ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಮೂವ್ವರು ಹೆಂಡತಿಯರ ಗಂಡ!

ಕಲಬುರಗಿ: ಚಿಂಚೊಳ್ಳಿ ತಾಲೂಕಿನ ಮಿರಿಯಾಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಸಿಂಗ್‌ಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಚಿಂಚೋಳಿ ಸಿಪಿಐ ಕಪಿಲದೇವ ತಿಳಿಸಿದ್ದಾರೆ. ಮಿರಿಯಾಣ ಗ್ರಾಮದಲ್ಲಿರುವ ಕಲ್ಲು ಪರಸಿ ಪಾಲಿಶಿಂಗ್‌ದಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ತಂದೆ ತಾಯಿ ಜೊತೆ ಮಗಳಿದ್ದಳು. ಕಾಮುಕ ಮಾಲೀಕ ಸದ್ಧಾಂ ಅಬ್ದುಲ್ ಹಮೀದ್ ಅಲಿಯಾಸ್ ಇಮ್ರಾನ್ (33) ಎಂಬಾತ […]

ಹೆಬ್ರಿ ಎಸ್ ಆರ್ ಪದವಿ ಪೂರ್ವ ಕಾಲೇಜು: ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಹೆಬ್ರಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ನಡೆದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್ ಆರ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪರೀಕ್ಷಿತ್ ಆಚಾರ್ಯ ಪ್ರಥಮ ಸ್ಥಾನ, ನೇಸರ ಎ ಎನ್ ತೃತೀಯ ಸ್ಥಾನ, ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಮತ್ತು ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.

ಕಾರ್ಕಳ ಶ್ರೀ ವೆಂಕಟರಮಣ ದೇವಳದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ.

ಕಾರ್ಕಳ: ಪಡುತಿರುಪತಿ ಕೀರ್ತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಳದಲ್ಲಿ ವೆಂಕಟರಮಣ ಭಜನಾ ಮಂಡಳಿಯ ಸಹಯೋಗದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮವು ಈ ಸೋಮವಾರ ಸಂಜೆ ನಡೆಯಿತು. ಮಂಗಳೂರಿನ ಖ್ಯಾತ ಯುವ ಸಂಗೀತ ಕಲಾವಿದರಾದ ಗುರುದಾಸ್ ಚೂರ್ಯ ಅವರು ಈ ಭಕ್ತಿ ಸಂಗೀತದ ವಿಶೇಷವಾದ ಕಾರ್ಯಕ್ರಮವನ್ನು ಅತ್ಯಂತ ಸುಂದರವಾಗಿ ನಡೆಸಿಕೊಟ್ಟರು. ಕಾಶಿ ಮಠಾಧೀಶರಾದ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮವನ್ನು ದೇವಳದ ಪುರಾಣಿಕರಾದ ರವೀಂದ್ರ ಪುರಾಣಿಕ್, ದೇವಳದ ಪ್ರಥಮ ಮೊಕ್ತೇಸರರಾದ ಜಯರಾಮ್ ಪ್ರಭು […]

ಹೆಬ್ರಿ: ಕಂಬಿಯೊಳಗೆ ಸಿಲುಕಿದ್ದ ಚಿರತೆಯ ರಕ್ಷಣೆ: ನಿಟ್ಟುಸಿರು ಬಿಟ್ಟ ಜನತೆ

ಉಡುಪಿ: ಕಂಬಿಯೊಳಗೆ ಸಿಲುಕಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಎಂಬಲ್ಲಿ ನಡೆದಿದೆ. ಆಹಾರ ಅರಿಸಿಕೊಂಡು ಬಂದ ಚಿರತೆ ತಡೆಬೇಲಿಯ ಕಂಬಿಗೆ ಸಿಲುಕಿದ್ದು, ತಪ್ಪಿಸಿಕೊಳ್ಳಲು ಒದ್ದಾಟ ನಡೆಸುತ್ತಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು‌ ಸಿಬ್ಬಂದಿ ಚಿರತೆ ಅರವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಕಂಬಿಯಿಂದ ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸಿ, ಅರಣ್ಯಕ್ಕೆ ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಯಶಸ್ವಿ […]

ಉಡುಪಿ:ಒಂದು ದಿನದ ಉದ್ಯಮಶೀಲತಾ ತಿಳಿವಳಿಕೆ ಶಿಬಿರ

udupixpress

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಉಡುಪಿ ಹಾಗೂ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ (ರಿ.) ಕುಂಜಿಬೆಟ್ಟು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ 18 ವರ್ಷದಿಂದ 45 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “ಒಂದು ದಿನದ ಉದ್ಯವiಶೀಲತಾ ತಿಳಿವಳಿಕೆ ಶಿಬಿರ”ವನ್ನು ನವೆಂಬರ್ 2 ರಂದು ನಗರದ […]