ಉಡುಪಿ:ಬೈಂದೂರು ಪ.ಪಂ : ಕರಡು ಮತದಾರರ ಪಟ್ಟಿ ಪ್ರಕಟ

ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಬೈಂದೂರು ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ಸಾರ್ವತ್ರಿಕ ಚುನಾವಣೆ 2025 ಕ್ಕೆ ಸಂಬಂಧಿಸಿದಂತೆ ಭಾವಚಿತ್ರವಿಲ್ಲದ 20 ವಾರ್ಡಿನ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಕಛೇರಿಯಲ್ಲಿ, ಬೈಂದೂರು ತಾಲೂಕು ಕಛೇರಿ ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಕಛೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಸದರಿ ಕರಡು ಮತದಾರರ ಪಟ್ಟಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಅಧೀಕೃತ ವೆಬ್‌ಸೈಟ್ https://udupi.nic.in/en/ ನಲ್ಲಿಅಪ್‌ಲೋಡ್ ಮಾಡಲಾಗಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆಗಳು […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕಿನ ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಆಟೋ ರಿಕ್ಷಾ ಚಾಲಕನಾಗಿದ್ದ ಮೊಹಮ್ಮದ್ ಶಾರೀಕ್ (30) ಎಂಬ ವ್ಯಕ್ತಿಯು ಅ.18 ರಂದು ಮನೆ ಬಿಟ್ಟು ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, […]