ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್ ಅವರು ಅ.14 ರಂದು ಭೇಟಿ ನೀಡಿದರು. ಶ್ರೀಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ಅನುಗ್ರಹ ಪಡೆದರು.

ಮಂಗಳೂರು: ಪಂಪ್‌ವೆಲ್-ಕಂಕನಾಡಿ ರಸ್ತೆ ಕಾಮಗಾರಿ: ವಾಹನ ಸಂಚಾರಕ್ಕೆ ಬದಲಿ ಮಾರ್ಗ.

ಮಂಗಳೂರು: ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ಎಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ. ಪಂಪ್‌ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿ-ಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್‌ನಿಂದ ಪಂಪ್‌ವೆಲ್‌ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ. ಅದೇ ರೀತಿ ಪಂಪ್‌ವೆಲ್‌ನಿಂದ […]

ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಪ್ರಯುಕ್ತ ಪುತ್ತೂರು ಶಾಖೆಯ ಸದಸ್ಯ ಗ್ರಾಹಕರ ಸಮಾವೇಶ

ಪುತ್ತೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಪ್ರಯುಕ್ತ ಪುತ್ತೂರು ಶಾಖೆಯ ಸದಸ್ಯ ಗ್ರಾಹಕರ ಸಮಾವೇಶ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯರು, ಸದಸ್ಯ ಗ್ರಾಹಕರಿಗೆ ಎರಡು ಲಕ್ಷ ರೂ.ನ ವಿಮೆ ಮಾಡಿಸಲಾಗಿದೆ. ಗ್ರಾಹಕರು ಹಾಗೂ ಬ್ಯಾಂಕಿನ ಬಾಂಧವ್ಯ ಹೀಗೆಯೇ ಮುಂದುವರಿಯಲಿ. ಸಂಸ್ಥೆಯ ಬೆಳವಣಿಗೆಗೆ ಗ್ರಾಹಕರು ಕಾರಣರಾಗಿದ್ದೀರಿ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಚಿದಾನಂದ ಬೈಲಾಡಿ ಮಾತನಾಡಿ, ಸಹಕಾರ ಬ್ಯಾಂಕ್‌ಗಳು ಕರಾವಳಿಯ ಗ್ರಾಹಕರ ಜೀವನಾಡಿಯಾಗಿ ಕೆಲಸ ನಿರ್ವಹಿಸುತ್ತಿವೆ. […]

ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳ ನಡೆಸಲು ಹೈಕೋರ್ಟ್‌ ಗ್ರೀನ್ ಸಿಗ್ನಲ್!

ಮೂಡುಬಿದಿರೆ: ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈ ಕೋಟ್೯ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರ ಅಧೀನದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ ಕ್ಷೇತ್ರದಲ್ಲಿ ಸಂತಸದ ಕ್ಷಣ. ಕೋಣಗಳ ಸಾಗಾಟದ […]

ಉಡುಪಿಯ ಆರ್‌ಟಿಓ ಅಧಿಕಾರಿಯ ಮನೆಯಲ್ಲಿ ಕೋಟ್ಯಾಂತರ ರೂ. ನಗದು, ಚಿನ್ನ-ಬೆಳ್ಳಿ ಪತ್ತೆ!

ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ.ನಾಯಕ್ ಅವರ ಕಚೇರಿ, ಮನೆ, ಆಪ್ತರ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಆರ್‌ಟಿಓ ಲಕ್ಷ್ಮೀನಾರಾಯಣ ನಾಯಕ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರ್‌ಟಿಓಗೆ ಸಂಬಂಧಿಸಿದ ವಾಸ್ತವ್ಯದ ಮನೆ, ಸಂಬಂಧಿಕರ ಮನೆ, ಆಪ್ತ ರವಿ ಶೇರಿಗಾರ್ ಮನೆ ಮತ್ತು ಆರ್‌ಟಿಓ ಕಛೇರಿ ಸೇರಿದಂತೆ ಒಟ್ಟು 5 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು ಶೋಧನಾ ಕಾರ್ಯವು ಮಂಗಳವಾರ ರಾತ್ರಿಯವರೆಗೂ ಮುಂದುವರೆದಿತ್ತು.ಈವರೆಗೆ ನಡೆಸಲಾದ ಶೋಧ ಕಾರ್ಯದಲ್ಲಿ […]