ಉಡುಪಿ:ಕ್ರೀಡಾಪಟುಗಳಿಂದ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕಾಗಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ/ ಪ್ರೋತ್ಸಾಹಧನ ವಿವರ: ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕಪ್ರಶಸ್ತಿ, ಗುರಿ-ಒಲಂಪಿಕ್ ಪದಕ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿವೇತನ.ಅರ್ಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ […]

ಕಾರ್ಕಳ: ಹಾಡಿಮನೆ ಕೃಷ್ಣಾನಂದ ಶೆಣೈ ಹೃದಯಘಾತದಿಂದ ನಿಧನ

ಕಾರ್ಕಳ: ಕಾಬೆಟ್ಟು ಸಂದಿಪ್ ಎಲೆಕ್ಟಿಲ್ಸ್ ಮತ್ತು ಡೆಕೋರೇಷನ್ ಮಾಲಕ ಹಾಡಿಮನೆ ಕೃಷ್ಣಾನಂದ ಶೆಣೈ (55 ವರ್ಷ) ನ. 14ರಂದು ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಕೃಷ್ಣಾನಂದ ಶೆಣೈ ಅವರು ಕಾಬೆಟ್ಟು ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿಯ ಮಾಜಿ ಅದ್ಯಕ್ಷರಾಗಿ, ಲೈಟಿಂಗ್ & ಡೆಕೋರೇಷನ್ ಕಾರ್ಕಳ ವಲಯದ ಮಾಜಿ ಅದ್ಯಕ್ಷರಾಗಿ, ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿದ್ದು, ಧಾರ್ಮಿಕ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸರಳ ಸಜ್ಜನರಾಗಿದ್ದರು.

ಕಡಾರಿ ರವೀಂದ್ರ ಪ್ರಭು ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ

ಕಾರ್ಕಳ: ರಾಜಾಪುರ ಸಾರಸ್ವತ ಕ್ರೆಡಿಟ್ ಕೋ–ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಮಾಳ ಗ್ರಾಮದ ಕಡಾರಿ ರವೀಂದ್ರ ಪ್ರಭು ಅವರು ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಮೂರು ದಶಕಗಳಿಂದ ಸಹಕಾರಿ ಚಳವಳಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ನವೆಂಬರ್‌ 14ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 1996ರಲ್ಲಿ ಪ್ರಾರಂಭವಾದ ರಾಜಾಪುರ ಸಾರಸ್ವತ ಕ್ರೆಡಿಟ್ ಸೊಸೈಟಿಯಲ್ಲಿ ನಿರ್ದೇಶಕರಾಗಿ ಸೇವೆ ಆರಂಭಿಸಿದ ರವೀಂದ್ರ ಪ್ರಭು ಅವರು ಬಳಿಕ ಉಪಾಧ್ಯಕ್ಷ ಹಾಗೂ ಅಧ್ಯಕ್ಷರಾಗಿ ಸಂಘಟನೆಯನ್ನು ಮುಂದಾಳತ್ವ ನೀಡಿ ಬಲಿಷ್ಠ ಸಹಕಾರಿ ಸಂಸ್ಥೆಯನ್ನಾಗಿ […]

ಉಡುಪಿ: ನ.16ಕ್ಕೆ ಡಯಾಬಿಟೀಸ್​ ಮೇಳ

ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆದರ್ಶ ಚಾರಿಟೇಬಲ್​ ಟ್ರಸ್ಟ್​, ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಟಕ, ರೆಡ್​ಕ್ರಾಸ್​ ಸಂಸ್ಥೆ ಸಹಯೋಗದಲ್ಲಿ ‘ಡಯಾಬಿಟೀಸ್​ ಮೇಳ’ವನ್ನು ನ.16ರಂದು ಬೆಳಿಗ್ಗೆ 9 ರಿಂದ 4ರವರೆಗೆ ಬೋರ್ಟ್​ ಹೈಸ್ಕೂಲ್​ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ.ಎಸ್​. ಚಂದ್ರಶೇಖರ್​ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮವನ್ನು ಶಾಸಕ ಯಶ್ಪಾಲ್​ ಸುವರ್ಣ ಉದ್ಘಾಟಿಸಲಿದ್ದಾರೆ. ಡಿಎಚ್​ಒ ಡಾ. ಬಸವರಾಜ […]

ಉಡುಪಿ:ಮಕ್ಕಳ ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸಿ : ಲೋಕೇಶ್ ಸಿ

ಉಡುಪಿ: ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸಹಕಾರ, ರಕ್ಷಣೆ ಜೊತೆಗೆ ಉತ್ತಮ ಶಿಕ್ಷಣ ದೊರಕಿಸುವ ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ವೇದಿಕೆ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ ಹೇಳಿದರು. ಅವರು ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಭಾರತ ಪ್ರಪ್ರಥಮ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ನೆಹರು ಜನ್ಮ ದಿನಾಚರಣೆ ಅಂಗವಾಗಿ ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ಪೋಷಕ […]