ಉಡುಪಿಯ ಹೆಸರಾಂತ ಐಟಿ ಮತ್ತು ಫೈನಾನ್ಸ್ ಕಂಪೆನಿಯಲ್ಲಿ ಬೇಕಾಗಿದ್ದಾರೆ!

ಉಡುಪಿ:ಉಡುಪಿಯ ಹೆಸರಾಂತ IT ಮತ್ತು ಫೈನಾನ್ಸ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: ▪️HR ಎಕ್ಸಿಕ್ಯೂಟಿವ್▪️ಅಕೌಂಟೆಂಟ್▪️ಡಾಟಾ ಎಂಟ್ರಿ ಆಪರೇಟರ್▪️ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್▪️ಅಡ್ಡಿನ್ ಎಕ್ಸಿಕ್ಯೂಟಿವ್▪️ಎಲೆಕ್ಟ್ರೀಷಿಯನ್ | ಪ್ಲಮ್ಬರ್ ಸಂಪರ್ಕಿಸಿ:9606968198, 9663312304

ಉಡುಪಿ:ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ […]

ಉಡುಪಿ:ಕಾರ್ಡಿಯಾಕ್ ಪಲ್ಮನರಿ ರಿಸಪಿಟೇಶನ್ ತರಬೇತಿ

ಉಡುಪಿ:ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಕೆ.ಎಂ.ಸಿ ಮಣಿಪಾಲ್ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಆಸ್ಪತ್ರೆಯ ಶೂಶ್ರಷಕ ಅಧಿಕಾರಿಗಳಿಗೆ ಹಾಗೂ ಭದ್ರತಾ ಸಿಬ್ಬಂದಿ ಮತ್ತು ಆಸ್ಪತ್ರೆಯ ಇತರೆ ಸಿಬ್ಬಂದಿಗಳಿಗೆ ಜ್ಞಾನ ಮತ್ತು ಕೌಶಲ್ಯಗಳನ್ನು ಸುದಾರಿಸುವ ಗುರಿಯನ್ನು ಹೋದಿರುವ ಕಾರ್ಡಿಯಾಕ್ ಪಲ್ಮನರಿ ರಿಸಪಿಟೇಶನ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್ ಸಿ.ಪಿ.ಆರ್ ಒಂದು ನಿರ್ಣಯಕ ಜೀವ ಉಳಿಸುವತಂತ್ರವಾಗಿದ್ದು ತುರ್ತಸಂದರ್ಭಗಳಲ್ಲಿ ಇದು ಅತ್ಯಗತ್ಯವಾಗಿದೆ. ಈ ಕಾರ್ಯಕ್ರಮದ ಉದ್ದೇಶವು […]

ಅಕ್ಟೋಬರ್ 17ರಿಂದ ಕದ್ರಿ ಸಸ್ಯೋತ್ಸವ, ರೈತ ಮೇಳ

ಮಂಗಳೂರು: ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘ, ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ಸಹಯೋಗದೊಂದಿಗೆ ಕದ್ರಿ ಸಸ್ಯೋತ್ಸವ ರೈತ ಮೇಳವು ಮಂಗಳೂರಿನ ಕದ್ರಿಪಾರ್ಕಿನಲ್ಲಿ ಅಕ್ಟೋಬರ್ 17ರಿಂದ 19ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಕರಕುಶಲ ವಸ್ತುಗಳ ತಯಾರಿಯ ಪ್ರಾತ್ಯಕ್ಷಿಕೆ, ಹಣ್ಣು,ಹೂವು, ಗಿಡಗಳ ಪ್ರದರ್ಶನ ಮತ್ತು ಮಾರಾಟ, ಸಾವಯವ, ನೈಸರ್ಗಿಕ ಉತ್ಪನ್ನಗಳ ಪರಿಚಯ ಮತ್ತು ಮಾರಾಟ, ಕರಕುಶಲ ವಸ್ತುಗಳ ಮಾರಾಟ, ಜೇನು ಕೃಷಿ, ಟಾರೆಸ್ ಗಾರ್ಡನ್ , ರೈತ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಮಾರಾಟ […]

ಉಡುಪಿ:ಕನ್ನಡ ರಾಜ್ಯೋತ್ಸವ ವಿಜೃಂಭಣೆ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆ ಹಾಗೂ ವೈಭವಯುತವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 70 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ […]