ನಾಳೆ (ನ.7) ಹುಟ್ಟೂರು ಉಡುಪಿಯಲ್ಲಿ ಚಿತ್ರನಟ ಹರೀಶ್ ರಾಯ್ ಅಂತ್ಯಸಂಸ್ಕಾರ.

ಉಡುಪಿ: ಇಂದು ನಿಧನ ಹೊಂದಿದ ಹಿರಿಯ ನಟ ಹರೀಶ್ ರಾಯ್ ಮೂಲತಃ ಉಡುಪಿಯವರು. ಹರೀಶ್ ರಾಯ್ ಮೂಲ ಹೆಸರು ಹರೀಶ್ ಆಚಾರ್ಯ ಎಂಬುದು ಅನೇಕರಿಗೆ ಗೊತ್ತಿಲ್ಲ. ಉಡುಪಿಯ ಅಂಬಲಪಾಡಿ ಸಮೀಪ ಹರೀಶ್ ಆಚಾರ್ಯ ಅವರ ಮೂಲ ಮನೆ ಇದೆ. ನಾಳೆ ಉಡುಪಿಯಲ್ಲಿ ಹರೀಶ್ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಅವರ ಸಹೋದರ ಸತೀಶ್ ಮಾಹಿತಿ ನೀಡಿದ್ದಾರೆ.ಉಡುಪಿಯಲ್ಲಿ ಸ್ವರ್ಣೋದ್ಯಮ ನಡೆಸುವ ಕುಟುಂಬಕ್ಕೆ ಸೇರಿದ ಹರೀಶ್ ರಾಯ್, ದಶಕಗಳ ಹಿಂದೆ ಪ್ರಖ್ಯಾತಿ ಪಡೆದಿದ್ದ ನೊವೆಲ್ಟಿ ಜ್ಯುವೆಲ್ಲರ್ಸ್ ನಡೆಸುತ್ತಿದ್ದರು. ಕೃಷ್ಣಮಠದ ರಥಬೀದಿ […]

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ.

ಉಡುಪಿ: ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ. ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ. ಬಾಲಕಿಯ […]

ಕಾರ್ಕಳ: ವಾಯ್ಸ್ ಆಪ್ ಚಾಣಕ್ಯ-2025 ಸಂಗೀತ ಸ್ಪರ್ಧೆ, ನ.8ರಂದು ಆಯ್ಕೆ ಪ್ರಕ್ರಿಯೆ.

ಕಾರ್ಕಳ ನ.6: ರೋಟರಿ ಕ್ಲಬ್ ಹಾಗೂ ರೋಟರಿ ಆನ್ಸ್ ಕ್ಲಬ್ ಕಾರ್ಕಳ, ವಿಹಾನಾ ಮೆಲೋಡಿಸ್ ಕಾರ್ಕಳ ಇವರ ಆಶ್ರಯದಲ್ಲಿ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆನಡೆಯುವ ವಾಯ್ಸ್ ಆಪ್ ಚಾಣಕ್ಯ -2025 ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 8ರ ಆಯ್ಕೆ ಪ್ರಕ್ರಿಯೆ ನ.8ರಂದು ಬೆಳಿಗ್ಗೆ 10ಗಂಟೆಗೆಕಾರ್ಕಳ ಅನಂತಶಯನ ಕೋರ್ಟ್ ರಸ್ತೆಯ ರೋಟರಿ ಬಾಲ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ […]

ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್: 4ನೇ ವರ್ಷದ ಬೃಹತ್ ಉದ್ಯೋಗ ಮೇಳ ಉದ್ಘಾಟನೆ

ಉಡುಪಿ: ಇಂದು ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸ ಹೊಂದಿದರೂ ಸೂಕ್ತ ಉದ್ಯೋಗ ಪಡೆಯದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸಮಸ್ಯೆಗಳು ಪರಿಹಾರವಾದರೆ, ಹೆಚ್ಚಿನ ಸಮಸ್ಯೆಗಳು ಪರಿಹಾರವಾಗಲಿದೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಕುಂತಳನಗರದ ಗ್ರಾಮೀಣ ಬಂಟರ ಸಂಘದಲ್ಲಿ ಆಯೋಜಿಸಿದ 4ನೇ ವರ್ಷದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು. ಸೋಲಿನಲ್ಲಿ ಗೆಲುವು ಕಾಣುವುದರಲ್ಲಿ […]