ರಕ್ಷಣಾ ಪಡೆಗಳಿಗೆ ಮತ್ತಷ್ಟು ಬಲ; 79000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಅನುಮತಿ.

ನವದೆಹಲಿ: ರಕ್ಷಣಾ ವಲಯದಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಕೇಂದ್ರ ಸರ್ಕಾರವು ವಿವಿಧ ರಕ್ಷಣಾ ಉಪಕರಣಗಳ ಸ್ಥಳೀಯ ಉತ್ಪಾದನೆಯನ್ನು ಪ್ರೋತ್ಸಾಹಿಸಿದೆ. ವಿದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ರಕ್ಷಣಾ ಸಚಿವಾಲಯವು ಸಾಧ್ಯವಾದಷ್ಟು ರಕ್ಷಣಾ ಉಪಕರಣಗಳನ್ನು ಸ್ಥಳೀಯವಾಗಿ ತಯಾರಿಸಲು ಶ್ರಮಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ರಕ್ಷಣಾ ಸ್ವಾಧೀನ ಮಂಡಳಿಯು ಸುಮಾರು 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಅನುಮೋದನೆ ನೀಡಿದೆ. ಇದರ ಅಡಿಯಲ್ಲಿ, ಭಾರತೀಯ ಸೇನೆಗೆ ವಸ್ತು ನಿರ್ವಹಣಾ ಕ್ರೇನ್‌ಗಳು ಸೇರಿದಂತೆ ನಾಗ್ ಕ್ಷಿಪಣಿ ವ್ಯವಸ್ಥೆ […]

AI ತಂತ್ರಜ್ಞಾನಕ್ಕೆ ಬಿಗಿ ನಿಯಮ: ಡೀಪ್ ಫೇಕ್ ಗೂ ಬಂತು ರೂಲ್ಸ್!

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ದುರ್ಬಳಕೆ ತಡೆಯಲು ಮತ್ತು ‘ಡೀಪ್‌ಫೇಕ್‌’ಗಳನ್ನು ನಿಯಂತ್ರಿಸಲು ಸರ್ಕಾರ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮದಲ್ಲಿ ಬದಲಾವಣೆ ತರುವುದಾಗಿ ಹೇಳಿದೆ.‘ಎಐ’ ಬಳಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಮಾಹಿತಿ ಹರಡುವುದು ಹೆಚ್ಚುತ್ತಿದ್ದು, ಜನರನ್ನು ದಾರಿ ತಪ್ಪಿಸಲು, ಚುನಾವಣಾ ಅಕ್ರಮಗಳಿಗೆ, ಹಣಕಾಸು ವಂಚನೆಗಳಿಗೆ ಎಐ ದುರ್ಬಳಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ ನಿಯಮಗಳನ್ನು ಬಿಗಿಗೊಳಿಸುತ್ತಿರುವುದಾಗಿ ಸಚಿವಾಲಯ ಹೇಳಿದೆ. ಪ್ರಸ್ತಾವಿತ ಐಟಿ ನಿಯಮದಲ್ಲಿ ಯೂಟ್ಯೂಬ್‌, ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎಐ ಆಧಾರಿತ ಕಂಟೆಂಟ್‌ಗಳನ್ನು […]

ಉಡುಪಿ:ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿವಾರಾಹಿ ಸಹಾಯವಾಣಿ ಮೊ.ನಂ: 8749066111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಸಹಾಯವಾಣಿ ಸ್ಥಾಪನೆ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು, ಉಡುಪಿ ಜಿಲ್ಲೆಯ ಸುಮಾರು ತಾಲೂಕುಗಳಲ್ಲಿಯೂ ಸಮೀಕ್ಷೆ ಪೂರ್ಣಗೊಂಡಿರುತ್ತದೆ. ಸಮೀಕ್ಷೆ ಬಾಕಿಯಿರುವ ಸಾರ್ವಜನಿಕರು ರಾಜ್ಯ ಮಟ್ಟದ ಸಹಾಯವಾಣಿ ಸಂಖ್ಯೆ: 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ತಾಲೂಕು ಮಟ್ಟದ ಸಹಾಯವಾಣಿ ಸಂಖ್ಯೆ: 0820-2520739, ಬೈಂದೂರು/ಕುಂದಾಪುರ ತಾಲೂಕು ಮೊ.ನಂ: 9972294198 ಮತ್ತು ಕಾರ್ಕಳ-ಹೆಬ್ರಿ ತಾಲೂಕು ಸಹಾಯವಾಣಿ ಸಂಖ್ಯೆ: 08258-298610 ಗೆ ಕರೆಮಾಡುವ ಮೂಲಕ ಅಥವಾ ತಮ್ಮ […]

ಉಡುಪಿ:ರಾಷ್ಟ್ರದ ಗೌರವ ಕಾಪಾಡುವಲ್ಲಿ ಚೆನ್ನಮ್ಮರ ಬದುಕು ಸಮರ್ಪಣೆ : ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ರಾಷ್ಟ್ರ ಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದು ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟ್ರದ ಗೌರವವನ್ನು ಕಾಪಾಡುವಲ್ಲಿ ತಮ್ಮ ಬದುಕನ್ನು ಸಮರ್ಪಣೆ ಮಾಡಿದರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡಮತ್ತು ಸಂಸ್ಕೃತಿ ಇಲಾಖೆ ಇವರ […]