ಬಿಗ್​ಬಾಸ್​ ಮನೆಯಲ್ಲಿ ರಕ್ಷಿತಾಗೆ ‘S ಕ್ಯಾಟಗರಿ’ ಪದಬಳಕೆ: ಕಂಟೆಸ್ಟೆಂಟ್​ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು.

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ‘S’ ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ, ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ […]

ಅ.26ರಂದು ಕೃಷ್ಣಮಠದಲ್ಲಿ ‘ಭರತಮುನಿ ಜಯಂತ್ಯುತ್ಸವ’

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ರಾಧಾಕೃಷ್ಣ ನೃತ್ಯ ನಿಕೇತನ ಸಂಸ್ಥೆಯ 23ನೇ ವರ್ಷದ ಭರತಮುನಿ ಜಯಂತ್ಯುತ್ಸವವನ್ನು ಇದೇ ಅ. 26ರಂದು ನಗರದ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿದುಷಿ ವೀಣಾ ಮುರಳೀಧರ ಸಾಮಗ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು‌ ಉದ್ಘಾಟಿಸಲಿದ್ದಾರೆ. ಕಿರಿಯ ಯತಿಗಳಾದ ಸುಶೀಂಧ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ ಎಂದರು. ಈ […]

ಕುಂದಾಪುರ ಹಾಗೂ ಕಾರ್ಕಳದ Easy Life ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಕುಂದಾಪುರ ಹಾಗೂ ಕಾರ್ಕಳದ “Easy Life” ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔸ಬಿಲ್ಲಿಂಗ್ ಎಕ್ಸಿಕ್ಯೂಟಿವ್ (M/F) B.com ವಿದ್ಯಾರ್ಹತೆ ಹೊಂದಿರಬೇಕು. 🔸ಮೆಕ್ಯಾನಿಕ್ (M)PUC/ITI ವಿದ್ಯಾಭ್ಯಾಸ ಹೊಂದಿರಬೇಕು. ರೆಸ್ಯೂಮ್ ಮತ್ತು ಫೋಟೋವನ್ನು ಈ ನಂಬರ್‌ಗೆ ವಾಟ್ಸಪ್ ಮಾಡಿ9901876682

ಉಡುಪಿ: ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಶಶಿ ತರೀಕೆರೆ ಆಯ್ಕೆ

ಉಡುಪಿ: ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ಬೆಂಗಳೂರಿನ ಶಶಿ ತರೀಕೆರೆ ಅವರ ‘ಪ್ಯೂಪಾ’ ಕವನ ಸಂಕಲನ ಆಯ್ಕೆಯಾಗಿದೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯು 2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಪ್ರಶಸ್ತಿಗೆ ಆಹ್ವಾನಿಸಿತ್ತು. ಅದರಂತೆ ಪ್ರಶಸ್ತಿಗೆ […]

ಬ್ರಹ್ಮಾವರ: ರುಡ್ ಸೆಟ್’ನಲ್ಲಿ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಬ್ರಹ್ಮಾವರ: ಇಲ್ಲಿನ ರುಡ್‌ಸೆಟ್‌ ಸಂಸ್ಥೆಯಲ್ಲಿ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಮೊಬೈಲ್ ರಿಪೇರಿ ಮತ್ತು ಸರ್ವಿಸ್ ತರಬೇತಿ, ಟಿ.ವಿ. ರಿಪೇರಿ ಮತ್ತು ಸರ್ವಿಸ್ ತರಬೇತಿ ಇದೇ 29ರಿಂದ ನ. 27ರವರೆಗೆ, ಹಪ್ಪಳ ಉಪ್ಪಿನಕಾಯಿ ಮತ್ತು ಮಸಾಲಾ ಪೌಡರ್ ತಯಾರಿಕೆ ತರಬೇತಿ ನ. 5ರಿಂದ 24ರವರೆಗೆ, ಎಲೆಕ್ಟ್ರಿಕಲ್ ಮೋಟಾರ್ ರಿವೈಂಡ್ ರಿಪೇರಿ ಮತ್ತು ಸರ್ವಿಸ್ ತರಬೇತಿ ನ. 17ರಿಂದ ಡಿ. 12ರವರೆಗೆ, ಜೇನು ಸಾಕಾಣಿಕೆ ತರಬೇತಿ ನ. 27ರಿಂದ ಡಿ. 17ರವರೆಗೆ ನಡೆಯಲಿದೆ. ಉಚಿತ ಊಟ, ವಸತಿ, ಸಮವಸ್ತ್ರ, ತರಬೇತಿ […]