ತಿರುಪತಿಗೆ 250 ಕೋಟಿ ರೂ. ಮೌಲ್ಯದ ನಕಲಿ ತುಪ್ಪ; ಸಿಬಿಐ ತನಿಖೆಯಲ್ಲಿ ಬಹಿರಂಗ!

ನವದೆಹಲಿ: ವಿಶ್ವ ವಿಖ್ಯಾತ ತಿರುಪತಿ ದೇವಸ್ಥಾನದ ಲಾಡು ತಯಾರಿಸುವುದಕ್ಕೆ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ನಕಲಿ ತುಪ್ಪ ಸರ ಬರಾಜು ಮಾಡಿದ ಉತ್ತರಾಖಂಡದ ಡೇರಿಯೊಂದರ ಬಂಡವಾಳವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಟಾಬಯಲು ಮಾಡಿದೆ. ಭೋಲೇಬಾಬಾ ಅರ್ಗಾನಿಕ್ ಡೇರಿ ಎಂಬ ಕಂಪನಿ 2019ರಿಂದ 2024ರ ನಡುವೆ, ಒಂದೇ ಒಂದು ಹನಿ ಹಾಲು ಅಥವಾ ಬೆಣ್ಣೆ ಪಡೆಯದಿದ್ದರೂ 68 ಲಕ್ಷ ಕೆ.ಜಿ. ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ)ಗೆ ಸರಬರಾಜು ಮಾಡಿರುವುದನ್ನು ಲಾಡು ತುಪ್ಪ ಕಲಬೆರಕೆ ಪ್ರಕರಣದ ತನಿಖೆ […]
ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸರಿಗೆ ಸಿಎಂ ಸೂಚನೆ!

ದೆಹಲಿಯ ಕೆಂಪು ಕೋಟೆಯ ಮೆಟ್ರೋ ಸ್ಟೇಷನ್ ಬಳಿ ಇಂದು ಸಂಜೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಈ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ದೆಹಲಿ ಸ್ಫೋಟದ ಬಗ್ಗೆ ತಿಳಿದ ಬಳಿಕ ಮೈಸೂರು ಪೊಲೀಸರ ಜತೆ ಮಾತನಾಡಿದ್ದೇನೆ. ಬೆಂಗಳೂರು ಪೊಲೀಸರಿಗೂ ಸೂಚಿಸುತ್ತೇನೆ. ರಾಜ್ಯಾದ್ಯಂತ ಭದ್ರತೆ ಬಿಗಿಗೊಳಿಸಲು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಏರ್‌ಪೋರ್ಟ್, ರೈಲು […]
ಹೇರಂಜಾಲು ಯಕ್ಷ ಸಂಭ್ರಮ: ಹೇರಂಜಾಲು ಕೃತಿ ಲೋಕಾರ್ಪಣೆ; ಹೇರಂಜಾಲು ಗೌರವ ಪುರಸ್ಕಾರ ಪ್ರದಾನ

ಉಡುಪಿ: ಓರ್ವ ಯಕ್ಷಗಾನ ಕಲಾವಿದ, ಓರ್ವ ಭಾಗವತ ಹೇಗಿರಬೇಕು ಎಂಬುದಕ್ಕೆ ಹೇರಂಜಾಲು ಗೋಪಾಲ ಗಾಣಿಗರೇ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಯಕ್ಷಗಾನ ಕಲೆಗೆ ಅವರ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಶಿವರಾಮ ಶೆಟ್ಟಿ ಹೇಳಿದರು. ಅವರು ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಭಾನುವಾರ ನಡೆದ ಹೇರಂಜಾಲು ಯಕ್ಷ ಬಳಗದಿಂದ ಹೇರಂಜಾಲು ಯಕ್ಷ ಸಂಭ್ರಮ, ಹೇರಂಜಾಲು ಕೃತಿ ಲೋಕಾರ್ಪಣೆ ಹಾಗೂ ಹೇರಂಜಾಲು ಗೌರವ ಪುರಸ್ಕಾರ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುಮಾರು 25 ವರ್ಷಗಳ ಕಾಲ […]
ಕಾರ್ಕಳ: ವಾಯ್ಸ್ ಆಪ್ ಚಾಣಕ್ಯ ರಾಜ್ಯಮಟ್ಟದ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆ ಉದ್ಘಾಟನೆ.

ಕಾರ್ಕಳ: ಪ್ರತಿಯೊಬ್ಬರು ತಮಗೆ ಸಿಕ್ಕಿದ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಯಾವುದೇ ಕ್ಷೇತ್ರದಲ್ಲಿ ಮುಂದೆ ಬರಬಹುದು.ಗ್ರಾಮೀಣ ಪ್ರದೇಶದ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಿ ಚಾಣಕ್ಯ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ಕಲಾ ಸೇವೆಯನ್ನು ಮಾಡುತ್ತಿರುವುದು ಶ್ಲಾಘನೀಯ.ಎಂದು ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು. ಅವರು ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ). ಇವರ ಸಹಯೋಗದೊಂದಿಗೆಚಾಣಕ್ಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹೆಬ್ರಿ ಇವರ ನೇತೃತ್ವದಲ್ಲಿ ನಡೆಯುವ […]
ಉಡುಪಿ:ವೀರ ವನಿತೆ ಒನಕೆ ಓಬವ್ವ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವು ನವೆಂಬರ್ 11 ರಂದು ಬೆಳಗ್ಗೆ 10.15 ಕ್ಕೆ ನಗರದ ಮಣಿಪಾಲ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ […]