ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪನ: 7 ಮಂದಿ ಮೃತ್ಯು, 150ಕ್ಕೂ ಹೆಚ್ಚು ಮಂದಿಗೆ ಗಾಯ!

ಅಫ್ಘಾನಿಸ್ತಾನ: ಉತ್ತರ ಅಫ್ಘಾನಿಸ್ತಾನದ ಮಜಾರ್-ಎ-ಶರೀಫ್ ನಗರದ ಬಳಿ ಇಂದು(ನ. 03) ಮುಂಜಾನೆ 6.3 ತೀವ್ರತೆಯ ಭಾರಿ ಭೂಕಂಪನ(Earthquake) ಸಂಭವಿಸಿದ್ದು, ಕನಿಷ್ಠ 7 ಜನ ಮೃತಪಟ್ಟಿದ್ದು, ಸುಮಾರು 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಮಜಾರ್-ಎ ಶರೀಫ್ ಬಳಿಯ ಉತ್ತರ ಪ್ರಾಂತ್ಯಯದ ಸಮಂಗನ್ ಆರೋಗ್ಯ ಇಲಾಖೆ ವಕ್ತಾರ ಸಮೀಮ್ ಜೋಯಂಡಾ ರಾಯಿಟರ್ಸ್ ಜೊತೆ ಮಾತನಾಡಿದ್ದು, ಇಂದು ಬೆಳಿಗ್ಗೆ ಸಂಭವಿಸಿದ ಭೂಕಂಪನದಲ್ಲಿ ಒಟ್ಟು 150 ಜನರು ಗಾಯಗೊಂಡಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವನ್ನು […]
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಣತಿಗೆ ದ್ವಿತೀಯ ಪ್ರಶಸ್ತಿ.

ಕುಂದಾಪುರ: ಮದರ್ ತೆರೇಸಾ ಪದವಿ ಪೂರ್ವ ಕಾಲೇಜು, ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿಯವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ” ಬಗ್ಗೆ ಆಯೋಜಿಸಿದ MEMES ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು: ಕನ್ನಡ ರಾಜ್ಯೋತ್ಸವ ಆಚರಣೆ.

ಮೂಡ್ಲಕಟ್ಟೆ: ಶತ ಕಂಠ ಗಾಯನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘ ಹಾಗೂ ಯೂತ್ ವಿಂಗ್ ತಂಡದ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಶತ ಕಂಠ ಗಾಯನ – ಕನ್ನಡ ಗೀತೆಗಳ ಭಾವ ಯಾನ” ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕನ್ನಡಾಂಬೆಗೆ ಕರ್ನಾಟಕ ಬಾವುಟವನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕನ್ನಡ ಗೀತೆಗಳಲ್ಲಿ ಪ್ರಸಿದ್ದಿ ಪಡೆದ ಹಚ್ಚೇವು ಕನ್ನಡದ ದೀಪ, ಜೋಗದ ಸಿರಿ ಬೆಳಕಿನಲ್ಲಿ, ಜಯ ಭಾರತ ಜನನಿಯ ,ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಇತ್ಯಾದಿ ಹಾಡುಗಳು […]