ಮಣಿಪಾಲ: ಗಾಂಜ ಮಾರಾಟ; ಆಂಧ್ರ ಮೂಲದ ಯುವಕನ ಬಂಧನ.

ಉಡುಪಿ : ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಡಗಬೆಟ್ಟು ಗ್ರಾಮದ ರಾಜೀವನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ 08/10/2025 ರಂದು ಸಂಜೆ 7 ಗಂಟೆಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಮಣಿಪಾಲ ಪೊಲೀಸ್ ಉಪನಿರೀಕ್ಷಕಿ ಅಕ್ಷಯಕುಮಾರಿ ಎಸ್.ಎನ್. ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಸೀತಾರಾಮ ರೆಡ್ಡಿ ತೌಟರೆಡ್ಡಿ (21) ಎಂಬ ವ್ಯಕ್ತಿಯನ್ನು ಬಂಧಿಸಿದರು. ಆರೋಪಿ ಮೇಘಾಲಯದಿಂದ ಆನ್‌ಲೈನ್ ಆಪ್ (ರೆಡಿಟ್) ಮುಖಾಂತರ ಗಾಂಜಾ ಖರೀದಿ ಮಾಡಿ ಅಂಚೆ […]
ಅ.11-12ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2025”

ಉಡುಪಿ: ಕೆನರಾ ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಕೆನರಾ ರಿಟೈಲ್ ಮೇಳ-2025” ಅನ್ನು ಇದೇ ಅ.11ಮತ್ತು 12ರಂದು ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್ ಮಣಿಪಾಲ ಸರ್ಕಲ್ ಕಚೇರಿಯ ಜನರಲ್ ಮ್ಯಾನೇಜರ್ ಎಚ್.ಕೆ. ಗಂಗಾಧರ್ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡು ದಿನಗಳ ಮೇಳವು ಬೆಳಿಗ್ಗೆ 9.30ರಿಂದ ಸಂಜೆ 6.30ರ ವರೆಗೆ ನಡೆಯಲಿದೆ. ಈ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಪ್ರವೇಶ ಶುಲ್ಕ […]
ಬ್ರಹ್ಮಾವರ: ಅ.11- 12ರಂದು “ಕೃಷಿ ಮೇಳ-2025”

ಉಡುಪಿ: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಗಳಾದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇದೇ ಅ.11 ಮತ್ತು 12ರಂದು ಎರಡು ದಿನಗಳ “ಕೃಷಿ ಮೇಳ-2025″ ಕಾರ್ಯಕ್ರಮವನ್ನು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ವಿ. […]
ಶೀರೂರು ಪರ್ಯಾಯ ಭಕ್ತರ ಪರ್ಯಾಯ: ಡಾ.ಸರಳತ್ತಾಯ

ಉಡುಪಿ: ಭಗವಾನ್ ಕೃಷ್ಣ ಎಲ್ಲರ ಮನೆ ಮನದ ಮಗು. ಎಲ್ಲರಿಗೂ ಆಪ್ತ. ಆತನಿಗೆ ಸಮರ್ಪಿಸುವ ಎಲ್ಲಾ ಕಾಣಿಕೆ ಎಲ್ಲೂ ಹೋಗದೆ ಮನೆಯ ಮಗುವಿನ ಏಳ್ಗೆಗೆ ಕಾರಣವಾಗುತ್ತದೆ. ಹೊರೆಕಾಣಿಕೆಯೂ ಇದಕ್ಕೆ ಹೊರತಾಗಿಲ್ಲ. ಶೀರೂರು ಪರ್ಯಾಯ ಅದು ಭಕ್ತರ ಪರ್ಯಾಯ ಎಂದು ಭಾವೀ ಪರ್ಯಾಯ ಮಠದ ದಿವಾನ ಡಾ.ಉದಯಕುಮಾರ ಸರಳತ್ತಾಯ ಹೇಳಿದರು. ಅವರು ಪರ್ಯಾಯ ಪೂರ್ವಬಾವೀ ಹೊರಕಾಣಿಕೆ-ಸಾಂಸ್ಕೃತಿಕ ಹಾಗೂ ಪ್ರಚಾರ ಕುರಿತಾದ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತಾಡಿದರು.ಉಡುಪಿಯ ಕೃಷ್ಣನದ್ದು ಬಾಲರೂಪ. ಶೀರೂರು ಮಠಾಧೀಶರು ಅದೇ ವಯೋಮಾನದವರು. ಶೀರೂರು ಮಠವೆಂದರೆ ಹಿಂದಿನಿಂದಲೂ […]
ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರ ಸಂಘ ನಿ.: ದಶಮಾನೋತ್ಸವ ಸಂಭ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಲ್ತಾನ್ ಬತ್ತೇರಿಯ ಬೋಳೂರು ಬೇನಲ್ಲಿ ಶನಿವಾರ ರಾತ್ರಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು, ಸಮಾಜದ ಎಲ್ಲ ಕ್ಷೇತ್ರದಲ್ಲಿ ಛಾಯಾಚಿತ್ರಗ್ರಾಹಕರು ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಹಲವು ಘಟನೆಗಳನ್ನು ಅವರು ಸ್ಮರಣೀಯಗೊಳಿಸಿದ್ದಾರೆ ಎಂದರು. ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ ಛಾಯಾಗ್ರಾಹಕರ ಕಾರ್ಯ ಅಭಿನಂದನೀಯ. ಸಮಾಜದಲ್ಲಿ […]