85 ಕ್ರೀಡಾ ಮೂಲಸೌಕರ್ಯ ನಿರ್ಮಾಣ; ಕರ್ನಾಟಕದಲ್ಲಿ ಮೈಲಿಗಲ್ಲು ಸಾಧಿಸಿದ ಗ್ಯಾಲಂಟ್ ಸ್ಪೋರ್ಟ್ಸ್

ಬೆಂಗಳೂರು: ಗ್ಯಾಲಂಟ್ ಸ್ಪೋರ್ಟ್ಸ್ ಕರ್ನಾಟಕದಲ್ಲಿ 85 ವಿಶ್ವಮಟ್ಟದ ಕ್ರೀಡಾ ಮೂಲಸೌಕರ್ಯ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಫುಟ್‌ಬಾಲ್, ಕ್ರಿಕೆಟ್ ಹಾಗೂ ಮಲ್ಟಿ-ಸ್ಪೋರ್ಟ್ ಕೋರ್ಟ್‌ಗಳನ್ನು ಒಳಗೊಂಡಿರುವ ಈ ಯೋಜನೆಗಳು ಕ್ರೈಸ್ಟ್ ಯೂನಿವರ್ಸಿಟಿ, ಅಜೀಮ್ ಪ್ರೇಮ್ಜಿ ಯೂನಿವರ್ಸಿಟಿ, ಆರ್ಮಿ ಪಬ್ಲಿಕ್ ಸ್ಕೂಲ್, ಬೆಂಗಳೂರು ಇಂಟರ್‌ನ್ಯಾಷನಲ್ ಸ್ಕೂಲ್ ಸೇರಿದಂತೆ ಹಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಅಳವಡಿಸಲಾಗಿದೆ. “ಕರ್ನಾಟಕವು ಸದಾ ಭಾರತದ ಕ್ರೀಡಾ ಮುಂಚೂಣಿಯಲ್ಲಿದ್ದು, ಯುವ ಪ್ರತಿಭೆಗಳು ದೊಡ್ಡ ಕನಸು ಕಾಣಲು ಮತ್ತು ಸಾಧಿಸಲು ವಿಶ್ವಮಟ್ಟದ ಸೌಲಭ್ಯ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಗ್ಯಾಲಂಟ್ ಸ್ಪೋರ್ಟ್ಸ್ […]
ಕುಂದಾಪುರ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ; ಆರೋಪಿ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ನಿವಾಸಿ ಆನಂದ(26) ಬಂಧಿತ ಆರೋಪಿ. ಸುಮಾರು 18 ಗ್ರಾಂ ತೂಕದ ಅಂದಾಜು 1,45,000 ರೂ. ಮೌಲ್ಯದ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿತ್ತು. ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ ಕುಮಾರ್ ಆರ್ ನೇತೃತ್ವದಲ್ಲಿ ಕಳ್ಳನನ್ನು ಬಂಧಿಸಿ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ

ಮಂಗಳೂರು:ಎಂ.ಸಿ.ಸಿ. ಬ್ಯಾಂಕಿನ ೨೧ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್‌ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು.ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನುಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್‌ಒ ಮತ್ತುತೊಟ್ಟಂ ಚರ್ಚ್ನ ಧರ್ಮಗುರು ರೆ.ಫಾ.ಡೆನಿಸ್ ಡೆಸಾ ಅವರುಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಎಟಿಎಂನಿಂದ […]
ಉಡುಪಿ:ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ ನೇ ಸಾಲಿಗೆ ಭಾರತ ಸರಕಾರದ ಶಾಸನಬದ್ದ ವಿಶ್ವ ವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಎಚ್.ಡಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ ಪಿ.ಎಚ್.ಡಿ ೩ ವರ್ಷ ಅವಧಿಗೆ ಫೆಲೋಶಿಪ್ ಮೂಲಕ ನೀಡಲಾಗುತ್ತಿದ್ದು ,ರಾಜ್ಯದ ನಿವಾಸಿಯಾಗಿರುವ ೩೫ ವರ್ಷ ವಯಸ್ಸಿನೊಳಗಿನ ಅರ್ಹ ಅಭ್ಯರ್ಥಿಗಳು ನವಂಬರ್ ೩೦ ರ ಒಳಗಾಗಿ ಸೇವಾ ಸಿಂಧು ತಂತ್ರಾಶ https://sevasindhu.karnataka.gov.in/sevasindhu/departmentservice ನಲ್ಲಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ 8277799990 ಅಥವಾ […]
ಉಡುಪಿ:ಜಲ್ ಜೀವನ್ ಮಿಷನ್ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಪ್ರತೀಕ್ ಬಾಯಲ್

ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ್ ಜೀವನ್ ಮಿಷನ್ಯೋಜನೆಯಡಿ ನಿಗದಿಯಾಗಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಪ್ರತಿ ಮನೆಗೂನೀರಿನ ಸಂಪರ್ಕ ಒದಗಿಸಿ ಶೇ 100 ರಷ್ಟು ಪ್ರಗತಿ ದಾಖಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಹೇಳಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲ್ಲಿ ನಡೆದ ಕುಡಿಯುವ ನೀರಿನ ಗುಣಮಟ್ಟ ಮೇಲ್ವಿಚಾರಣೆಯ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಕಳ […]