ಉಡುಪಿ:ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ವೇಗ ಹೆಚ್ಚಿಸಿ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಪಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಉಡುಪಿಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು. ನಗರದ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾ.ಹೆ 66 ಮತ್ತು 169ಎ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಂತೆಕಟ್ಟೆ ಕಲ್ಯಾಣಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯನ್ನು ಹೆಚ್ಚುಸುವುದರೊಂದಿಗೆ ಶೀಘ್ರವಾಗಿ ಸಂಪೂರ್ಣ ಕಾಮಗಾರಿ […]