ಬ್ರಹ್ಮಾವರ: ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಾಂತರ ರೂ. ವಂಚನೆ: ಶಾಖಾ ವ್ಯವಸ್ಥಾಪಕ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಸಾಯಿಬ್ರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಾಂತರ ರೂ. ವಂಚನೆ ಪ್ರಕರಣ ನಡೆದಿದ್ದು, ಶಾಖಾ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಾಂತರ ರೂ. ವಂಚನೆ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್ ಸುರೇಶ್ ಭಟ್ ಹಾಗೂ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಎಂಬಾತನನ್ನು ನ.5ರಂದು ಸಂಘದ ಆಡಳಿತ ಮಂಡಳಿ ತೀರ್ಮಾನದಂತೆ ಬೇರೆ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕಾವಡಿ ಶಾಖೆಗೆ ಮ್ಯಾನೇಜರ್ […]
ಉಡುಪಿ:ನ.18 ರಂದು ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ

ಉಡುಪಿ:ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಸ್ವಸಾಯ ಸಂಘದ ಕಳತ್ತೂರು ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ದೇವಸ್ಥಾನಕ್ಕೆ ನವೆಂಬರ್ 18 ರಂದು ನಡೆಯುವ ದೇವಸ್ಥಾನದ ಲಕ್ಷ ದೀಪೋತ್ಸವ ತಯಾರಿ ಆಗಿ ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು. ಸ್ವಚ್ಚತಾ ಅಭಿಯಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕೇಶವ ತಂತ್ರಿ ಆಡಳಿತ ಸಮಿತಿ ಸದಸ್ಯರುಗಳಾದ ರಂಗನಾಥ್ ಭಟ್, ದಿವಾಕರ್ ಬಿ ಶೆಟ್ಟಿ ದಾಬ ನಿವಾಸ ಮಲ್ಲಾರು, ರಾಜೇಶ್ ಮೂಲ್ಯ ಕುತ್ಯಾರು ದೇವಳದ ಪ್ರಬಂಧಕ ಕೃಷ್ಣಮೂರ್ತಿ ಭಟ್ ಧರ್ಮಸ್ಥಳ ಸ್ವಸಾಯ ಗುಂಪಿನ […]
ಉಡುಪಿ: ಉಗ್ರರ ದಾಳಿ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಉಡುಪಿ: ದೆಹಲಿಯಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ಇಂದು ಪ್ರತಿಭಟನೆ ನಡೆಸಲಾಯಿತು.ನೂರಾರು ಸಂಖ್ಯೆ ಸೇರಿದ್ದ ವೇದಿಕೆಯ ಕಾರ್ಯಕರ್ತರು ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವೇದಿಕೆ ಗೋರಕ್ಷಕ್ ಪ್ರಮುಖ್ ಸುನಿಲ್ ಕೆ.ಆರ್. ಮಾತನಾಡಿ, ಭಾರತ ದೇಶವನ್ನು ಇಸ್ಲಾಮಿಕ್ ಮಾಡಬೇಕು ಹಾಗೂ ಕಾಶ್ಮೀರವನ್ನು ನಾಶಗೊಳಿಸುವುದೇ ಭಯೋತ್ಪಾದಕರ ಏಕೈಕ ಉದ್ದೇಶ. ಹಿಂದೂ ಮಂದಿರ ಹಾಗೂ ಹಿಂದೂ ಸಮಾಜವನ್ನು ಗುರಿಯಾಗಿಸಿ ಸ್ಫೋಟ ಮಾಡಬೇಕೆಂಬ ವ್ಯವಸ್ಥಿತ ಷಡ್ಯಂತ್ರ ಮಾಡಿದ್ದಾರೆ. ಇಸ್ಲಾಮಿಕ್ […]
ಪಣಂಬೂರು: ಎರಡು ಟ್ಯಾಂಕರ್ ಲಾರಿಗಳ ನಡುವೆ ಅಪ್ಪಚ್ಚಿಯಾದ ರಿಕ್ಷಾ: ರಿಕ್ಷಾ ಚಾಲಕ ಸಹಿತ ಮೂವರು ಸಾವು

ಮಂಗಳೂರು: ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ ಘಟನೆ ನಡೆದಿದೆ. ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ […]
ಬಿಸಿರೋಡ್: ಸರ್ಕಲ್ ಗೆ ಡಿಕ್ಕಿ ಹೊಡೆದ ಕಾರು; ಮೂರು ಮೃತ್ಯು, ಆರು ಮಂದಿಗೆ ಗಂಭೀರ ಗಾಯ

ಬಂಟ್ವಾಳ: ಬಿಸಿರೋಡಿನ ಸರ್ಕಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64) ರಮ್ಯ (23) ಹಾಗೂ ನಂಜಮ್ಮ ( 75) ಎಂದು ಗುರುತಿಸಲಾಗಿದೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇವರು ಬೆಂಗಳೂರಿನಿಂದ ಇನ್ನೋವಾ […]