ಕಾರ್ಕಳ: ಮಗಳನ್ನೇ ಕ್ಷುಲ್ಲಕ ಕಾರಣಕ್ಕೆ ಹತ್ಯೆಗೈದ ತಾಯಿ!

ಉಡುಪಿ: ತಾಯಿಯೋರ್ವಳು ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ. 17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಸೆ. 20ರಂದು ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದು ಅದಕ್ಕೆ ತಾಯಿ ಗುಲ್ಝಾರ್ ಬಾನು (45) ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್‌ಳನ್ನು ಹತ್ಯೆ ಮಾಡಲಾಗಿದೆ.ಶಿಫನಾಜ್ ಸೆ. 20ರಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ […]

ಉಡುಪಿ:ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆರಾಧನಾ ರಂಗಪೂಜೆ, ಪಲ್ಲಕಿ ಉತ್ಸವ

ಉಡುಪಿ: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವಿಜಯ ದಶಮಿಯಂದು ಬಲಿ ಉತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇ|ಮೂ| ಸರ್ವೇಶ ತಂತ್ರಿಗಳ ತಂತ್ರತ್ವದಲ್ಲಿ, ವೇ|ಮೂ| ವಿಖ್ಯಾತ್ ಭಟ್ ನೇತೃತ್ವದಲ್ಲಿ ಪುರೋಹಿತ ಗಣೇಶ್ ಸರಳಾಯರ ಸಹಕಾರದಲ್ಲಿ ನೆರವೇರಿತು. ಸಂಜೆ ಬಲಿ ಉತ್ಸವ, ರಂಗಪೂಜಾ ಮಹೋತ್ಸವ, ಮಹಾಮಂತ್ರಾಕ್ಷತೆ ನೆರವೇರಿತು. ಉತ್ಸವದಲ್ಲಿ ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸುತ್ತು ಆಕರ್ಷಣೆಯಾಗಿತ್ತು. ಪಲ್ಲಕಿ ಉತ್ಸವ, ವಸಂತ ಪೂಜೆ ನಡೆಯಿತು. ವಸಂತ ಪೂಜೆಯಲ್ಲಿ ಸಮರ್ಪಿಸುವ ಅಷ್ಟಾವಧಾನದಲ್ಲಿ ವೇ|ಮೂ| […]