ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದರು. ಜನಪರ ಕಾಳಜಿಯ ಸೇವೆ: ಅತ್ಯಂತ […]
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್ ನಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ […]
ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ

ಬೆಂಗಳೂರು: ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ.ಮೇಟಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ ಸೂಚಿಸಿದ್ದಾರೆ. ಹಿಂದೆ ನಮ್ಮ ಪಕ್ಷ ಅಧಿಕಾರಲ್ಲಿದ್ದಾಗ ಮೇಟಿ ಅವರು ಸಚಿವರಾಗಿದ್ದರು. ಆಗ ನಾನು ಇನ್ನೂ ಎಮ್ ಎಲ್ ಎ ಆಗಿರಲಿಲ್ಲ. ಈ ವೇಳೆ ನನಗೆ ಅನೇಕ ಕೆಲಸಗಳನ್ನ ಮಾಡಿಕೊಟ್ಟಿದ್ದಾರೆ. ಅವರ ಸಮಾಜದಲ್ಲೂ ಅವರಿಗೆ ಅವರದ್ದೇ ಆದ ಸ್ಥಾನಮಾನ ಇತ್ತು. ಆ ಭಾಗದ ಜ್ವಲಂತ ಸಮಸ್ಯೆಗಳನ್ನ ಬಗೆಹರಿಸುವ ಶಕ್ತಿ ಎಚ್.ವೈ.ಮೇಟಿ ಅವರಿಗೆ […]
ಡಾ. ಪ್ರತಿಭಾ ಎಂ. ಪಟೇಲ್ ರವರಿಗೆ ಪ್ರಶಸ್ತಿ.

ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲೆ ಡಾ.ಪ್ರತಿಭಾ ಎಂ ಪಟೇಲ್ ಅವರಿಗೆ ಪ್ಲಸ್ ನೈನ್ ಒನ್ ಮೀಡಿಯಾ ಬೆಂಗಳೂರು ಇವರು ನವೆಂಬರ್ ಒಂದರಂದು ಆಯೋಜಿಸಿದ್ದ ಒಂಬತ್ತನೇ ಉನ್ನತ ಶಿಕ್ಷಣ ನಾವೀನ್ಯತೆ ಮತ್ತು ತಂತ್ರಜ್ಞಾನ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಸಾಂಸ್ಥಿಕ ಶ್ರೇಷ್ಠತೆಗಾಗಿ ವರ್ಷದ ಪ್ರಾಂಶುಪಾಲರು’ ಎಂದು ಗುರುತಿಸಲ್ಪಟ್ಟು ಗೌರವಿಸಲ್ಪಟ್ಟಿದ್ದಾರೆ.
ಉಡುಪಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ; ತೆಪ್ಪೋತ್ಸವ ಸಹಿತ ರಥೋತ್ಸವಕ್ಕೆ ಚಾಲನೆ

ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ತುಳಸೀ ಪೂಜೆ, ಕ್ಷೀರಾಬ್ದಿ ಪೂಜೆ, ತೆಪ್ಪೋತ್ಸವ ಸಹಿತ ವಾರ್ಷಿಕ ಲಕ್ಷದೀಪೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ದ್ವಾದಶಿಯಾದ ಕಾರಣ ಮುಂಜಾನೆಯಿಂದಲೇ ಪೂಜೆಗಳು ಆರಂಭಗೊಂಡವು. ಮಹಾಪೂಜೆಯನ್ನು ನಡೆಸಿದ ಬಳಿಕ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರ ತೀರ್ಥ ಶ್ರೀಪಾದರು ತುಳಸೀ ಪೂಜೆಯನ್ನು ನೆರವೇರಿಸಿದರು. ಇದಕ್ಕೂ ಮುನ್ನ ಒಂದು ತಿಂಗಳಿನಿಂದ ನಡೆಯುತ್ತಿದ್ದ ಪಶ್ಚಿಮಜಾಗರ ಪೂಜೆಯನ್ನು ಶ್ರೀಪಾದರು ಸಮಾಪನಗೊಳಿಸಿದರು. ಸಂಜೆ ಮಧ್ವಸರೋವರದ ಮಧ್ಯದ ಮಂಟಪದಲ್ಲಿ ಕ್ಷೀರಾಬ್ದಿ ಅರ್ಘ್ಯವನ್ನು ನೀಡಲಾಯಿತು. ಮಧ್ಯಾಹ್ನ ರಥಬೀದಿಯಲ್ಲಿ ಅಳವಡಿಸಿದ ದಳಿಗಳ […]