ಮೂಡುಬಿದಿರೆ:ಆಳ್ವಾಸ್ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ‘ಸೈಬರ್ ಕ್ರೈಮ್, ಡ್ರಗ್ ಟ್ರಾಫಿಕಿಂಗ್ ಹಾಗೂ ಸೋಶಿಯಲ್ ಆ್ಯಂಡ್ ಲೀಗಲ್ ಇಂಪ್ಲಿಕೇಶನ್ಸ್’ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಸೋಮವಾರದಂದು ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿತ್ತು. ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ, ಐಪಿಎಸ್ ಮಾತನಾಡಿ, “ಸೈಬರ್ ಅಪರಾಧಗಳು ಇಂದು ಅತ್ಯಂತ ಸಂಕೀರ್ಣ ಹಾಗೂ ಕಾನೂನು ಜಾರಿಗೆ ಅತಿ ದೊಡ್ಡ ಸವಾಲಾಗಿ ಪರಿಣಮಿಸಿವೆ. ವಂಚಕರು ಈಗ ಅಸಲಿಯಂತೆ ಕಾಣುವ, ನಕಲಿ ಹೂಡಿಕೆ ವೆಬ್‌ಸೈಟ್ ಲಿಂಕ್‌ಗಳನ್ನು ಸೃಷ್ಟಿಸುತ್ತಿದ್ದಾರೆ. ಜನರು ಅವುಗಳ ಮೇಲೆ ಕ್ಲಿಕ್ ಮಾಡಿದಾಗ […]

ಕಾರ್ಕಳ:ಎನ್.ಡಿ.ಎ ಪ್ರವೇಶ ಪರೀಕ್ಷೆಯಲ್ಲಿ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ. ಲಿಖಿತ ಪರೀಕ್ಷೆಯಲ್ಲಿ ಗಣಿತ ನಗರದ ಕಾರ್ಕಳಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವರುಣ್ ಜೆ ಹಾಗೂ ಮಣಿಪಾಲ ವಿದ್ಯಾನಗರದ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಗೌರಿ ಬೋರ್ಕರ್ ತೇರ್ಗಡೆಗೊಂಡಿದ್ದಾರೆ. ಇವರಿಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದವಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ […]

ಆರ್ ಎಸ್ಎಸ್ ನಿಷೇಧ ವಿಚಾರ; ಸಿಎಂ ಯೋಗ್ಯ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ- ಪೇಜಾವರ ಶ್ರೀ

ಉಡುಪಿ: ಆರ್ ಎಸ್ ಎಸ್ ನಿಷೇಧ ವಿಚಾರ ಕುರಿತು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.ಪ್ರಿಯಾಂಕ ಖರ್ಗೆಯವರು ಅವರ ಅಭಿಪ್ರಾಯವನ್ನು ಸರಕಾರಕ್ಕೆ ಹೇಳಿದ್ದಾರೆ. ಅವರ ಅಭಿಪ್ರಾಯ ತಿಳಿಸುವ ಹಕ್ಕು ಅವರಿಗೆ ಖಂಡಿತವಾಗಿ ಇದೆ. ಮುಖ್ಯಮಂತ್ರಿಗಳು ಎಲ್ಲರ ಜೊತೆ ವಿಮರ್ಶಿಸಿ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸ ಇದೆ ಎಂದರು. ಆರ್ ಎಸ್ ಎಸ್ ತನ್ನ ಹೆಸರಿನಂತೆ ರಾಷ್ಟ್ರೀಯ ಸೇವೆಯನ್ನು ಮಾಡುತ್ತಿದೆ. ವ್ಯವಸ್ಥೆಯಲ್ಲಿ ಕೆಲವು ತಪ್ಪುಗಳಾಗುವುದು ಸಹಜ. ತಪ್ಪುಗಳು ಇದೆಯೋ ಇಲ್ಲವೋ ವಿಮರ್ಶಿಸಬೇಕು. ಒಬ್ಬರಿಗೆ ಸರಿ ಎಂದು […]

ಬೈಕ್ ನಲ್ಲಿ ಡ್ರಾಪ್ ಕೊಡಿಸುವ ನೆಪದಲ್ಲಿ ಮಹಿಳೆ ಕರೆದೊಯ್ದು ಅತ್ಯಾಚಾರ: ಸಿಸಿಟಿವಿ ದೃಶ್ಯಾವಳಿ ಮೂಲಕ ಆರೋಪಿಗಳ ಬಂಧನ!

ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಬೈಕ್ ಮೆಕ್ಯಾನಿಕ್ ಮತ್ತು ಅವನ ಸ್ನೇಹಿತ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು-ಚಿಕ್ಕಬಳ್ಳಾಪು ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಕೆಯ ಬಳಿ ಹಣ ಅಥವಾ ಆಧಾರ್ ಕಾರ್ಡ್ ಇಲ್ಲದ ಕಾರಣ ಬಸ್ ನಲ್ಲಿ ಸಂಚರಿಸಲು ಸಾಧ್ಯವಾಗದೆ ತನ್ನೂರಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಮೆಕ್ಯಾನಿಕ್ ಸಿಕಂಥರ್ ಮತ್ತು ಆತನ ಸ್ನೇಹಿತ ಜನಾರ್ಧನ ಆಚಾರಿ ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಈ ಘಟನೆ ನಡೆದಿದ್ದರೂ, ನಿನ್ನೆ […]

14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 9 ಮಂದಿಯಿಂದ ಅತ್ಯಾಚಾರ: ಐವರ ಬಂಧನ, ಇನ್ನುಳಿದ ಆರೋಪಿಗಳಿಗೆ ಶೋಧ!

ಜಾರ್ಖಂಡ್​ನ ರಾಂಚಿಯ ರತು ಪ್ರದೇಶದಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಒಂಬತ್ತು ಮಂದಿ ಪುರುಷರು ಅತ್ಯಾಚಾರ ಮಾಡಿದ ಘಟನೆ ನಡೆದಿದ್ದು, ಅದರಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸೋಮವಾರ(ಅ. 13) ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಭಾನುವಾರ(ಅ. 12) ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಈ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಪುಷ್ಕರ್, […]