ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ

ಉಡುಪಿ: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು […]

ವಂಡ್ಸೆ ಗ್ರಾಮ ಪಂಚಾಯತ್ ಕಾರ್ಯ ಇಡೀ ರಾಜ್ಯಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಮಣಿಪಾಲ ಮತ್ತು ಉಡುಪಿಯ ಮೆಕಪ್ ಕಲಾವಿದರೇ ಗಮನಿಸಿ!

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ಮತ್ತು ಓರೇನ್ ಇಂಟರ್‌ನ್ಯಾಷನಲ್ ಸ್ಕೂಲ್ ಆಫ್ ಬ್ಯೂಟಿ ಅಂಡ್ ವೆಲ್ಲ್‌ನೆಸ್ ಅವರ ಸಹಯೋಗದಲ್ಲಿ ‘ಕೌಶಲ್ 2025 – ಸ್ಕಿಲ್ ಫೆಸ್ಟ್‌’ನಲ್ಲಿ ನಡೆಯುವಬೆಸ್ಟ್ ಮೇಕ್ಓವರ್ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಆಕರ್ಷಕ ಹಾಗೂ ರೋಚಕ ಬಹುಮಾನಗಳನ್ನು ಗೆಲ್ಲಿರಿ. ನಿಮ್ಮ ಕೌಶಲ್ಯವನ್ನು ಪ್ರದರ್ಶಿಸಿ, ನಿಮ್ಮ ಅಭಿರುಚಿಯನ್ನು ಹಂಚಿಕೊಳ್ಳಿ, ಮತ್ತು ಶ್ರೇಷ್ಠರೊಂದಿಗೆ ಸ್ಪರ್ಧಿಸಿ. ಪ್ರವೇಶ ಸೀಮಿತ — ಇಂದೇ ನೋಂದಾಯಿಸಿ ಮತ್ತು ರೋಚಕ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. 👉 ವಿವರಗಳಿಗೆ ಹಾಗೂ ನೋಂದಣಿಗೆ:📞 […]

ಪ್ರತಿಷ್ಠಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸತೀಶ್ ಬೇಕಲ್.

ಉಡುಪಿ: ಆರೋಗ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಪ್ರತಿಷ್ಠಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸತೀಶ್ ಬೇಕಲ್ ಅವಿಶ್ರಾಂತ ಸಮರ್ಪಣೆ, ಅಚಲ ಬದ್ಧತೆ ಮತ್ತು ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಿರತ ಉತ್ಸಾಹವು ಗಮನಕ್ಕೆ ಬರದೆ ಹೋಗಿಲ್ಲ. ಆರೋಗ್ಯ ಮತ್ತು ಸಾಮಾಜಿಕ ಸೇವೆಯಲ್ಲಿ ನಿಸ್ವಾರ್ಥ ಪ್ರಯತ್ನಗಳು ಅಸಂಖ್ಯಾತ ರೋಗಿಗಳು ಮತ್ತು ಅವರ ಕುಟುಂಬಗಳ ಜೀವನದ ಮೇಲೆ ಆಳವಾದ ಪರಿಣಾಮ ಬೀರಿವೆ. ಆರೋಗ್ಯ ಸೇವೆಯಲ್ಲಿ ನಿಮ್ಮ ಪರಂಪರೆಯು ನಿಮ್ಮ ಕಠಿಣ ಪರಿಶ್ರಮ, ಸಹಾನುಭೂತಿ ಮತ್ತು ದಯೆಗೆ ಸಾಕ್ಷಿಯಾಗಿದೆ. ಬೇಕಲ್ […]

ಉಡುಪಿ:ಜನಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ಜನಸ್ನೇಹಿಯಾಗಿ ಸ್ಪಂದಿಸಬೇಕು: ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಉಡುಪಿ: ಜಿಲ್ಲೆಯ ಎಲ್ಲಾ ಅನುಷ್ಠಾನಾಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಜನಸ್ನೇಹಿಯಾಗಿ ತಮ್ಮ ಕಾರ್ಯಗಳನ್ನು ನಿರ್ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬಂದಾಗ ಅವರ ಕೆಲಸ ಕಾರ್ಯಗಳನ್ನು […]