ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆ.

ಉಡುಪಿ: ಸಹಕಾರಿ ಸಂಸ್ಥೆಯನ್ನು ಹುಟ್ಟು ಹಾಕುವುದು ಸುಲಭವಲ್ಲ, ಅದನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಿಕೊಂಡು ಹೋಗಲು ಎಲ್ಲರ ಸಹಕಾರ ಅಗತ್ಯ. ಈ ಸಂಸ್ಥೆಯು ಶೀಘ್ರವೇ ಅಭಿವೃದ್ಧಿಯನ್ನು ಹೊಂದಿ ಜನರಿಗೆ ಸೇವೆ ನೀಡುವಂತಹ ಸಂಸ್ಥೆಯಾಗಿ ಬೆಳೆಯಲಿ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾರೈಸಿದರು.ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೊಲಿಕ್ ಚರ್ಚ್ ಸಭಾಂಗಣದಲ್ಲಿ ಭಾನುವಾರ ನಡೆದ ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭದ ಸಭಾಕಾರ್ಯಕ್ರಮವನ್ನು […]
ಕರಾವಳಿಯ ಅತಿದೊಡ್ಡ ಸಾಫ್ಟ್ ವೇರ್ ಕಂಪೆನಿಯಲ್ಲಿ ಉದ್ಯೋಗವಕಾಶ!
ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರನ್ನು ಸಚಿವರು ಅಭಿನಂದಿಸಿದರು.ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಚಿವರು, […]
ಉಡುಪಿ:ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತ್ಯು

ಮಲ್ಪೆ: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ(ಎಎಸ್ಸೆ) ವಿಶ್ವನಾಥ್ (56) ಎಂಬವರು ರವಿವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು ಎಂದು ತಿಳಿದುಬಂದಿದೆ.
ಹಿರಿಯ ಯಕ್ಷಗಾನ ಕಲಾವಿದ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ ನಿಧನ.

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಶನಿವಾರ ( ನವೆಂಬರ್-01) ಬೆಳಗಿನ ಜಾವ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಕುಂಬಳೆ ಸೀಮೆಯ ಎಡನಾಡು ಗ್ರಾಮದ ಶೆಡಂಪಾಡಿ ಎಂಬಲ್ಲಿ ಕೃಷ್ಣ ಭಟ್ಟ – ಹೇಮಾವತಿ ದಂಪತಿ ಪುತ್ರನಾಗಿ 1951 ಅಕ್ಟೋಬರ್ 13 ರಂದು ಜನಿಸಿದ ಶಂಭು ಶರ್ಮ, ತಾಳಮದ್ದಳೆ ಅರ್ಥ ಹೇಳುವ […]