ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ.

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದು, ನಕಲಿ ಖಾತೆಯಲ್ಲಿ ಕಚೇರಿಯಲ್ಲಿ ಕುಳಿತಿರುವ ಪ್ರೊಫೈಲ್ ಫೋಟೊ ಮತ್ತು ಹಿಂದಿನ ಕಮಿಷನರ್ ಅಧಿಕಾರ ಹಸ್ತಾಂತರ ಮಾಡುವ ವಾಲ್ ಪೇಪರ್ ಹಾಕಿದ್ದು, ಇದು ಸೈಬರ್ ವಂಚಕರ ಕೃತ್ಯ ಅಗಿದು, ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ, […]
ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್: ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಗೆ ವಂಚನೆ.

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ರಚಿಸಿ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ ವಂಚಿಸುತ್ತಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್ http://karnatakatemplesaccommodation.com ಬದಲಿಗೆ ಅಪರಿಚಿತರು ಅಕ್ರಮ ಲಾಭದ ಉದ್ದೇಶದಿಂದ karnatakatempleaccommodation ಎಂಬ ಹೆಸರಿನ ಅನಧಿಕೃತ ನಕಲಿ ವೆಬ್‌ಸೈಟ್‌ನ್ನು ರಚಿಸಿದ್ದು, ಈ ನಕಲಿ ವೆಬ್‌ಸೈಟ್ ಮೂಲಕ ಹಲವಾರು ಜನರಿಗೆ ಲಲಿತಾಂಬಿಕಾ ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸಿದ್ದಾರೆ. ಅವರಿಂದ ವಾಟ್ಸಾಪ್ ತಂತ್ರಾಂಶದಲ್ಲಿ ಪೋನ್ ಪೇಯ ಕ್ಯೂಆರ್ ಕೋಡ್‌ನ್ನು […]
ಕಿರ್ಲೋಸ್ಕರ್‌ನಿಂದ ರಾಜ್ಯದಲ್ಲಿ 3,000 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ್

ಬೆಂಗಳೂರು: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ₹3,000 ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಉನ್ನತಮಟ್ಟದ ನಿಯೋಗದೊಂದಿಗೆ ಪುಣೆಯಲ್ಲಿ ರೋಡ್ ಶೋ ನಡೆಸಿ, ಹೂಡಿಕೆ ಕುರಿತು ಹತ್ತಕ್ಕೂ ಹೆಚ್ಚು ಉದ್ಯಮಿಗಳ ಜತೆ ಅವರು ಮಾತುಕತೆ ನಡೆಸಿದರು. ರಾಜ್ಯದಲ್ಲಿ ಬಂಡವಾಳ ಹೂಡಲು ವಿಪ್ರೊ ಪ್ಯಾರಿ, ಅಟ್ಲಾಸ್ ಕಾಪ್ಕೊ, ಬೆಲ್–ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಮತ್ತು ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ ಉದ್ಯಮಗಳು ಆಸಕ್ತಿ ತೋರಿಸಿವೆ. ಬಂಡವಾಳ ತೊಡಗಿಸಲು […]
ಉಡುಪಿ:ಗೋಪಾಲಕೃಷ್ಣ ಮಂದಿರ, ಮುಂಡ್ಕಿನಜೆಡ್ಡು ಇದರ ಸುವರ್ಣ ಸಂಭ್ರಮದ ಪ್ರಯುಕ್ತ ಬಾಲಾಲಯದಲ್ಲಿ ದೇವರುಗಳ ಪ್ರತಿಷ್ಠಾಪನ ಕಾರ್ಯಕ್ರಮ

ಉಡುಪಿ:ಶ್ರೀ ಗೋಪಾಲಕೃಷ್ಣ ಮಂದಿರ, ಮುಂಡ್ಕಿನಜೆಡ್ಡು ಇದರ ಸುವರ್ಣ ಸಂಭ್ರಮದ ಪ್ರಯುಕ್ತ ಮಂದಿರದ ಸಮಗ್ರ ಜೀರ್ಣೋದ್ಧಾರದ ಪ್ರಾರಂಭಿಕ ಹಂತವಾಗಿ ದಿನಾಂಕ 3-11-2025ರ ಸೋಮವಾರ ಮಂದಿರದಲ್ಲಿನ ದೇವರುಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸುವ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರದ ಸಮಗ್ರ ಮನವಿ ಬಿಡುಗಡೆಗೊಳಿಸಲಾಯಿತು. ಲೋಗೋ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಡಾ ಕೆ ಕೆ ಆಚಾರ್ಯ, ಶಶಿಕಲಾ ಕೆ ಆಚಾರ್ಯ, ಪುರುಷೋತ್ತಮ ಪ್ರಭು , ರಾಜೇಶ ಪಾಟೀಲ್, ಗೋಪಾಲಕೃಷ್ಣ ಆಚಾರ್ಯ, ರವಿಕುಮಾರ ಶೆಟ್ಟಿ, ರವಿರಾಜ ಭಟ್, ಅಶೋಕ ಸಾಮಂತ, ಸತೀಶ ಸಾಮಂತ, ಭರತ್ ಆಚಾರ್ಯ, […]
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು

ಉಡುಪಿ:ಸಿ ಎ ಫೈನಲ್ ಪರೀಕ್ಷೆಯಲ್ಲಿ ತ್ರಿಶಾ ಕ್ಲಾಸಸ್ ನ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಅಪೇಕ್ಷ ಎ ಕಾಮತ್ ಉತ್ತೀರ್ಣ: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅಪೇಕ್ಷ ಎ ಕಾಮತ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಬಸ್ರೂರ್ ಉಡುಪಿಯ ಅಶೋಕ್ ಕಾಮತ್ ಹಾಗೂ ಅರ್ಚನಾ ಕಾಮತ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಎಂ/ಎಸ್ ಸುರೇಂದ್ರ ನಾಯಕ್ ಮತ್ತು […]