ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ.

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿಯನ್ನು ನೀಡಲಾಯಿತು. ಉಡುಪಿ ಜಿಲ್ಲಾದಂತ್ಯ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯಿಂದಾಗಿ ಎಷ್ಟೋ ಯುವಕರು ದಾರಿ ತಪ್ಪಿ ಅವರ ಕುಟುಂಬಗಳು ಬೀದಿಗೆ ಬಂದಿದೆ. ಕೆಲವು ಜಾಗಗಳಲ್ಲಿ ಮಾದಕ ವಸ್ತುಗಳು ಅಂಗಡಿಗಳಲ್ಲಿ ಚಾಕಲೇಟ್ ದೊರೆಯುವಷ್ಟು ಸಲೀಸಾಗಿ ದೊರೆಯುತ್ತಿರುವುದು ದುರಾದೃಷ್ಟಕರ, ಇದಕ್ಕೆ ಬಲಿಯಾಗಿರುವ ಮಕ್ಕಳ ತಂದೆ-ತಾಯಿಯರ ರೋದನೆ ಕೆಳತೀರದ್ದು. ಇತ್ತೀಚೆಗೆ ಹನಿಟ್ರ್ಯಾಪ್‌ನಂತಹ […]
ಮೂಡುಬಿದಿರೆ:ಯುವಕರು ಬದಲಾವಣೆಯ ಹರಿಕಾರರಾಗಲಿ: ಬ್ರಿಜೇಶ್ ಚೌಟ

ಮೂಡುಬಿದಿರೆ: ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು. ಅವರು ಸೋಮವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು ಸ್ಟೆಮ್ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಕರಿಗಾಗಿ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕಮಹಾ ವಿದ್ಯಾಲಯವು ಉಡುಪಿ ಜಿಲ್ಲಾ ಖಾಸಗಿ ಅನುದಾನಿತ ಮತ್ತುಅನುದಾನರಹಿತ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರ ಸಂಘದಸಹಯೋಗದೊಂದಿಗೆ ದಿನಾಂಕ 28 ಅಕ್ಟೋಬರ್ 2025 ರಂದು“ಭವಿಷ್ಯ ರೂಪಿಸುವಲ್ಲಿ ಪ್ರೇರಣಾದಾಯಕ ಶಿಕ್ಷಕರು” ಎಂಬವಿಷಯದಡಿ ಒಂದು ದಿನದ ಪದವಿ ಪೂರ್ವ ಶಿಕ್ಷಕರ ಅಭಿವೃದ್ಧಿಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉಡುಪಿಯ ಪದವಿಪೂರ್ವ ಶಿಕ್ಷಣ ಇಲಾಖೆಯಉಪನಿರ್ದೇಶಕರಾದ ಶ್ರೀ ಮಾರುತಿ ಮಾಲ್ಗೆ ಉದ್ಘಾಟಿಸಿದರು. ಇವರುಮಾತನಾಡಿ ವಿದ್ಯಾರ್ಥಿಗಳನ್ನು ಸದೃಢ ನಾಗರೀಕರನ್ನಾಗಿ ರೂಪಿಸಲುಶಿಕ್ಷಕರನ್ನು ಕೃತಕ ಬುದ್ಧಿಮತ್ತೆ ಮತ್ತು ಸಮಾಲೋಚನಸಾಧನಗಳೊಂದಿಗೆ ಸಬಲೀಕರಣಗೊಳಿಸುವ ಮಹತ್ವವನ್ನುತಿಳಿಸಿದರು. ಉಡುಪಿ ಜಿಲ್ಲಾ […]
ರಾಜ್ಯದ ಪ್ರಮುಖ ನಗರಗಳ ನಡುವೆ ವಿಶೇಷ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ!

ಹುಬ್ಬಳ್ಳಿ: ಕರ್ನಾಟಕದ ಪ್ರಮುಖ ನಗರಗಳ ನಡುವೆ ಪ್ರಯಾಣಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ವಿಶೇಷ ರೈಲುಗಳ ನಿಯಮಿತ ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.07339/ 07340 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ–ಕೆಎಸ್‌ಆರ್ ಬೆಂಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ ಸೂಪರ್‌ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು 20687/ 20688 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ–ಕೆಎಸ್‌ಆರ್ ಬೆಂಗಳೂರು– ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಎಂದು ನಿಯಮಿತಗೊಳಿಸಲಾಗುತ್ತದೆ. 20687 ಸಂಖ್ಯೆಯ ರೈಲು ಡಿಸೆಂಬರ್ 8ರಿಂದ ರಾತ್ರಿ 11.15ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 6.50ಕ್ಕೆ […]
ಬೈಕ್ ಟ್ಯಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ.

ಚೆನ್ನೈ: ಬೈಕ್ ಟ್ಯಾಕ್ಸಿ ಚಾಲಕನಾಗಿ (Taxi Driver) ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬ ಮಹಿಳೆಯೊಬ್ಬಳ (22) ಮೇಲೆ ಲೈಂಗಿನ ದೌರ್ಜನ್ಯ ಎಸಗಿರುವ ಆರೋಪದಡಿ ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಚೆನೈನಲ್ಲಿ ಮಂಗಳವಾರ (ಅ.28) ನಡೆದಿದೆ. ಆರೋಪಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಹಾಗೆಯೇ ಈತನ ಮೋಟಾರ್ ಸೈಕಲ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಏನು?ಪೊಲೀಸರ ಪ್ರಕಾರ, ಯುವತಿಯು ಸೋಮವಾರ ರಾತ್ರಿ ಚೆನ್ನೈನ ಪಕ್ಕಿಕರಣೈನಲ್ಲಿರುವ ತನ್ನ ಸ್ನೇಹಿತನನ್ನು ಭೇಟಿಯಾಗಲು ಬೈಕ್ […]