ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ಒಂದೇ ಮಾತರಂ’ ಹಾಡುವುದು ಕಡ್ಡಾಯ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ತಿಳಿಸಿದ್ದಾರೆ. ಗೋರಖ್‌ಪುರದಲ್ಲಿ ನಡೆದ ‘ಏಕತಾ ಯಾತ್ರೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕ್ರಮವು ಭಾರತ ಮಾತೆ ಮತ್ತು ಮಾತೃಭೂಮಿಯ ಬಗ್ಗೆ ನಾಗರಿಕರಲ್ಲಿ ಗೌರವ ಮತ್ತು ಹೆಮ್ಮೆಯ ಭಾವನೆಗಳನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು. ‘ವಂದೇ ಮಾತರಂ ಗೀತೆಯ ಬಗ್ಗೆ ಗೌರವ ಭಾವನೆ ಇರಬೇಕು. ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅದರ […]
ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಗಣಿತನಗರ: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನುಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸುವವರಾಗಿ, ಸಮಾಜಮುಖಿ ವ್ಯಕ್ತಿತ್ವವಾಗಿರೂಪುಗೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದು ಶ್ರೀ ಮೂಕಾಂಬಿಕಾ ದೇವಳ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕೇಶ್ ಶೆಟ್ಟಿ ಹೊಸಮಠ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ […]
ಎಸ್.ಕೆ.ಗೋಲ್ಡ್ ಸ್ಮಿತ್ಸ್ ಸೊಸೈಟಿ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ

ಮಂಗಳೂರು : ರಾಷ್ಟ್ರೀಕೃತ ಬ್ಯಾಂಕುಗಳು ಜನರಿಗೆ ಸಾಲ ನೀಡಲು ಹಿಂಜರಿಯುತ್ತಿವೆ. ಆದರೆ ಸಹಕಾರಿ ಸಂಸ್ಥೆಗಳು ಜನರ ಮನೆ ಬಾಗಿಲಿಗೆ ಹೋಗಿ ಉತ್ತಮ ಸೇವೆ ನೀಡುತ್ತಾ ಶುಭ ಕಾರ್ಯಗಳು ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ತ್ವರಿತವಾಗಿ ಸಾಲ ನೀಡುತ್ತಾ ಬೆಳೆಯುತ್ತಿವೆ. ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ರಾಜ್ಯಾದ್ಯಂತ ಶಾಖೆಗಳನ್ನು ವಿಸ್ತರಿಸಿ ಇನ್ನಷ್ಟು ಮಂದಿ ಉದ್ದಿಮೆ ಆರಂಭಿಸಲು ನೆರವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಶುಭ ಹಾರೈಸಿದರು. […]
ಉಡುಪಿ ಬಲ್ಲಾಳ್ ಮೊಬೈಲ್ಸ್’ಗೆ 8ನೇ ವಾರ್ಷಿಕೋತ್ಸವ ಸಂಭ್ರಮ: ಕಳೆದ 40 ವರುಷಗಳಿಂದ ‘ಬಲ್ಲಾಳ್ ಮೊಬೈಲ್ಸ್’ ಅತ್ಯಂತ ವಿಶ್ವಾಸಾರ್ಹತೆ ಹೊಂದಿದ ಸಂಸ್ಥೆ.

ಉಡುಪಿ: ಉಡುಪಿ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಲ್ಲಾಳ್ ಮೊಬೈಲ್ಸ್” ಇದೀಗ 7 ವರ್ಷಗಳನ್ನು ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದ್ದು, ಈ ಪ್ರಯುಕ್ತ ನ.03 ರಿಂದ ನ.11 ರ ವರೆಗೆ ಗ್ರಾಹಕರಿಗೆ 8 ದಿನ 8 ಭರ್ಜರಿ ಕೊಡುಗೆಗಳನ್ನು ನೀಡಿದೆ. ಹಾಗೂ ಈಗಾಗಲೇ ಗ್ರಾಹಕರಿಗೆ ಸೆ.22 ರಿಂದ ಜ.15ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ಭರ್ಜರಿ ಆಫರ್ ಲಾಂಚ್ ಮಾಡಿದ್ದು, ಇದಕ್ಕೆ ಗ್ರಾಹಕರಿಂದ ಒಳ್ಳೆಯ ರೆಸ್ಪಾನ್ಸ್ ಕೂಡ […]
ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಹಾನಿ; ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ಬ್ರೇಕ್!

ಹೊಸದಿಲ್ಲಿ: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಶರಾವತಿ ನದಿಗೆ ನಿರ್ಮಿಸಲು ಉದ್ದೇಶಿಸಿದ್ದ ರಾಜ್ಯ ಸರಕಾರದ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ರವಿವಾರ ಕೇಂದ್ರ ಸರಕಾರ ತಡೆ ಹಿಡಿದಿದೆ. ಇದರಿಂದ ರಾಜ್ಯ ಸರಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಹಲವು ದಿನಗಳಿಂದ ಹೋರಾಟ ನಡೆಸುತ್ತಿರುವ ಪರಿಸರವಾದಿಗಳಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಗೆಲುವು ಸಿಕ್ಕಂತಾಗಿದೆ. ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳಲ್ಲಿ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಕರ್ನಾಟಕದ 2,000 ಮೆ.ವ್ಯಾಟ್ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ತಿರುಗಿಸುವ ಪ್ರಸ್ತಾವನೆಗೆ ಅರಣ್ಯ ಸಲಹಾ […]