ಮಂಗಳೂರಿನ ನಂತೂರಲ್ಲಿ ಕಾರಿಗೆ ಬೆಂಕಿ ಸ್ಥಳೀಯರ ಸಮಯಪ್ರಜ್ಞೆ ದೊಡ್ಡ ಅನಾಹುತ ತಪ್ಪಿಸಿದೆ

ಮಂಗಳೂರು: ಮಂಗಳೂರಿನ ನಂತೂರ ಜಂಕ್ಷನ್‌ನಲ್ಲಿ ಓಡುತ್ತಿದ್ದ ಹುಂಡೈ ಕಾರೊಂದಕ್ಕೆ ಅಚಾನಕ್ ಬೆಂಕಿ ಹೊತ್ತಿಕೊಂಡ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಮೂವರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ತಕ್ಷಣವೇ ಹೊರಗಡೆ ಬಂದ ಕಾರಣ ಅನಾಹುತ ತಪ್ಪಿದೆ. ಬೆಂಕಿ ವ್ಯಾಪಿಸುತ್ತಿದ್ದಾಗ ಸ್ಥಳೀಯರು ಕಾಲಮೀರಿ ರಕ್ಷಣೆಗೆ ಧಾವಿಸಿ, ನೀರಿನ ಟ್ಯಾಂಕರ್ ಅನ್ನು ಕರೆಸಿ ಬೆಂಕಿ ನಂದಿಸಲು ಮುಂದಾದರು. ಅವರ ಸಮಯ ಪ್ರಜ್ಞೆ ಮತ್ತು ತಕ್ಷಣದ ಕ್ರಮದಿಂದ ದೊಡ್ಡ ದುರಂತವೇ ತಪ್ಪಿದಂತಾಗಿದೆ. ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಹಾರ: ಅಭೂತಪೂರ್ವ ಜಯದತ್ತ ಎನ್‌ಡಿಎ ಮೈತ್ರಿಕೂಟ; ಮಹಾಘಟಬಂಧನ್ ಧೂಳೀಪಟ

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಆಡಳಿತಾರೂಢ ಎನ್‌ಡಿಎ ರಾಜ್ಯದ 243 ಕ್ಷೇತ್ರಗಳ ಪೈಕಿ ಸುಮಾರು 200 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಅಧಿಕಾರ ಉಳಿಸಿಕೊಳ್ಳುವತ್ತ ದಾಪುಗಾಲಿಟ್ಟಿದೆ. ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟ ಹೀನಾಯ ಸೋಲಿನತ್ತ ಮುಖಮಾಡಿದೆ. ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಸ್ವಿ ಯಾದವ್ ಸಹ ಹಿನ್ನಡೆ ಅನುಭವಿಸಿದ್ದಾರ ಮಹಾಘಟಬಂಧನ್‌ನ ಆರ್‌ಜೆಡಿ 24, ಮಿತ್ರಪಕ್ಷಗಳಾದ ಕಾಂಗ್ರೆಸ್ ಕೇವಲ 4, ಸಿಪಿಐಎಂ 4 ಮತ್ತು ಸಿಪಿಐ 1 ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ದಾಖಲಿಸಿವೆ. […]
ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ: ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಶ್ರೀನಿಧಿ ಹೆಗ್ಡೆ ಅಭಿಪ್ರಾಯ

ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಸ್ಪಷ್ಟವಾದ ಕೊಡಲಿಯೇಟು ನೀಡಿದೆ. ಕಾಂಗ್ರೆಸ್ ನೀಡಿದ ಖಾಲಿ ಭರವಸೆಗಳು ಮತ್ತು ಜನರನ್ನು ಮೋಸಗೊಳಿಸುವ ಪೊಳ್ಳು ಗ್ಯಾರಂಟಿಯ ರಾಜಕೀಯವನ್ನು ಬಿಹಾರದ ಮತದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ತಿಳಿಸಿದ್ದಾರೆ. ಬುದ್ಧನ ತವರಾದ ಬಿಹಾರದಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನವಾಗಿದ್ದು, ಇದು ಎನ್‌ಡಿಎ ಗೆಲುವಿನ ಭರವಸೆ […]
ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ ಮೈದಾನದಲ್ಲಿ ನಡೆಯುತ್ತಿರುವ ಅಂಧ ಮಹಿಳೆಯರ ಮೊದಲ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರಿಯಾಗಿ ಕೈಕಾಲು ಇದ್ದರೂ, ಕಣ್ಣುಗಳು ಕಾಣಿಸಿದರೂ ಸಾಮಾನ್ಯ ಜನರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಕಷ್ಟ. ಆದರೆ, ಸರಿಯಾಗಿ ಕಣ್ಣುಕಾಣದ ಮಕ್ಕಳು ಕ್ರಿಕೆಟ್ ಆಡುವುದು ಅಷ್ಟು […]
ಕಾರ್ಕಳ: ತಾಯಿ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಬಾಲಕ ಆತ್ಮಹತ್ಯೆಗೆ ಶರಣು.!

ಉಡುಪಿ: ತಾಯಿ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಬಾಲಕನೋರ್ವ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಕಾರ್ಕಳದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ಆತ್ಮಹತ್ಯೆಗೆ ಶರಣಾದ ಬಾಲಕ. ಸುಮಂತ್‌ನ ಮೊಬೈಲ್ ಹಾಳಾಗಿದ್ದು, ಅದನ್ನು ದುರಸ್ತಿಗೆ ನೀಡಲಾಗಿತ್ತು. ಈತ ಹೊಸ ಮೊಬೈಲ್ ಕೊಡಿಸಬೇಕೆಂದು ಅಮ್ಮನ ಬಳಿ ಹಠ ಹಿಡಿದಿದ್ದ. ಕೆಲ ತಿಂಗಳು ಬಳಿಕ ಹೊಸ ಮೊಬೈಲ್ ಕೊಡಿಸುವುದಾಗಿ ಅಮ್ಮ ಭರವಸೆ ನೀಡಿದ್ದರು. ಅಮ್ಮನ ಭರವಸೆಯಿಂದ ಸಮಾಧಾನಗೊಳ್ಳದ ಸುಮಂತ್, ಬೇಸರಗೊಂಡು ನೀರು ನಿಂತಿದ್ದ ಕಲ್ಲು ಕೋರೆಗೆ ಹಾರಿ […]