ನಂತೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಸಿಟಿ ಬಸ್; ಅಪಾಯದಿಂದ ಪಾರಾದ ಪ್ರಯಾಣಿಕರು

ಮಂಗಳೂರು: ಸಿಟಿ ಬಸ್ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಗುದ್ದಿದ ಘಟನೆ ನಂತೂರು ಸಮೀಪ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಅಪಾಯ ಉಂಟಾಗಿಲ್ಲ. ವಾಮಂಜೂರು ಕಡೆಯಿಂದ ಬರುತ್ತಿದ್ದ ಸಾಯೀಷ ಹೆಸರಿನ 3 ನಂಬರಿನ ಸಿಟಿ ಬಸ್ ನಂತೂರು ಸಿಗ್ನಲ್ ದಾಟಿ ಮಲ್ಲಿಕಟ್ಟೆ ಕಡೆಗೆ ವೇಗವಾಗಿ ಬರುತ್ತಿತ್ತು. ಬಸ್ ಮುಂಭಾಗ ಸ್ಕೂಲ್ ಬಸ್ ಸಾಗುತ್ತಿದ್ದು, ಹಿಂಭಾಗ ಮತ್ತೊಂದು ಲೋಕಲ್ ಬಸ್ ಸಾಗುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಬಸ್‌ನ ಸ್ಟೇರಿಂಗ್ ಲಾಕ್‌ನ ಎಂಡ್ ಕಟ್ ಆಗಿ, ಟೈರ್ ನಿಯಂತ್ರಣ ಕಳೆದುಕೊಂಡು ಚಾಲಕನ ಕೈಯಿಂದ […]
ಕೀನ್ಯಾ: ಲಘು ವಿಮಾನ ಪತನ; 12 ಮಂದಿ ಮೃತ್ಯು

ಕೀನ್ಯಾದಲ್ಲಿ ಲಘು ವಿಮಾನ ಪತನಗೊಂಡು ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಪ್ರದೇಶವಾದ ಕ್ವಾಲೆ ಕೌಂಟಿಯ (Kenya’s Kwale County) ಸಿಂಬಾ ಗೋಲಿನಿ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ವಿಮಾನ ಪತನಗೊಂಡಿದೆ. ವಿಮಾನವು 0530Z ನಲ್ಲಿ ಡಯಾನಿಯಿಂದ ಹೊರಟು ಕಿಚ್ವಾ ಟೆಂಬೊಗೆ (Diani to Kichwa Tembo) ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ. ಇಂದು ಬೆಳಗ್ಗೆ 8:30 ರ ಸುಮಾರಿಗೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಡಯಾನಿ ವಾಯುನೆಲೆಯಿಂದ ಸುಮಾರು 40 ಕಿಲೋಮೀಟರ್ […]
ಮುಲ್ಕಿ: ಇಂದಿರಾನಗರ ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ.!

ಉಡುಪಿ: ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಸಂಭವಿಸಿದೆ. ಕಾರ್ಕಳ ಬೈಲೂರಿನ ನಿವಾಸಿ 55 ವರ್ಷದ ಪ್ರಭಾಕರ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಮೂಲ್ಕಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಜೀವ ರಕ್ಷಕ ತಂಡದ ದಾವೂದ್, ಪ್ರಸಾದ್ ಹಾಗೂ ಮಹೇಶ್ ತಕ್ಷಣ ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಜೀವ ರಕ್ಷಕ ಆಂಬುಲೆನ್ಸ್ ಮೂಲಕ ಮೂಲ್ಕಿ ಶವಾಗಾರಕ್ಕೆ […]
ದೆಹಲಿಯ ವಿಮಾನ ನಿಲ್ದಾಣದಲ್ಲೇ ಹೊತ್ತಿ ಉರಿದ ಬಸ್

ನವದೆಹಲಿ: ದೆಹಲಿಯ ವಿಮಾನ ನಿಲ್ದಾಣದಲ್ಲೇ ಬಸ್ ಹೊತ್ತಿ ಉರಿದಿದೆ. ವಿಮಾನದ ಪಕ್ಕದಲ್ಲೇ ಬಸ್ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3ನಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆದೊಯ್ಯುವ ಬಸ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದ್ದರಿಂದ ಧಗಧಗಿಸಿ ಹೊತ್ತಿ ಉರಿದಿದೆ.
ಮಂಗಳೂರು: ಬ್ಯಾಡ್ಮಿಂಟನ್ ಆಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು: ಮಂಗಳೂರು ನಗರದ ಉರ್ವದ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್-2025 ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸ್ವಲ್ಪ ಹೊತ್ತು ಬ್ಯಾಡ್ಮಿಂಟನ್ ಆಡಿದರು. ಅದಕ್ಕಿಂತ ಮೊದಲು ಸ್ಪರ್ಧಿಗಳ ಬ್ಯಾಡ್ಮಿಂಟನ್ ಆಟವನ್ನು ವೀಕ್ಷಿಸಿ ಸಂಭ್ರಮಿಸಿದರು. ಈ ವೇಳೆ ಸಿದ್ದರಾಮಯ್ಯನವರು ಕ್ರೀಡಾಳುಗಳಿಗೆ ಹಸ್ತಲಾಘವ ಮಾಡಿ ಶುಭ ಹಾರೈಸಿದರು.