ಉಡುಪಿ:ಕೋಡಿ-ಬೆಂಗ್ರೇ ಹಂಗಾರಕಟ್ಟೆ ಬಾರ್ಜ್ ಲೋಕಾರ್ಪಣೆ

ಉಡುಪಿ: ಸುಮಾರು 2,05,78,040 ರೂ ವೆಚ್ಚದಲ್ಲಿ ಕೋಡಿ- ಬೆಂಗ್ರೇ ಹಂಗಾರಕಟ್ಟೆ ನದಿಯ ನಡುವೆ ಸಂಪರ್ಕ ಕಲ್ಪಿಸುವ ಮದ್ಯಮ ಗಾತ್ರದ ಹೊಸ ಬಾರ್ಜ್ ಕಾವೇರಿ ಅನ್ನು ಲೋಕಾರ್ಪಣೆ ಗೊಳಿಸಲಾಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ ವೈದ್ಯ ಬಾರ್ಜ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಕೋಡಿ ಬೆಂಗ್ರೆಯಿಂದ ಹಂಗಾರಕಟ್ಟೆಗೆ ಸ್ಥಳೀಯ ಜನರು ಹಾಗೂ ಪ್ರವಾಸಕ್ಕೆಂದು ಆಗಮಿಸಿರುವ ಪ್ರಾವಸಿಗರಿಗೂ ಸಹ ಕಡಿಮೆ ಅವಧಿಯಲ್ಲಿ ಪ್ರಯಾಣ ಬೆಳಸಲು ಅನುಕೂಲವಾಗಲಿದೆ. ಬಾರ್ಜ್ ಇಲ್ಲದಿದ್ದಲ್ಲಿ ರಸ್ತೆ ಮೂಲಕ ಸುತ್ತುವರಿದು ಹೋಗಬೇಕಿತ್ತು ಎಂದ […]

ಉಡುಪಿ:ಅ.10 ರಂದು ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಉಡುಪಿ: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ಕಾರ್ಡ್ ವಿತರಣೆಯನ್ನು ಅ.10 ರಂದು 11 ಗಂಟೆಗೆ ಉಡುಪಿ ನಗರದ ಆರೂರು ಲಕ್ಮೀನಾರಾಯಣ್ ರಾವ್ ಸ್ಮಾರಕ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಉಡುಪಿ […]

ಉಡುಪಿ:ಮೀನುಗಾರಿಕಾ ಚಟುವಟಿಕೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಬದ್ದವಾಗಿದೆ: ಮಾಂಕಾಳ ವೈದ್ಯ

ಉಡುಪಿ: ಮೀನುಗಾರರು ಮೀನುಗಾರಿಕಾ ಚಟುವಟಿಕೆಗಳನ್ನು ಉತ್ತಮ ರೀತಿಯಲ್ಲಿ ಕೈಗೊಳ್ಳಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ದವಾಗಿದೆ. ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಅನುದಾನವನ್ನು ಸರ್ಕಾರವು ಕಲ್ಪಿಸಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಾಂಕಾಳ ವೈದ್ಯ ತಿಳಿಸಿದರು. ಅವರು ಮಲ್ಪೆಯ ಮೀನುಗಾರಿಕಾ ಬಂದರು ಆವರಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಮಲ್ಪೆ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಮೀನುಗಾರಿಕೆ ಸೇರಿದಂತೆ ಅದಕ್ಕೆ […]

ಹೈಕೋರ್ಟ್‌ ಆದೇಶ ಉಲ್ಲಂಘನೆ: ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ ವೆಲ್‌ಗೆ 2 ಲಕ್ಷ ರೂ. ದಂಡ

ಚಿತ್ರದುರ್ಗ: ಹೈಕೋರ್ಟ್‌ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್‌ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್​​ವೆಲ್​​ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್​​ವೆಲ್​​ […]

ಉಡುಪಿ:ಕರ್ನಾಟಕ ಮತ್ತು ಗೋವಾದ ನೇವಲ್ ಎನ್ ಸಿಸಿ ಕೆಡೆಟ್ ಗಳ ಸಾಗರ ನೌಕಾಯಾನ ದಂಡಯಾತ್ರೆ ‘ಮೆನು’ಗೆ ಹಸಿರು ನಿಶಾನೆ

ಉಡುಪಿ: ನಾಟಿಕಲ್ ಮಹತ್ವಾಕಾಂಕ್ಷೆ ಮತ್ತು ಯುವ ಸಂಕಲ್ಪದ ರೋಮಾಂಚಕ ಪ್ರದರ್ಶನದಲ್ಲಿ, ಕರ್ನಾಟಕ ಮತ್ತುಗೋವಾದ 72 ನೌಕಾಪಡೆಯ ಎನ್ಸಿಸಿ ಕೆಡೆಟ್ಗಳು ಅಪೇಕ್ಷಣೀಯ ಅಖಿಲ ಭಾರತ “ಸಾಗರ ನೌಕಾಯಾನ ದಂಡಯಾತ್ರೆ – ಮೆನು (ಅತ್ಯಂತಉದ್ಯಮಶೀಲ ನೌಕಾ ಘಟಕ) 2025″ ಟ್ರೋಫಿಗಾಗಿ ಸ್ಪರ್ಧಿಸುವ ಮೂಲಕ ನದಿ ಮತ್ತು ಸಾಗರ ನೌಕಾಯಾನ ದಂಡಯಾತ್ರೆಯನ್ನುಕೈಗೊಂಡಿದ್ದಾರೆ. ಶಿಬಿರದ ಎರಡನೇ ದಿನದಂದು, ಉಡುಪಿಯ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ಅವರು ಮುಖ್ಯ ಅತಿಥಿಯಾಗಿ ಈ ದಂಡಯಾತ್ರೆಗೆಔಪಚಾರಿಕವಾಗಿ ಚಾಲನೆ ನೀಡಿದರು, ಅವರನ್ನು ಕ್ಯಾಂಪ್ ಕಮಾಂಡೆಂಟ್ ಕಮಾಂಡರ್ ಅಶ್ವಿನ್ ಎಂ […]