ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮೇಲೆ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಒತ್ತಾಯ!

ಬೆಂಗಳೂರು: ‘ಪಶ್ಚಿಮ ಬಂಗಾಳದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದು, ‘ಬೆಂಗಳೂರು ಉತ್ತರ ತಾಲ್ಲೂಕಿನ ಗಂಗೊಂಡನಹಳ್ಳಿಯಲ್ಲಿ ನೆಲಸಿದ್ದ ಗೃಹಿಣಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದಪ್ರಕರಣವನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಂಡಿರುವ ಬಗ್ಗೆ ಆಯೋಗಕ್ಕೆ ವರದಿ ನೀಡಬೇಕು’ ಎಂದು ಸೂಚಿಸಿದೆ.
ಗೋವಾದಲ್ಲಿ ಅಪೂರ್ವ ಗಜಲಕ್ಷ್ಮಿಯ ಶಿಲ್ಪ ಪತ್ತೆ:ಪ್ರೊ.ಟಿ.ಮುರುಗೇಶಿ ಅಧ್ಯಯನ

ಉಡುಪಿ: ಗೋವಾದ ಪರ್ಯೆ ಸಮೀಪದ ವಲವಂತಿ ನದಿಯಲ್ಲಿ ಆಕಸ್ಮಿಕವಾಗಿ ಪತ್ತೆಯಾದ ಗಜಲಕ್ಷ್ಮಿ ಶಿಲ್ಪವು ಅಪೂರ್ವವಾದ ವಿಗ್ರಹವಾಗಿದ್ದು, ಚಾರಿತ್ರಿಕ ಮಹತ್ವವನ್ನು ಹೊಂದಿದೆ ಎಂದು ಉಡುಪಿಯ ಆದಿಮ ಕಲಾ ಟ್ರಸ್ಟ್ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ […]
ಅಮೆರಿಕದಲ್ಲಿ ಮೂನ್ ಲೈಟಿಂಗ್ ಸದ್ದು: ಭಾರತ ಮೂಲದ ವ್ಯಕ್ತಿಗೆ 15 ವರ್ಷ ಜೈಲು

ಅಮೆರಿಕದಲ್ಲಿ ಮೂನ್ ಲೈಟಿಂಗ್ ಇದೀಗ ಸುದ್ದಿ ಮಾಡುತ್ತಿದ್ದು, ಭಾರತ ಮೂಲದ ವ್ಯಕ್ತಿ 15 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅಮೆರಿಕದ ನ್ಯೂಯಾರ್ಕ್‌ನ ಸರ್ಕಾರಿ ಕಚೇರಿಯ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಕೆಲಸ ಮಾಡುತ್ತಾ ಬೇರೊಂದು ಸಂಸ್ಥೆಗೆ ಅನೌಪಚಾರಿಕವಾಗಿ ಕೆಲಸ ಮಾಡುತ್ತಿದ್ದ (ಮೂನ್‌ಲೈಟ್) ಭಾರತ ಮೂಲದ 39 ವರ್ಷದ ವ್ಯಕ್ತಿಯನ್ನು ‘ಮಹಾ ದ್ರೋಹ’ ಎಂದು ಕರೆದಿರುವ ಅಲ್ಲಿನ ನ್ಯಾಯಾಲಯ, 15 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಭಾರತ ಮೂಲದ ನೌಕರ ಮೆಹುಲ್ ಗೋಸ್ವಾಮಿ ಶಿಕ್ಷೆಗೆ ಗುರಿಯಾದ ನೌಕರನಾಗಿದ್ದು, ಒಂದು ಉದ್ಯೋಗದ […]
ಉಡುಪಿ:ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಸೂಕ್ತ ಬಹುಮಾನ : ಡಾ. ಲೆಸ್ಸಿ ಲುವಿಸ್

ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೃತ್ಯವನ್ನು ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ ನೀಡಬೇಕು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಅಧ್ಯಕ್ಷೆ ಡಾ. ಲೆಸ್ಸಿ ಲುವಿಸ್ ಕರೆ ನೀಡಿದರು. ಅವರು ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದಪ್ರಸವ ಪೂರ್ವ […]
ಉಡುಪಿ: ನೂತನ ಶ್ರೀ ಪುತ್ತಿಗೆ ನೃಸಿಂಹ ಸಭಾಭವನದ ಉದ್ಘಾಟನೆ

ಉಡುಪಿ: ಉಡುಪಿಯ ಗೀತಾ ಮಂದಿರದಲ್ಲಿ ನಿರ್ಮಿಸಲಾದ ನೂತನ ಶ್ರೀ ಪುತ್ತಿಗೆ ನೃಸಿಂಹ ಸಭಾಭವನವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು. ಮೊದಲಿಗೆ ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ನಂತರ ಸ್ವಾಮೀಜಿಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ನಂತರ ಗೀತಾ ಮಂದಿರದಲ್ಲಿ ನೂತನ ಸಭಾಭವನವನ್ನು ಉದ್ಘಾಟಿಸಿದರು. ಸುತ್ತೂರು ಶ್ರೀಗಳಿಗೆ ಮಠದ ವತಿಯಿಂದ ಸಂಸ್ಥಾನ ಗೌರವಸಲ್ಲಿಸಲಾಯಿತು. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಶ್ರೀಕೃಷ್ಣಾನುಗೃಹ ಪ್ರಶಸ್ತಿ ನೀಡಿ ಗೌರವಿಸಲಾಯಿತು. […]