ದೆಹಲಿ ಕಾರು ಸ್ಪೋಟ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ: ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಣೆ

ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ರೂ. 10 ಲಕ್ಷ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ. ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ದೆಹಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯು ಇಡೀ ನಗರವನ್ನು ಆಘಾತವನ್ನುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ […]
ಪರ್ಕಳ ಪೇಟೆಯಲ್ಲಿ ಕುಸಿದುಬಿದ್ದ ವ್ಯಕ್ತಿ ಸಾವು

ಉಡುಪಿ: ಪರ್ಕಳ ಪೇಟೆ ಬಳಿ ಕುಸಿದುಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಮಂಗಳೂರು ಬಡಗಾಯಿಪದವು ನಿವಾಸಿ ದಾಮೋದರ ಗೌಡ (50) ಎಂದು ಗುರುತಿಸಲಾಗಿದೆ. ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ದಾಮೋದರ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಸಾಗಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಉಡುಪಿ ಮತ್ತು ಬ್ರಹ್ಮಾವರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿ ಮತ್ತು ಬ್ರಹ್ಮಾವರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: ▪ ಆಫೀಸ್ ಸ್ಟಾಫ್ -2 posts ▪ ಟೆಲಿಕಾಲರ್ -2posts ಉತ್ತಮ ಕಮ್ಯುನಿಕೇಶನ್ ಹೊಂದಿರುವ ಅಭ್ಯರ್ಥಿಗಳು ತಕ್ಷಣ ಸಂಪರ್ಕಿಸಿ : 9353517905
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಹೆಬ್ರಿ ಉದಯಕುಮಾರ್ ಶೆಟ್ಟಿ ಆಯ್ಕೆ.

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ಉಪಾಧ್ಯಕ್ಷರಾಗಿ ಹೆಬ್ರಿ ವಲಯ ಉದಯವಾಣಿ ವರದಿಗಾರ ಹೆಬ್ರಿ ಉದಯ್ ಕುಮಾರ್ ಶೆಟ್ಟಿ 2ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮದ ವಿವಿಧ ವಿಭಾಗದಲ್ಲಿ 23 ವರ್ಷಗಳ ಅನುಭವ ಇರುವ ಉದಯ್ ಕುಮಾರ್ ಶೆಟ್ಟಿ ಅವರು ಕಳೆದ 10 ವರ್ಷಗಳಿಂದ ಉದಯವಾಣಿ ಪತ್ರಿಕೆಯ ವರದಿಗಾರರಾಗಿ ಪ್ರಾಮಾಣಿಕ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದರು. ಜಿಲ್ಲಾ ಸಂಘದಲ್ಲಿ 6 ವರ್ಷಗಳ ಕಾಲ ಕಾರ್ಯಕಾರಿ ಸಮಿತಿಯ ಸದಸ್ಯ ಅವಧಿಯಲ್ಲಿ 3 ವರ್ಷಗಳ ಕಾಲ ಉಪಾಧ್ಯಕ್ಷರಾಗಿ ಸೇವೆ […]
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಮಂಡಳಿಗೆ ಉಡುಪಿಯಿಂದ 8 ಜನ ಪತ್ರಕರ್ತರ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಗೆ ಉಡುಪಿ ತಾಲೂಕಿನ 8 ಜನ ಪತ್ರಕರ್ತರ ಆಯ್ಕೆ. ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ ಚಾನೆಲ್ ಉಡುಪಿ ಜಿಲ್ಲಾ ವಿಡಿಯೋ ಜರ್ನಲಿಸ್ಟ್ ಹರೀಶ್ ಕುಂದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಈ […]