ಉಡುಪಿ: ಮಲ್ಪೆ ಬೀಚ್’ನಲ್ಲಿ ಸಮುದ್ರದ ಅಲೆಯ ಸೆಳೆತಕ್ಕೆ ಸಿಲುಕಿ ವ್ಯಕ್ತಿ ಮೃತ್ಯು.

ಮಲ್ಪೆ: ಈಜಾಡುತ್ತಿದ್ದ ಪ್ರವಾಸಿಗರೊಬ್ಬರು ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ, ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ಅ.14ರಂದು ಸಂಜೆ ವೇಳೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಾರಸಂದ್ರದ ವೆಂಕಟಚಲ(40) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ರಾಮನಗರದಿಂದ ಮೂವರು ಪ್ರವಾಸಕ್ಕೆಂದು ಹೊರಟಿದ್ದು, ಬೆಳಗ್ಗೆ ಮರವಂತೆ ಬೀಚ್‌ಗೆ ತೆರಳಿ, ಸಂಜೆ ಮಲ್ಪೆ ಬೀಚ್‌ಗೆ ಬಂದಿದ್ದರು. ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದು ಇವರಲ್ಲಿ ವೆಂಕಟಚಲ ಈಜುತ್ತ ಮುಂದೆ ಹೋಗಿ ಅಲೆಗಳ ಸೆಳೆತಕ್ಕೆ ಸಿಲುಕಿ ನೀರು ಪಾಲಾದರು. ತತ್‌ಕ್ಷಣ […]
ಬೈಂದೂರು: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು.

ಉಡುಪಿ: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ಮಂಗಳವಾರ ಸಂಭವಿಸಿದೆ.ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15), ಆಶೀಶ್ (14) ನೀರು ಪಾಲಾಗಿದ್ದಾರೆ. ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ ಪಾರಾಗಿದ್ದಾನೆ. ನೀರುಪಾಲಾದ ಮೂವರ ಮೃತದೇಹ ಪತ್ತೆಯಾಗಿದೆ.
ನಾನು ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ

ಉಡುಪಿ: ನಾನು ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ. ದೈಹಿಕ ಕ್ಷಮತೆಯ ಕಾರಣದಿಂದ ನಾನು ಆಟದಿಂದ ದೂರು ಉಳಿಯುವುದು ಅಗತ್ಯವಾಗಿತ್ತು. ಆಟವಾಡುವ ಉತ್ಸಾಹ ಇದ್ದರೂ, ದೇಹ ಸ್ಪಂದಿಸುವುದಿಲ್ಲ ಎಂದು ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹ್ವಾಲ್ ಹೇಳಿದ್ದಾರೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಇಂದು ಅತ್ಯಾಧುನಿಕ ರೊಬೊಟಿಕ್ ಸರ್ಜರಿ ಸೌಲಭ್ಯದ ಉದ್ಘಾಟಿಸಿ, ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಚಿಂಗ್ ನೀಡುವ ಬಗ್ಗೆ ನನಗೆ ಆಸಕ್ತಿ ಇಲ್ಲ. ಹೈದರಾಬಾದ್ ನಲ್ಲಿ ಬ್ಯಾಡ್ಮಿಂಟನ್ ತರಬೇತಿ ನೀಡುವ ಅತ್ಯುತ್ತಮ ಅಕಾಡೆಮಿ ಇದೆ. ನನ್ನ […]
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಅತ್ಯಾಧುನಿಕ ರೊಬೊಟಿಕ್ ಸರ್ಜರಿ ಸೌಲಭ್ಯದ ಉದ್ಘಾಟನೆ: ಒಲಿಂಪಿಕ್ ಚಾಂಪಿಯನ್ ಸೈನಾ ನೆಹ್ವಾಲ್ ರಿಂದ ಅನಾವರಣ.

ಮಣಿಪಾಲ, ಅ.14: ಇಂದು ಉಡುಪಿ ಜಿಲ್ಲೆಯ ಆರೋಗ್ಯ ಕ್ಷೆತ್ರದಲ್ಲಿ ಒಂದು ಮೈಲಿಗಲ್ಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಇಂದು ತನ್ನ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಉದ್ಘಾಟಿಸಿತು, ಇದು ಈ ಪ್ರದೇಶದಲ್ಲಿ ಒಂದು ಪರಿವರ್ತನಾ ಅಧ್ಯಾಯವನ್ನು ಗುರುತಿಸುತ್ತದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯವನ್ನು ಒಲಿಂಪಿಕ್ ಬ್ಯಾಡ್ಮಿಂಟನ್ ಚಾಂಪಿಯನ್ ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿ ಸೈನಾ ನೆಹ್ವಾಲ್ ಅನಾವರಣಗೊಳಿಸಿದರು. ಶಸ್ತ್ರಚಿಕಿತ್ಸಾ ಆಂಕೊಲಾಜಿ, ಸಾಮಾನ್ಯ ಶಸ್ತ್ರಚಿಕಿತ್ಸೆ, ಜಿಐ ಶಸ್ತ್ರಚಿಕಿತ್ಸೆ, ಒಬಿಜಿ, ಮೂತ್ರಶಾಸ್ತ್ರ ಮತ್ತು ಮೊಣಕಾಲು ಹಾಗೂ ಕೀಲು ಬದಲಿ ಕಾರ್ಯವಿಧಾನಗಳಲ್ಲಿ ನಿಖರತೆಯನ್ನು […]
ರಾಜಕೀಯ ನಾಯಕರಲ್ಲಿ ನರೇಂದ್ರ ಮೋದಿ ನನ್ನ ನೆಚ್ಚಿನ ಮುಖಂಡ

ಉಡುಪಿ: ನನಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ನನಗೆ ಪುಟ್ಟ ಮಕ್ಕಳನ್ನು ಕ್ರೀಡೆಯುತ್ತ ಸೆಳೆಯುವುದರಲ್ಲಿ ಆಸಕ್ತಿ. ಬ್ಯಾಡ್ಮಿಂಟನ್ ನನ್ನ ಹೃದಯಕ್ಕೆ ತುಂಬಾ ಹತ್ತಿರದ ಕ್ರೀಡೆ ಯಾವತ್ತಾದರೂ ರಾಜಕೀಯದ ಬಗ್ಗೆ ಆಸಕ್ತಿ ಬಂದರೆ ನೋಡೋಣ ಎಂದು ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹ್ವಾಲ್ ಹೇಳಿದರು. ಮಣಿಪಾಲ ಕೆಎಂಸಿ ಟಿಎಂಎ ಪೈ ಹಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಉತ್ತರಿಸಿದ ಅವರು, ನನಗೆ ನರೇಂದ್ರ ಮೋದಿಯವರ ಚಿಂತನೆ ತುಂಬಾ ಇಷ್ಟ. ರಾಜಕೀಯ ನಾಯಕರಲ್ಲಿ ನರೇಂದ್ರ ಮೋದಿ ನನ್ನ ನೆಚ್ಚಿನ […]