ಉಡುಪಿಯಲ್ಲಿ ದೀಪಾವಳಿ ಸಂಭ್ರಮ: ಶ್ರೀಕೃಷ್ಣ ಮಠದಲ್ಲಿ ಬಲೀಂದ್ರ ಪೂಜೆ, ಲಕ್ಷ್ಮೀ ಪೂಜೆ ಸಂಪನ್ನ

ಉಡುಪಿ: ದೇವಾಲಯಗಳ ನಗರಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಪ್ರಯುಕ್ತ ಸೋಮವಾರ ರಾತ್ರಿ ಸಂಭ್ರಮದ ಬಲೀಂದ್ರ ಪೂಜೆ ನಡೆಯಿತು. ತುಳುನಾಡಿನಲ್ಲಿ ಬಲೀಂದ್ರ ಪೂಜೆಗೆ ವಿಶೇಷ ಮಹತ್ವವಿದೆ. ಈ ಭಾಗವನ್ನು ಆಳಿದ ಅರಸ ಬಲೀಂದ್ರನಿಗೆ ದೀಪಾವಳಿಯ ವೇಳೆ ಸ್ವಾಗತ ಕೋರಿ ಆತಿಥ್ಯ ನಡೆಸುವುದು ಇಲ್ಲಿನ ಪದ್ಧತಿ. ವರ್ಷಕ್ಕೊಮ್ಮೆ ಅರಸನನ್ನು ಬರಮಾಡಿಕೊಂಡು ಗೌರವಿಸುವುದು ಸಂಪ್ರದಾಯ. ಈ ಆಚರಣೆಯನ್ನು ಬಲೀಂದ್ರ ಪೂಜೆ ಎಂದು ಕರೆಯಲಾಗುತ್ತದೆ. ಭತ್ತದ ಗದ್ದೆಗಳಲ್ಲಿ ದೀಪವಿಟ್ಟು ಬಲೀಂದ್ರನನ್ನು ಕೂಗಿ ಕರೆಯಲಾಗುತ್ತದೆ. ಕೃಷಿ ಸಂಸ್ಕೃತಿಯೊಂದಿಗೆ ಬಲೀಂದ್ರ ಪೂಜೆ ತಳಕು ಹಾಕಿಕೊಂಡಿರುವುದರಿಂದ ಇವತ್ತಿಗೂ […]