ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ […]

ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ಟೆಲಿಕಾಲರ್ ಮತ್ತು ಆಫೀಸ್ ಸ್ಟಾಫ್ ಹುದ್ದೆಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ಟೆಲಿಕಾಲರ್ ಮತ್ತು ಆಫೀಸ್ ಸ್ಟಾಫ್ ಹುದ್ದೆಗೆ ಬೇಕಾಗಿದ್ದಾರೆ. ಅಭ್ಯರ್ಥಿಗಳು ಡಿಗ್ರಿ ವಿದ್ಯಾರ್ಹತೆ ಹೊಂದಿದ್ದು, ಫ್ರೆಶರ್ಸ್ಗೆ ಆದ್ಯತೆ ನೀಡಲಾಗುವುದು.ಕೆಲಸದ ಸಮಯ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ.ಭಾನುವಾರ ರಜಾದಿನ. ಸಂಪರ್ಕಿಸಿ: 9663579219

ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ನೇಮಕ.

ನವದೆಹಲಿ: ಇಂದು ಜಸ್ಟೀಸ್​ ಸೂರ್ಯಕಾಂತ್ (Surya kant) ಅವರನ್ನು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. ಕೇಂದ್ರ ಕಾನೂನು ಸಚಿವಾಲಯ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದು, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇದೇ ನವೆಂಬರ್ 24 ರಂದು ಸಿಜೆಐ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ. ಫೆಬ್ರವರಿ 9, 2027 ರವರೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್​ ಮುಂದುವರಿಯಲಿದ್ದಾರೆ. ಈ ಮಧ್ಯೆ, ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್ 23ರಂದು ನಿವೃತ್ತಿ […]

ಡಾ.ರಾಜ್ ಕುಮಾರ್,ಪುಟ್ಟಣ್ಣ ಕಣಗಲ್ ಪ್ರಶಸ್ತಿ ಘೋಷಣೆ: ಉಮಾಶ್ರೀ ಸೇರಿ ಹಲವು ಕಲಾವಿದರಿಗೆ ಪ್ರಶಸ್ತಿ.

ಬೆಂಗಳೂರು: 2019ನೇ ಸಾಲಿನ ಡಾ.ರಾಜ್​ಕುಮಾರ್​, ಪುಟ್ಟಣ್ಣ ಕಣಗಲ್​ ಮತ್ತು ಡಾ.ವಿಷ್ಣುವರ್ಧನ್​ ಪ್ರಶಸ್ತಿ ಸೇರಿದಂತೆ ಚಲನಚಿತ್ರ ಸಾಹಿತ್ಯ ವಾರ್ಷಿಕ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಗುರುವಾರ (ಅ.30) ರಂದು ಘೋಷಿಸಿದೆ.ಈ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಹಿರಿಯ ನಟಿ ಉಮಾಶ್ರೀ ಅವರಿಗೆ ನೀಡಲಾಗಿದೆ. ಅಲ್ಲದೆ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ಎನ್. ಆರ್. ನಂಜುಂಡೇಗೌಡ ಅವರಿಗೆ ನೀಡಿದ್ದಾರೆ. ಡಾ. ವಿಷ್ಣುವರ್ಧನ್ ಪ್ರಶಸ್ತಿಗೆ ನಿರ್ಮಾಪಕರು ಹಾಗೂ ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೊ ಅವರು ಭಾಜನರಾಗಿದ್ದಾರೆ.ಈ ಮೂರು […]

ಉಡುಪಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಬಾಗಲಕೋಟೆ ನಿವಾಸಿ ರಂಗಪ್ಪ (62) ಮೃತದುರ್ದೈವಿ. ಅವರು ಎಂಜಿಎಂ ಕಾಲೇಜಿನ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಅವರು ರಸ್ತೆ ದಾಟುತ್ತಿದ್ದ ವೇಳೆ ಅತೀ‌ ವೇಗವಾಗಿ ಬಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಅವರ ತಲೆಗೆ ಗಂಭೀರಗಾಯವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಗಾಯಾಳನ್ನು ಅಜ್ಜರಕಾಡು […]