ಪೆರ್ಡೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಯಜ್ಞ ಮಹಾಪೂಜೆ, ಹಾಗೂ 33ನೇ ವಾರ್ಷಿಕ ಮಹಾಸಭೆ

ಹೆಬ್ರಿ: ಪೆರ್ಡೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ರೂ.10 ಲಕ್ಷ ಅನುದಾನ ಒದಗಿಸುತ್ತೇನೆ. ಸಂಘ ಸಂಸ್ಥೆಗಳು ಸಮಾಜದ ದೀನ ದುರ್ಬಲರ ಕಣ್ಣೀರು ಒರೆಸುವ ಕೆಲಸ ಮಾಡಬೇಕು’ ಎಂದು ಶಾಸಕ ಗುರ್ಮೆ ಸುರೇಶ ಶೆಟ್ಟಿ ಹೇಳಿದರು. ಪೆರ್ಡೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ನೂತನ ಸಮುದಾಯ ಭವನದಲ್ಲಿ ಭಾನುವಾರ ನಡೆದ ವಿಶ್ವಕರ್ಮ ಯಜ್ಞ ಮಹಾಪೂಜೆ, 33ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಮುಖಂಡ ವಿನಯ ಕುಮಾರ್ ಸೊರಕೆ, ಸಂಘದ ಕಾರ್ಯಚಟುವಟಿಕೆಗಳ […]

ಅ.12 ರಂದು ಪರ್ಕಳದ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಟ್ಟಡ “ಶ್ರೀ ದುರ್ಗಾ ಸಹಕಾರ ಸೌಧ” ಉದ್ಘಾಟನೆ.

ಪರ್ಕಳ: ಪರ್ಕಳದ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಸಂಘವು ಪರ್ಕಳ ರಾಷ್ಟ್ರೀಯ ಹೆದ್ದಾರಿ ಪಾರ್ಶ್ವದಲ್ಲಿ ನಿರ್ಮಿಸಿದ ನೂತನ ಕಟ್ಟಡ ಶ್ರೀ ದುರ್ಗಾ ಸಹಕಾರ ಸೌಧ ಅ 12 ರಂದು ಉದ್ಘಾಟನೆ ಬೆಳಿಗ್ಗೆ 10:30 ಉದ್ಘಾಟನೆಯ ನಂತರ ಸಭಾಕಾರ್ಯಕ್ರಮ ಪರ್ಕಳ ಹೈಸ್ಕೂಲು ಕ್ರೀಡಾ೦ಗಣದಲ್ಲಿ ನಡೆಯಲಿದೆ. ಸಹಕಾರ ರತ್ನ ಡಾ। ಎಮ್.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಅಶೋಕ್ ಕಾಮತ್ ಕೊಡಂಗೆ ಅಧ್ಯಕ್ಷರು, ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಪರ್ಕಳ ಇವರು ವಹಿಸಲಿದ್ದಾರೆ. ಮುಖ್ಯ […]

ಉಡುಪಿ: ಜಾಮೀನು ಷರತ್ತು ಉಲ್ಲಂಘನೆ: ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು, ಜಾಮೀನು […]

ಕರ್ತವ್ಯ ಲೋಪ – ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ನೇಮಕಾತಿ ರದ್ದು

ಉಡುಪಿ: ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿ ಸೆ.29 ರಂದು ಸರಕಾರ ಆದೇಶ ಹೊರಡಿಸಿದೆ. ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಮತ್ತು ಪರ್ಯಾಯ ವ್ಯವಸ್ಥೆ ಮಾಡದೆ ನ್ಯಾಯಾಲಯದ ಕಲಾಪದಂದು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಜೊತೆಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ಇವರ ವಿರುದ್ದ ಜಾತಿ ನಿಂದನೆ […]

ಉಡುಪಿ:ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ:2025-26 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅ.9 ರಿಂದ 16 ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ udupi.nic.in ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಸಂಘದ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.