ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ: ಇಬ್ಬರ ಬಂಧನ, ಬೆಂಗಳೂರು ಸೇರಿ ಹಲವು ಕಡೆ ಕಟ್ಟೆಚ್ಚರ!

ದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನ.10 ರಂದು ಸಂಜೆ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟು, ಸುಮಾರು 20 ಜನರು ಗಾಯಗೊಂಡಿದ್ದಾರೆ. ಸ್ಫೋಟದ ಕಾರಣ ಇನ್ನೂ ತನಿಖೆ ಹಂತದಲ್ಲಿದೆ. ಯಾವುದೇ ಭಯೋತ್ಪಾದಕ ಚಟುವಟಿಕೆಗೆ ಸಂಬಂಧಿಸಿದೆಯೇ ಎಂದು ಅಧಿಕಾರಿಗಳು ಇನ್ನೂ ನಿರ್ಧರಿಸಿಲ್ಲ. ಘಟನೆಯ ಬಗ್ಗೆ ಭದ್ರತಾ ಸಂಸ್ಥೆಗಳು ತನಿಖೆ ಮುಂದುವರಿಸಿರುವುದರಿಂದ ಎಲ್ಲಾ ಸಂಭಾವ್ಯ ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಯೋತ್ಪಾದಕ ಕೃತ್ಯದ ಶಂಕೆ […]

ಉಡುಪಿ:ರಾ.ಹೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ:ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥದ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆಯ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) & […]

ಉಡುಪಿ:ನಾಗರಿಕರ ಸರಕಾರಿ ಕಾರ್ಯಗಳ ಕುರಿತ ಮಾಹಿತಿ ಅರ್ಜಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಿ : ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ

ಉಡುಪಿ: ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯನ್ನುಜಾರಿಗೊಳಿಸಲಾಗಿದೆ. ನಾಗರಿಕರು ಸರಕಾರಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಾಗ ಮಾಹಿತಿಯನ್ನು ತಪ್ಪದೇ ನೀಡಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವ ದೃಷ್ಠಿಯಿಂದ 2005 ರಲ್ಲಿ ಮಾಹಿತಿ ಹಕ್ಕು […]

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಮುಂಬೈ: ಬಾಲಿವುಡ್‌ನ ದಂತಕಥೆ ಹಿರಿಯ ನಟ ಧರ್ಮೇಂದ್ರ (89) ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಧರ್ಮೇಂದ್ರ ಪತ್ನಿ ಹೇಮಾ ಮಾಲಿನಿ, ಪ್ರಕಾಶ್‌ ಕೌರ್‌ ಮಕ್ಕಳಾದ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ, ಅಜೀತಾ, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಅವರನ್ನು ಅಗಲಿದ್ದಾರೆ. ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, […]