ್ಯೂಟ್’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಿವಂಗತ ಪುನೀತ್ ರಾಜ್‌ಕುಮಾರ್ ನಟನೆಯ ‘ಯುವರತ್ನ’ ಅತ್ಯುತ್ತಮ ಮನೋರಂಜನಾ ಚಿತ್ರ ಎಂಬ ಹಿರಿಮೆಗೆ ಪಾತ್ರವಾಗಿದೆ. ರಘು ಕೆ.ಎಂ. ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಮೊದಲನೇ ಅತ್ಯುತ್ತಮ ಚಿತ್ರವಾಗಿದ್ದು, ಕಿರಣ್ ರಾಜ್ ನಿರ್ದೇಶನದ ‘ಚಾರ್ಲಿ 777’ ಎರಡನೇ ಅತ್ಯುತ್ತಮ ಚಿತ್ರವಾಗಿ […]
ಪುತ್ತೂರಿನಲ್ಲಿ ಭಗವತಿ ಯಕ್ಷ ಕಲಾ ಬಳಗದ ಯಕ್ಷ ನವಮಿ ಸಮಾರೋಪ

ಉಡುಪಿ: ನಮ್ಮ ದೇಶದ ಎಲ್ಲಾ ಕಲೆಗಳು ಪೌರಾಣಿಕ ಹಿನ್ನಲೆಯನ್ನು ಪಡೆದುಕೊಂಡಿವೆ, ನಮ್ಮ ಪುರಾಣದ ಕಥೆಗಳು ಇದಕ್ಕೆ ಉದಾಹರಣೆ. ನಮ್ಮ ಹಿರಿಯರು ಪೌರಾಣಿಕ ಪ್ರಸಂಗಗಳನ್ನು ಕಲಿತಿರುವುದೇ ಈ ಯಕ್ಷಗಾನದಿಂದಾಗಿ. ಹೀಗಾಗಿ ಅಂದು ನರಹರಿ ತೀರ್ಥರಿಂದ ಆರಂಭಗೊoಡಿದೆ ಎನ್ನಲಾದ ಈ ಯಕ್ಷಗಾನವನ್ನು ಉಳಿಸಿ ಬೆಳೆಸುವ ಆವಶ್ಯಕತೆಯಿದೆ ಎಂದು ಅದಮಾರು ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಅವರು ಗುರುವಾರ ಉಡುಪಿ ಪುತ್ತೂರಿನ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶ್ರೀ ಭಗವತಿ ಯಕ್ಷ ಕಲಾ ಬಳಗದ ವತಿಯಿಂದ ನವರಾತ್ರಿ ಮಹೋತ್ಸವದ ಪ್ರಯುಕ್ತ […]
ಅಲೆವೂರಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ; ಅಪಾರ ನಷ್ಟ

ಉಡುಪಿ: ಅಲೆವೂರು ಗ್ರಾಮದ ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಆಕಸ್ಮಿಕವಾಗಿ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ಅಗ್ನಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಘಟಕದೊಳಗಿದ್ದ ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಗೆ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಇದು ಉಡುಪಿ ನಗರಸಭೆಗೆ ಸೇರಿದ ತ್ಯಾಜ್ಯ ವಿಲೇವಾರಿ ಘಟಕವಾಗಿದ್ದು, ಕಸ […]
ಧರ್ಮಸ್ಥಳದ ಮೇಲೆ ವೈಚಾರಿಕ ಆಕ್ರಮಣ ನಡೆದಿದೆ- ಬಿ.ಎಲ್. ಸಂತೋಷ್

ಉಡುಪಿ: ಧರ್ಮಸ್ಥಳದ ಮೇಲೆ ವೈಚಾರಿಕ ಆಕ್ರಮಣ ನಡೆದಿದೆ. ಮೂರು ವರ್ಷದ ಹಿಂದೆ ಉಡುಪಿ ಕೃಷ್ಣಮಠದ ಮೇಲೂ ಆಕ್ರಮಣ ನಡೆದಿತ್ತು, ಸ್ವಲ್ಪ ದಿನದಲ್ಲಿ ಮೂಡುಬಿದರೆ ಮೇಲೆ ಆಕ್ರಮಣ ನಡೆಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದರು. ಬಿಜೆಪಿ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಗಮನಸೆಳೆದಿದ್ದ ಧರ್ಮಸ್ಥಳ ಗ್ರಾಮದ ಶವಹೂತ ಪ್ರಕರಣದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದರು. ಹುಲಿಗೆ ರಕ್ತದ ರುಚಿ ಸಿಕ್ಕಿದೆ. ವೈಚಾರಿಕ ರಾಜಕೀಯದ ಮೂಲಕ ಶಬರಿಮಲೆಯಲ್ಲಿ ಸ್ವಲ್ಪ ರಕ್ತದ […]