ಉಡುಪಿ:ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ, ಹಾಗೂ ದೀಪಾವಳಿ ಸಂಭ್ರಮ.

ಉಡುಪಿ:ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಕನ್ನಡ ನಾಡು ನುಡಿಯ ಸಂಕೇತವಾದ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಹೆಗಡೆ ಕನ್ನಡ ಭಾಷೆಯ ಹಿರಿಮೆಯ ಕುರಿತು ಮಾತನಾಡಿದರು, ಕನ್ನಡ ಉಪನ್ಯಾಸಕ ಆದರ್ಶ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಂಜೆ 6.30 ರಿಂದ ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ದೀಪಾವಳಿ ಸಂಭ್ರಮದ ಶೀರ್ಷಿಕೆಯ ಅಡಿಯಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ […]

ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ್ ವರ್ಗಾವಣೆ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಉಡುಪಿಯಲ್ಲಿ ಏಳು ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ ಇವರನ್ನು ಇದೀಗ ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಲಾಗಿದೆ. ಇವರ ವರ್ಗಾವಣೆಯಿಂದ ಖಾಲಿಯಾದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹುದ್ದೆಗೆ ಈವರೆಗೂ ಯಾವುದೇ ನೇಮಕ ಆಗಿಲ್ಲ ಎಂದು ತಿಳಿದು ಬಂದಿದೆ.

ಉಡುಪಿ:21ನೇ ಶತಮಾನದಲ್ಲಿ ಔದ್ಯೋಗಿಕ ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಾಚೀನ ಭಾರತೀಯ ಜ್ಞಾನ ಪರಂಪರೆಯ ಪ್ರಸ್ತುತತೆ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಟ್ (PIM) ಉಡುಪಿ, ನೇಪಾಳದ ಮಾಧೇಶ್ ವಿಶ್ವವಿದ್ಯಾಲಯ ಮತ್ತು ಉಡುಪಿ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ “21ನೇ ಶತಮಾನದಲ್ಲಿ ಔದ್ಯೋಗಿಕ ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಾಚೀನ ಭಾರತೀಯ ಜ್ಞಾನ ಪರಂಪರೆಯ ಪ್ರಸ್ತುತತೆ” ಎಂಬ ವಿಷಯದ ಮೇಲೆ ಅಂತರರಾಷ್ಟ್ರೀಯ ಸಮ್ಮೇಳನವನ್ನು ನವೆಂಬರ್ 7 ಮತ್ತು 8, 2025 ರಂದು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ. ಈ ಸಮ್ಮೇಳನವನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಶ್ರೀ […]

ಉಡುಪಿ ಮೂಲದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಉಡುಪಿ: ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಹರೀಶ್ ರಾಯ್ […]

ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಬಡಕುಟುಂಬಕ್ಕೆ ಗೋದಾನ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 50ನೇ ಜನ್ಮದಿನದ ಪ್ರಯುಕ್ತ ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ಆರ್ಥಿಕ ಸಂಕಷ್ಟದಲ್ಲಿರುವ ಬಡ ರೈತ ಕುಟುಂಬವೊಂದಕ್ಕೆ ಉಡುಪಿ ಶ್ರೀಕೃಷ್ಣ ಮಠದ ಗೀತಾಮಂದಿರದ ಮುಂಭಾಗ ಗೋ ದಾನ ಮಾಡಲಾಯಿತು. ಕೆಲಸ ಮಾಡುತ್ತಿದ್ದ ವೇಳೆ ಮರದಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ನಿವಾಸಿ ಗಣಪ ನಾಯ್ಕ್ ಅವರ ಪತ್ನಿ ಗಿರಿಜಾ ಬಾಯಿ ಅವರಿಗೆ ದನ ಮತ್ತು ಕರುವನ್ನು ಗೋದಾನ […]