ಉಡುಪಿ:ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಹಾಗೂ ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆ (ಯುನಿಟ್ ಆಫ್ ಡಾ. ಎ.ವಿ ಬಾಳಿಗಾ ಚಾರಿಟೀಸ್) ದೊಡ್ಡಣಗುಡ್ಡೆ, ಉಡುಪಿ – ಈ ಎನ್.ಜಿ.ಒ ಸಂಸ್ಥೆ ನಡೆಸುವ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಕೆ.ಎಂ.ಸಿ ಮಣಿಪಾಲ ಮನೋರೋಗ ಚಿಕಿತ್ಸಾ […]
ಉಡುಪಿ:ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್ಗಳಲ್ಲಿ ತಲಾ 1 ರಂತೆ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 1 ರಂತೆ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್.ಡಬ್ಲ್ಯ) ನೇಮಕಾತಿಗಾಗಿ, ಮಾಸಿಕ 10,000 ರೂ. ಗಳಂತೆ ಗೌರವಧನ ಆಧಾರದಲ್ಲಿ ಸೇವೆ ಸಲ್ಲಿಸಬಯಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿ.ಆರ್.ಡಬ್ಲ್ಯೂ ನೇಮಕಾತಿಗಾಗಿ ಬಾಕಿ […]
ಉಡುಪಿ:ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಉಡುಪಿ:ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾ.ಹೆ. 66 ರ ಕಟಪಾಡಿ ಜಂಕ್ಷನ್ನಲ್ಲಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ಸದ್ರಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗದ […]
ಉಡುಪಿ:ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನೆ

ಉಡುಪಿ: ಜಿಲ್ಲಾ ಗೃಹರಕ್ಷಕ ದಳ, ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ಯೆನೆಪೋಯ ವಿಶ್ವವಿದ್ಯಾಲಯ ಕುಲಪತಿ ಡಾ.ವಿಜಯ್ ಕುಮಾರ್ ಮಾತನಾಡಿ, ಶಿಸ್ತು, ತಾಳ್ಮೆ, ದಕ್ಷತೆ ಹಾಗೂ ಬದ್ಧತೆಗೆ ಹೆಸರಾಗಿರುವ ಗೃಹರಕ್ಷಕರುಗಳಿಗೆ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಅವರುಗಳು ದೈಹಿಕವಾಗಿ ಸದೃಢರಾಗಿ ಉತ್ತಮ ಆರೋಗ್ಯ ಹೊಂದುತ್ತಾರೆ. ಸೇವೆಯಲ್ಲಿ ತಂಡವಾಗಿ ಕೆಲಸ ಮಾಡಲು ಕ್ರೀಡೆ ಪ್ರೇರಣೆ ನೀಡಲಿದೆ ಎಂದರು. ಅಪರ […]
ಶಿರ್ವ: ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು.

ಶಿರ್ವ: ಬ್ಯಾಂಕಿನ ಎರಡನೇ ಮಹಡಿಯಿಂದ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರ್ವದಲ್ಲಿ ನ.11ರಂದು ನಡೆದಿದೆ. ಮೃತರನ್ನು ಬೆಳಪು ಗ್ರಾಮದ ಮೋಹನ್ ಆಚಾರ್ಯ(52) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಶಿರ್ವ ಗ್ರಾಮದ ಕೆನರಾ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.