ವಿಶ್ವ ದೃಷ್ಟಿ ದಿನ 2025:ವಿಶ್ವ ದೃಷ್ಟಿ ದಿನದ ಇತಿಹಾಸ, ಮಹತ್ವದ ಕುರಿತ ಮಾಹಿತಿ ಇಲ್ಲಿದೆ

ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರವನ್ನು ವಿಶ್ವ ದೃಷ್ಟಿ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷ ಅಂದರೆ 2025ರಲ್ಲಿ ಅಕ್ಟೋಬರ್ 9ರಂದು ಈ ದಿನವನ್ನು ಆಚರಿಸಲಾಗುತ್ತಿದೆ. ದೃಷ್ಟಿದೋಷ ಮತ್ತು ಕುರುಡುತನದ ಬಗ್ಗೆ ಜಾಗೃತಿ ಮೂಡಿಸುವುದು, ಕಣ್ಣಿನ ಆರೋಗ್ಯದ ಮಹತ್ವವನ್ನು ತಿಳಿಸುವುದು ಈ ದಿನದ ಉದ್ದೇಶವಾಗಿದೆ. 2025ರ ಧ್ಯೇಯವಾಕ್ಯ: ನಿಮ್ಮ ಕಣ್ಣುಗಳನ್ನು ಪ್ರೀತಿಸಿ (#LoveYourEyes)ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಕುರುಡುತನ ನಿವಾರಣಾ ಸಂಸ್ಥೆ (IAPB) “ನಿಮ್ಮ ಕಣ್ಣುಗಳನ್ನು ಪ್ರೀತಿಸಿ” ಎಂಬ ಧ್ಯೇಯವಾಕ್ಯವನ್ನು ಪ್ರಚಾರ ಮಾಡುತ್ತಿದೆ. […]