ಉಡುಪಿ: ಅಂಬಲಪಾಡಿಯಲ್ಲಿ ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ.

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ.ಪವಿತ್ರ ಸರಕಾರಿ ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ […]

ಕಾರವಾರ: ಮೀನುಗಾರಿಕೆ ವೇಳೆ ಯುವಕನ ಹೊಟ್ಟೆಗೆ ಚೂಪು ಮೂತಿಯ ಕಾಂಡೆ ಮೀನು ಚುಚ್ಚಿ ಮೃತ್ಯು

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನಿಗೆ ಚೂಪು ಮೂತಿಯ ಮೀನು ನೀರಿನಿಂದ ಜಿಗಿದು ಬಂದು ಹೊಟ್ಟೆಗೆ ಚುಚ್ಚಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರದ ಮಾಜಾಳಿಯ ದಾಂಡೇಭಾಗದ ಅಕ್ಷಯ್ ಅನಿಲ್ ಮಾಜಾಳಿಕರ್ ಮೀನಿನಿಂದಲೇ ಬಲಿ ಆಗಿರುವ ನತದೃಷ್ಟ ಯುವಕ. ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಅಕ್ಟೋಬರ್ 14ರಂದು ಅಕ್ಷಯ್, ಆಳ ಸಮುದ್ರದಲ್ಲಿ ಮತ್ಸ್ಯ ಶಿಕಾರಿಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಕಾಂಡೆ ಮೀನು, […]

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ.

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಕಾರಣಕ್ಕೆ ವಾಹನ ಮಾಲಕನಿಗೆ ಬಂಟ್ವಾಳ ನ್ಯಾಯಾಲಯವು 32 ಸಾವಿರ ರೂ. ದಂಡ ವಿಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಕಳೆದ ಸೆಪ್ಟಂಬರ್ ನಲ್ಲಿ ಪುತ್ತೂರು ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯ […]

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್‌ ಲಾಕರ್‌ ವ್ಯವಸ್ಥೆಗೆ ಚಾಲನೆ.

ಉಡುಪಿ: ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಎಂಬಂತೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಡಿಜಿಟಲ್‌ ಲಾಕರ್‌ ವ್ಯವಸ್ಥೆ ಪರಿಚಯಿಸಲಾಗಿದೆ. ಕೊಂಕಣ ರೈಲು ವಿಭಾಗದಿಂದ ಈ ವ್ಯವಸ್ಥೆ ಜಾರಿಗೆ ತಂದಿದ್ದು, ಸಣ್ಣ, ಮಧ್ಯಮ ಹಾಗೂ ದೊಡ್ಡ ಗಾತ್ರದ ಲಗೇಜ್‌ಗಳನ್ನು ಇಡಲು ಬಾಕ್ಸ್‌ ವ್ಯವಸ್ಥೆ ಮಾಡಲಾಗಿದೆ. ಹೊಸ ತಂತ್ರಜ್ಞಾನ ಬಳಸಿ ಕ್ಯುಆರ್‌ಕೋಡ್‌ ಅಥವಾ ಪಿನ್‌ ವ್ಯವಸ್ಥೆಯೊಂದಿಗೆ ಲಾಕರ್‌ನಲ್ಲಿ ಪ್ರಯಾಣಿಕರು ತಮ್ಮ ಲಗೇಜ್‌ ಇಡಬಹುದಾಗಿದೆ. 3 ಗಂಟೆ, 6 ಗಂಟೆ, 12 ಗಂಟೆ ಹಾಗೂ 24 ಗಂಟೆಗಳ ವರೆಗೆ ಡಿಜಿಟಲ್‌ ಲಾಕರ್‌ […]

ಉಡುಪಿ:ಅ.18 ರಂದು ಆಪರೇಷನ್ ಸಿಂಧೂರ ವಿಜಯೋತ್ಸವ ಹಾಗೂ ಸಾಧನಾ ಸಮಾವೇಶ

ಉಡುಪಿ: ಕೊಡವೂರು ಫ್ರೆಂಡ್ಸ್‌ ಹಾಗೂ ಮಹಿಳಾ ಸಮಿತಿ, ಕೊಡವೂರು ಇವರ ಆಶ್ರಯದಲ್ಲಿ ಆಪರೇಷನ್ ಸಿಂಧೂರ ವಿಜಯೋತ್ಸವ ಹಾಗೂಕೊಡವೂರಿನ ಅಭಿವೃದ್ಧಿಗೆ ಶ್ರಮಿಸಿದ ಕಾರ್ಯಕರ್ತರ ಸಾಧನಾ ಸಮಾವೇಶ ಕಾರ್ಯಕ್ರಮವು ಅ.18 ರಂದು ಶನಿವಾರ ಸಂಜೆ 6.00ರಿಂದ ಕೊಡವೂರು ಶಾಲಾ ವಠಾರದಲ್ಲಿ ನಡೆಯಲಿರುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಘನ ಉಪಸ್ಥಿತಿಯನ್ನು ಯಶ್‌ ಪಾಲ್‌ ಸುವರ್ಣ ಶಾಸಕರು, ಉಡುಪಿ,ಹಾಗೂ ದಿಕ್ಸೂಚಿ ಭಾಷಣವನ್ನು ವಿಧಾನ ಪರಿಷತ್ ಶಾಸಕರಾದ ಸಿ ಟಿ ರವಿ ಇವರು ಮಾಡಲಿದ್ದಾರೆ. ಗೌರವ ಉಪಸ್ಥಿತರಾಗಿ ರವಿರಾಜ್ […]