ಮಣಿಪಾಲ: ನಾಳೆ (ನ.6) ವಿಶೇಷ ಜಂಟಿ ಸಭೆ; ರೋಟರಿ k2k IFMR ಇಂಡಿಯಾ ರ್ಯಾಲಿ ತಂಡದ ಸಾಹಸಮಯ ಯಾತ್ರಿಕರು ಭಾಗಿ

ಮಣಿಪಾಲ: ರೋಟರಿ ಕ್ಲಬ್–ಮಣಿಪಾಲ, ರೋಟರಿ ಕ್ಲಬ್–ಮಣಿಪಾಲ ಟೌನ್ ಮತ್ತು ಐಎಫ್‌ಎಂಆರ್ (IFMR) ಉಡುಪಿ ಘಟಕದ ಸಂಯುಕ್ತ ಆಶ್ರಯದಲ್ಲಿ ಒಂದು ವಿಶೇಷ ಜಂಟಿ ಸಭೆಯು ನವೆಂಬರ್ 6ರಂದು ಬೆಳಗ್ಗೆ 8.00 ಗಂಟೆಗೆ ಮಣಿಪಾಲದ ಅನಂತ್ ನಗರದಲ್ಲಿರುವ ರೋಟರಿ ಸೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಈ ಸಭೆಯಲ್ಲಿ “ರೋಟರಿ K2K IFMR ಇಂಡಿಯಾ ರ್ಯಾಲಿ” ತಂಡದ ಸಾಹಸಮಯ ಯಾತ್ರಿಕರು ಭಾಗವಹಿಸಲಿದ್ದಾರೆ. ಈ ಬೃಹತ್ ಬೈಕ್ ರ‍್ಯಾಲಿಯು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ” ಉತ್ತಮ ಪ್ರಕೃತಿ ಮತ್ತು ಆರೋಗ್ಯದಿಂದ ಶಾಂತಿ” ಎಂಬ […]
ನಂದಿನಿ ತುಪ್ಪ ಬೆಲೆ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆ: ಇಂದಿನಿಂದಲೇ ಜಾರಿ!

ಬೆಂಗಳೂರು: ಜಿಎಸ್ ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಶಾಕ್ ನೀಡಿದೆ. ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆ ಮಾಡಿದೆ. ಇತ್ತೀಚಿಗಷ್ಟೇ ಜಿಎಸ್ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗ ಗ್ರಾಹಕರಿಗೆ ಬಿಸಿ ತುಪ್ಪವಾಗಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ನಂದಿನಿ ತುಪ್ಪಕ್ಕೆ ಈ […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು: “ಒತ್ತಡ ಜಾಗೃತಿ ದಿನಾಚರಣೆ” ಕಾರ್ಯಕ್ರಮ.

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆಯ ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದಿಂದ, ಡಾ. ಎ.ವಿ. ಬಾಲಿಗಾ ಮೆಮೋರಿಯಲ್ ಆಸ್ಪತ್ರೆಯ ಘಟಕವಾದ ಅಭಯ ಮಾನಸಿಕ ಪುನರ್ವಸತಿ ಕೇಂದ್ರದಲ್ಲಿ “ಒತ್ತಡ ಜಾಗೃತಿ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮವು ದೀಪಪ್ರಜ್ವಲನೆಯೊಂದಿಗೆ ಆರಂಭವಾಯಿತು. ದೀಪಪ್ರಜ್ವಲನೆಯನ್ನು ಅಭಯ ಪುನರ್ವಸತಿ ಕೇಂದ್ರದ ಶ್ರೀಮತಿ ಮೈತ್ರಿ ಶೆಟ್ಟಿ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ […]
ಉಡುಪಿ: ನ.8ರಂದು ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ- 351 ಕುಂಭ ಕಲಶ ಮೆರವಣಿಗೆ

ಉಡುಪಿ: ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಕೃಷ್ಣಮಠದ ಸಂಯುಕ್ತ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಕೆ.ಎಸ್. ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಅಜ್ಜರಕಾಡಿನ ಭುಜಂಗ್ ಪಾರ್ಕ್ […]
ಆರೋಗ್ಯ ಸಂಜೀವಿನಿ ಯೋಜನೆ: ಘೋಷಣಾ ಅವಧಿ ವಿಸ್ತರಣೆ.

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಒಳಪಡಲು ಅಥವಾ ಒಳಪಡದೇ ಇರಲು ಲಿಖಿತ ಘೋಷಣೆ ಸಲ್ಲಿಸುವ ಅವಧಿಯನ್ನು ನ.25ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.ಸರ್ಕಾರಿ ನೌಕರರು ಅವರ ಕುಟುಂಬದ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಆರೋಗ್ಯ ಸಂಜೀವಿನಿ ಯೋಜನೆ ಅ.1ರಿಂದ ಆರಂಭವಾಗಿದ್ದು, ಅ.18 ರ ಒಳಗೆ ತಮ್ಮ ಮೇಲಧಿಕಾರಿಗಳ ಮೂಲಕ ಲಿಖಿತ ಆಕ್ಷೇಪ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಬಹುತೇಕ […]