ಉಡುಪಿ: ಸ್ಕೂಟರ್‌ಗೆ ಕಾರು ಢಿಕ್ಕಿ: ಶಿರ್ವ ಠಾಣೆಯ ಎಎಸ್ಸೈ ಪುತ್ರಿ ಮೃತ್ಯು

ಉಡುಪಿ: ಉಡುಪಿ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.26ರಂದು ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಶಿರ್ವ ಪೊಲೀಸ್ ಠಾಣಾ ಎಎಸ್ಸೈ ಸುದೇಶ್ ಶೆಟ್ಟಿ ಅವರ ಮಗಳು ಸ್ಪರ್ಷ (24) ಎಂದು ಗುರುತಿಸಲಾಗಿದೆ. ಸವಾರೆ ಮೃತರ ತಾಯಿ ಶರ್ಮಿಳಾ (49) ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ […]

ಬಾರ್’ನಲ್ಲಿ ಎಣ್ಣೆ ಜೊತೆಗೆ ಮಿಕ್ಸ್ಚರ್ ಕೊಡದಿದ್ದಕ್ಕೆ ಕ್ಯಾಷಿಯರ್‌ನ ಬರ್ಬರ ಹತ್ಯೆ

ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್‌ನ್ನು ಹೆಂಡತಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ಹಾಸನ ಮೂಲದ ಕುಮಾರ್ (45) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಸುಭಾಷ್ ಎಂದು ಗುರುತಿಸಲಾಗಿದೆ. ಕೊಲೆಯಾದ ಕುಮಾರ್ ಲಕ್ಕೂರು ಗ್ರಾಮದ ಅಶೋಕ ವೈನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಬಂದಿದ್ದ ಆರೋಪಿ ಕುಡಿಯುವ ವೇಳೆ, ಮಿಕ್ಸ್ಚರ್ ಕೇಳಿದ್ದಾನೆ. ನೀಡದ ಹಿನ್ನೆಲೆ ಗಲಾಟೆಯಾಗಿತ್ತು. ಬಾರ್ ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ಕುಮಾರ್‌ನನ್ನು ಆರೋಪಿ […]

ವರ್ಕ್​ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ!

ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ ಮಾಡುವ ಮೂಲಕ ಮೋಸ ಹೋಗಿದ್ದಾರೆ. […]

ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್ ವಿಭಾಗ: ವಿಶ್ವ ಆಹಾರ ದಿನಾಚರಣೆಯ ಅಂಗವಾಗಿ ಆಹಾರ ತ್ಯಾಜ್ಯ ಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 17 ರಂದು ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್ ವಿಭಾಗ ದಲ್ಲಿ ವಿಶ್ವ ಆಹಾರ ದಿನಾಚರಣೆಯ ಅಂಗವಾಗಿ ಆಹಾರ ತ್ಯಾಜ್ಯ ಜಾಗೃತಿ ಚಟುವಟಿಕೆಗಳು ಮತ್ತು ಆಹಾರ ತ್ಯಾಜ್ಯವನ್ನು ಕಡಿಮೆ ಮಾಡುವ ನಮ್ಮ ನಿರಂತರ ಬದ್ಧತೆಯ ಭಾಗವಾಗಿ, ಆಕರ್ಷಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಸರಣಿಯನ್ನು ಆಯೋಜಿಸಲಾಗಿತ್ತು.ವಿದ್ಯಾರ್ಥಿಗಳಿಗೆ ಕರಕುಶಲ ಸ್ಪರ್ಧೆ ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್ ವಿದ್ಯಾರ್ಥಿಗಳಿಗಾಗಿ ಸೃಜನಶೀಲ ಕರಕುಶಲ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ ಭಾಗವಹಿಸಿದವರು ಹಣ್ಣಿನ ಸಿಪ್ಪೆಗಳು, ಮೊಟ್ಟೆಯ ಚಿಪ್ಪುಗಳು ಮತ್ತು ತರಕಾರಿ ತುಣುಕುಗಳಂತಹ ಆಹಾರ ತ್ಯಾಜ್ಯ ವಸ್ತುಗಳನ್ನು […]

ಎಸ್ ಬಿಐ’ನಲ್ಲಿ ಐದು ತಿಂಗಳೊಳಗೆ 3500 ಹುದ್ದೆ ಭರ್ತಿ!

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದೆ. ಜೂನ್ ತಿಂಗಳಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ಮತ್ತೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿಗಳನ್ನು ಸ್ವೀಕರಿಸಲಾಗಿದೆ. ದೇಶದಾದ್ಯಂತ ಬ್ಯಾಂಕ್‌ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ […]