ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ; ವಾಹನ ಸಂಚಾರಕ್ಕೆ ಬದಲಿ ಮಾರ್ಗ!

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥದ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆಯ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) […]

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸ ಕಾರ್ಯಕಾರಿ ಮಂಡಳಿಗೆ ಕಾರ್ಕಳದ ಮೂವರು ಪತ್ರಕರ್ತರು ಅಯ್ಕೆ.

ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾರ್ಕಳ ತಾಲೂಕಿನಿಂದ ಮೂವರು ಪತ್ರಕರ್ತರು ಸ್ಥಾನ ಗಳಿಸಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಉದಯ ಕುಮಾರ್ ಮುಂಡ್ಕೂರು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯರಾಗಿದ್ದು, ಕಳೆದ ಅವಧಿಯಲ್ಲಿ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯದ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇದೇ […]

ಪೆರ್ಡೂರು: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಉಡುಪಿ: ಭಾನುವಾರದಿಂದ ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ಪೆರ್ಡೂರು ಅಲಂಗಾರು ಬಳಿಯ ನದಿಯಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪೆರ್ಡೂರು ನಿವಾಸಿ ಶ್ರೀಶನ್ ಶೆಟ್ಟಿ (15) ಎಂದು ಗುರುತಿಸಲಾಗಿದೆ. ಈತ ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ತನ್ನ ಸ್ನೇಹಿತನೊಂದಿಗೆ ಅಲಂಗಾರು ಬಳಿಯ ನದಿಗೆ ಈಜಲು ಹೋಗಿದ್ದನು. ಈ ವೇಳೆ ಶ್ರೀಶನ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಹಿಂದೂ ಧರ್ಮವೂ ನೋಂದಣಿ ಆಗಿಲ್ಲ ಎಂದ ಆರೆಸ್ಸೆಸ್ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿದ ಮಂಜುನಾಥ ಭಂಡಾರಿ

ಬೆಂಗಳೂರು: ಇದೀಗ ದೇಶದಾದ್ಯಂತ ಚರ್ಚೆಯ ವಿಷಯವಾಗಿರುವ “ಆರೆಸ್ಸೆಸ್ ಏಕೆ ನೋಂದಣಿ ಆಗಿಲ್ಲ” ಎಂಬ ಪ್ರಶ್ನೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ “ಹಿಂದೂ ಧರ್ಮವೂ ನೋಂದಣಿ ಆಗಿಲ್ಲ” ಎಂದು ನೀಡಿರುವ ಹೇಳಿಕೆ ಖಂಡನೀಯ ಮತ್ತು ಅದು ನಾವೆಲ್ಲರೂ ಪ್ರತಿನಿಧಿಸುವ ಹಿಂದೂ ಧರ್ಮಕ್ಕೆ ಮಾಡುವ ಘೋರ ಅಪಮಾನವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ವಿಧಾನಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಖಂಡಿಸಿದ್ದಾರೆ. ಈ ಹೇಳಿಕೆಯಿಂದ ಭಾಗವತ್ ಅವರು, ವಿವಿಧತೆಯಲ್ಲಿ ಏಕತೆಯನ್ನೇ ಮೂಲಮಂತ್ರ ವನ್ನಾಗಿಸಿಕೊಂಡಿರುವ ಹಿಂದೂ ಧರ್ಮವನ್ನು ಒಂದು ನೋಂದಾಯಿತ ಅಲ್ಲದ “ಸಂಸ್ಥೆ” […]

ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ: ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆದಿಉಡುಪಿ ಹೆಲಿಪ್ಯಾಡ್ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದಿ ಉಡುಪಿಯಲ್ಲಿ ಪ್ರಸ್ತುತ ಇರುವ 3 ಹೆಲಿಪ್ಯಾಡ್ ಗಳನ್ನು ನವೀಕರಿಸುವ ಜೊತೆಗೆ ಹೆಚ್ಚುವರಿಯಾಗಿ ಒಂದು ನೂತನ ಹೆಲಿಪ್ಯಾಡ್ ನಿರ್ಮಾಣಕ್ಕೆ ಈಗಾಗಲೇ ಜಿಲ್ಲಾಡಳಿತ ನಿರ್ಧರಿಸಿದ್ದು , ತಕ್ಷಣ ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ಮಾಣ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಉಡುಪಿ ನಗರಸಭೆ ವತಿಯಿಂದ […]