ಎಸ್ಎಸ್ಎಲ್ ಸಿ, ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ.

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ. ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ:ಫೆ.28: ಕನ್ನಡ, ಅರೇಬಿಕ್, ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾ.3: ಇಂಗ್ಲಿಷ್, ಮಾ.4: ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ, ಮಾ.5: […]
ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ- ವಜ್ರಮಹೋತ್ಸವದ ಸಮಾರೋಪ ಸಮಾರಂಭ

ಮಂಗಳೂರು : ರಾಜ್ಯದ ಉತ್ತಮ ಸಹಕಾರ ಸಂಘ ಪ್ರಶಸ್ತಿ-2007, ರಾಜ್ಯದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ -2008 ಪುರಸ್ಕೃತ ಕೊಟ್ಟಾರಚೌಕಿಯ ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ನವೆಂಬರ್ 09 ರಂದು ನಡೆಯಲಿದೆ. ದೀಪ ಪ್ರಜ್ವಲನೆ ಮತ್ತು ಆಶೀರ್ವಚನವನ್ನು ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಅವರು ನೀಡಲಿದ್ದಾರೆ. ಜಗದ್ಗುರು ಅನಂತಶ್ರೀವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. […]
ಈ ವರ್ಷದ ಅತ್ಯಂತ ಪ್ರಕಾಶಮಾನ ಹುಣ್ಣಿಮೆ ಚಂದ್ರನ ದರ್ಶನ

ಬೆಂಗಳೂರು: ಪ್ರಸಕ್ತ ವರ್ಷದ ಅತಿದೊಡ್ಡ ಹಾಗೂ ಅತ್ಯಂತ ಪ್ರಕಾಶಮಾನವಾದ ಚಂದ್ರ (ಸೂಪರ್ ಮೂನ್) ಬುಧವಾರ ಗೋಚರಿಸಿದೆ. ‘ನವೆಂಬರ್ ಸೂಪರ್ ಮೂನ್’ ಎಂದು ಕರೆಯಲಾಗುವ ಈ ಚಂದ್ರ, ಸಾಮಾನ್ಯ ಹುಣ್ಣಿಮೆಯ ಚಂದ್ರನಿಗಿಂತಲೂ ಭೂಮಿಗೆ ಬರೋಬ್ಬರಿ 17,000 ಮೈಲಿಗಳಷ್ಟು ಸಮೀಪದಲ್ಲಿದ್ದದ್ದು ವಿಶೇಷ. 2025ನೇ ಸಾಲಿನಲ್ಲಿ ಕಾಣಿಸಿಕೊಳ್ಳುವ ಮೂರು ಸೂಪರ್ ಮೂನ್‌ಗಳ ಪೈಕಿ ಇದು ಎರಡನೆಯದ್ದಾಗಿದ್ದು, ಸಾಮಾನ್ಯ ಹುಣ್ಣಿಮೆ ಚಂದ್ರನಿಗಿಂತ ಈ ಸೂಪರ್ ಮೂನ್ ಶೇಕಡ 14ರಷ್ಟು ದೊಡ್ಡದಾಗಿ ಹಾಗೂ ಶೇ 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದೆ. ಭೂಮಿಯಿಂದ 3,57,000 ಕಿ.ಮೀ.ದೂರದಲ್ಲಿ […]
ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕನ್ನಡ ಡಿಂಡಿಮ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ ಮೇಲಿನ ಅಭಿರುಚಿ ವಿದ್ಯಾರ್ಥಿಗಳಿಗೆ ಇದ್ದರೆ ಮಾತ್ರ ನಮ್ಮ ನಾಡಿನ ಭಾಷೆ ಉಳಿಯಲು ಸಾಧ್ಯ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಕೇವಲ ಸಂಘ, ಸಂಸ್ಥೆಗಳ ಕಾರ್ಯ ಎಂದು ಭಾವಿಸದೆ ನಮ್ಮೆಲ್ಲರ ಆಧ್ಯ ಕರ್ತವ್ಯವಾಗ ಬೇಕು ಎಂದು ಸಮಾಜ ಕಾರ್ಯ ಉಪನ್ಯಾಸಕ ಡಾ ಗಣೇಶ್ ಪ್ರಸಾದ್ ನಾಯಕ್ ಅಬಿಪ್ರಾಯಪಟ್ಟರು. ಇವರು ಕನ್ನಡ ಮತ್ತು ಸಂಸ್ಕೃತ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಡಾ. ಜಿ ಶಂಕರ್ ಸರಕಾರಿ […]
ಚದುರಂಗ ಸ್ಪರ್ಧೆ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಕೃತಿ .ಪಿ. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಕುಂದಾಪುರ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ .ಪಿ. ಶೆಟ್ಟಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ (SGFI) ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಶ್ರೀಯುತ ಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಸಂಗೀತಾ . ಪಿ. ಶೆಟ್ಟಿ ದಂಪತಿಯ ಪುತ್ರಿ. ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯಾದಗಿರಿ ಜಿಲ್ಲೆ ಶಹಾಪುರದ ದಿಗ್ಗಿ ರೋಡ್ ಸರಕಾರಿ ಮಾದರಿ ಪದವಿ ಪೂರ್ವ ಕಾಲೇಜು […]