ರಾಜ್ಯದ್ಯಂತ ಗ್ರಾಹಕರಿಗೆ ಪ್ರತಿ ದಿನ 96,000 ಲೀಟರ್ ಸಮೃದ್ಧಿ ಹಾಲು ಪೂರೈಕೆ: ಕೆಎಂಎಫ್

ಬೆಂಗಳೂರು: ರಾಜ್ಯದಾದ್ಯಂತ ಪ್ರತಿದಿನ 96 ಸಾವಿರ ಲೀಟರ್‌ ನಂದಿನಿ ಸಮೃದ್ಧಿ ಹಾಲನ್ನು (ಫುಲ್ ಕ್ರೀಮ್) ಗ್ರಾಹಕರಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಕೆಎಂಎಫ್‌ ಮೂಲಗಳು ಹೇಳಿವೆ. ‘ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಭಾಗಗಳಲ್ಲಿ ನಿತ್ಯ 40 ಸಾವಿರ ಲೀಟರ್‌ ನಂದಿನಿ ಸಮೃದ್ಧಿ ಹಾಲು ಮಾರಾಟ ಮಾಡಲಾಗುತ್ತಿದೆ. ತಾಂತ್ರಿಕ ಕಾರಣಗಳಿಂದ ನಗರದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಸಮಸ್ಯೆ ಎದುರಾಗಿದೆ. ಗ್ರಾಹಕರ ಬೇಡಿಕೆಗೆ ತಕ್ಕಂತೆ ಸಮೃದ್ಧಿ ಹಾಲನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕೆಎಂಎಫ್‌ ಮೂಲಗಳು ತಿಳಿಸಿವೆ. […]

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು.

ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ‌ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು.ಮೇ 27ರಂದು ಪುತ್ತೂರಿನ ಹೊರವಲಯದ ಮುರ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿತ್ತು. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪುತ್ತೂರು ಪೇಟೆಯಿಂದ ತಮ್ಮ ತಂದೆ ಈಶ್ವ‌ರ್ ಭಟ್ ಅವರ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ, ಪಡ್ನರಿಗೆ ತಿರುಗುವ ಒಳರಸ್ತೆಯಲ್ಲಿ ಈ […]

ಉಡುಪಿಯ ಪ್ರತಿಷ್ಠಿತ ಚಂದು ಎಂಟರ್ಪ್ರೈಸಸ್ ಡಿಸ್ಟ್ರಿಬ್ಯೂಷನ್ ಸಂಸ್ಥೆಗೆ ಡ್ರೈವರ್ ಬೇಕಾಗಿದ್ದಾರೆ.

ಉಡುಪಿ:ಪ್ರತಿಷ್ಠಿತ ಚಂದು ಎಂಟರ್ಪ್ರೈಸಸ್ ಡಿಸ್ಟ್ರಿಬ್ಯೂಷನ್ ಸಂಸ್ಥೆಗೆ ನುರಿತ ಡ್ರೈವರ್ ನ ಅವಶ್ಯಕತೆ ಇದೆ. ಉತ್ತಮ ಸಂಬಳ ವಸತಿಯ ಸೌಲಭ್ಯವಿದೆ. ಆಸಕ್ತರಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ: 7349000157

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ.

ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಟಾಸ್ಕ್ ಪೂರ್ಣಗೊಳಿಸುವ ಕೆಲಸ ನೀಡಿ ಸುಮಾರು 16.06 ಲಕ್ಷ ರೂ ಮೋಸ ಮಾಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ವರ್ಕ್ ಫ್ರಂ ಹೋಮ್ ಜಾಹೀರಾತು ನೋಡಿದೆ. ಬಳಿಕ ಆ ಲಿಂಕ್‌ಗೆ ಕ್ಲಿಕ್ ಮಾಡಿದೆ. ಬಳಿಕ ವಾಟ್ಸ್ ಆ್ಯಪ್‌ನಿಂದ ಹೆಚ್‌ಆರ್ ಅಸಿಸ್ಟೆಂಟ್ ಎನ್ನುವ ಹೆಸರಿನಲ್ಲಿ ಮೆಸೇಜ್‌ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿ ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್ ಪರೀಶೀಲಿಸಿ 5 ಸ್ಟಾರ್ ನೀಡುವ ಕೆಲಸವನ್ನು ಕೊಟ್ಟಿದ್ದ. ನಂತರ […]

ಸುರತ್ಕಲ್ ಯಕ್ಷ ಅಭಿಮಾನಿ ಬಳಗದ ದಶಮಾನೋತ್ಸವ ಸಂಭ್ರಮಾಚರಣೆ ಉದ್ಘಾಟನೆ: ಸಂಘಟನೆಗಳಿಂದಾಗಿ ಯಕ್ಷಗಾನದ ಭವಿಷ್ಯ ಭದ್ರ; ಡಾ.ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಯಕ್ಷಗಾನ ಸಂಘಟನೆಯೊoದು ದಶಮಾನೋತ್ಸವವನ್ನು ಪೂರೈಸುತ್ತಿರುವುದು ಅಭಿಮಾನದ ಸಂಗತಿ. ಇಂದು ಮಹಿಳಾ ಯಕ್ಷಗಾನ ಸಂಘಟನೆಗಳು, ಮಕ್ಕಳ ಯಕ್ಷಗಾನ ಮೇಳ ಸೇರಿದಂತೆ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿವೆ. ಈ ಸಂಘಟನೆಗಳಿoದಾಗಿಯೇ ಯಕ್ಷಗಾನ ಕಲೆಯ ಭವಿಷ್ಯ ಭದ್ರವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್‌ನ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ಅ.4 ರಂದು (ಶನಿವಾರ) ನಡೆದ ಯಕ್ಷ ಅಭಿಮಾನಿ ಬಳಗ ಟ್ರಸ್ಟ್ […]