ಗ್ರೀನ್ ಕಾರಿಡಾರ್ ಮೂಲಕ ಶಿವಮೊಗ್ಗದ ಬಾಲಕಿ ಕೆಎಮ್ ಸಿ ಆಸ್ಪತ್ರೆಗೆ ದಾಖಲು

ಉಡುಪಿ: ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಶಿವಮೊಗ್ಗದ ಬಾಲಕಿಯನ್ನು ಗ್ರೀನ್ ಕಾರಿಡಾರ್ ಮೂಲಕ ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯಾಧಿಕಾರಿಗಳು ತುರ್ತು ಪರಿಸ್ಥಿತಿಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ರವಾನಿಸಲು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗಿತ್ತು. ಸುಮಾರು 200 ಕಿಲೋಮೀಟರ್ ದೂರದ ಪ್ರಯಾಣಕ್ಕೆ “ಗ್ರೀನ್ ಕಾರಿಡಾರ್” ರೂಪಿಸಲಾಯಿತು. ಈ ವೇಳೆ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಮಾರ್ಗದಲ್ಲಿನ ಸಂಚಾರವನ್ನು ನಿಯಂತ್ರಿಸಿ, ಅಂಬುಲೆನ್ಸ್‌ಗೆ […]
ಇಂದು (ಅ.12) ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಟ್ಟಡ “ಶ್ರೀ ದುರ್ಗಾ ಸಹಕಾರ ಸೌಧ” ಉದ್ಘಾಟನೆ.

ಪರ್ಕಳ: ಪರ್ಕಳದ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಸಂಘವು ಪರ್ಕಳ ರಾಷ್ಟ್ರೀಯ ಹೆದ್ದಾರಿ ಪಾರ್ಶ್ವದಲ್ಲಿ ನಿರ್ಮಿಸಿದ ನೂತನ ಕಟ್ಟಡ “ಶ್ರೀ ದುರ್ಗಾ ಸಹಕಾರ ಸೌಧ” ಇಂದು (ಅ 12) ಬೆಳಿಗ್ಗೆ 10:30 ಉದ್ಘಾಟನೆ, ನಂತರ ಸಭಾಕಾರ್ಯಕ್ರಮ ಪರ್ಕಳ ಹೈಸ್ಕೂಲು ಕ್ರೀಡಾಂಗಣದಲ್ಲಿ ನಡೆಯಲಿದೆ. ಸಹಕಾರ ರತ್ನ ಡಾ। ಎಮ್.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಅಶೋಕ್ ಕಾಮತ್ ಕೊಡಂಗೆ ಅಧ್ಯಕ್ಷರು, ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಪರ್ಕಳ ಇವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ […]
ಶಾಲೆ ಮುಗಿಸಿ ತೆರಳುತ್ತಿರುವಾಗ ಹೆಜ್ಜೇನು ದಾಳಿ; ಗಂಭೀರ ಗಾಯಗೊಂಡಿದ್ದ ಬಾಲಕಿ ಮೃತ್ಯು!

ಪುತ್ತೂರು: ಶಾಲೆ ಮುಗಿಸಿ ತೆರಳುತ್ತಿರುವಾಗ ಹೆಜ್ಜೇನು ದಾಳಿಯಿಂದ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಸೇಡಿಯಾಪು ಕೂಟೇಲು ಸಮೀಪ ನಡೆದಿದೆ. ಮೃತ ಬಾಲಕಿ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ(7). ಗಾಯಗೊಂಡವರು 5ನೇ ತರಗತಿ ಬಾಲಕಿ ಪ್ರತ್ಯೂಶ್ (10), ಸ್ಥಳೀಯ ನಿವಾಸಿ ನಾರಾಯಣ ಗೌಡ (55). ಅ.10ರಂದು ಸಂಜೆ ವಾಹನದಿಂದ ಇಳಿದು ನಡೆದು ಸಾಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು […]