ಫುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಲೋಕ: “ಮಕ್ಕಳ ದಿನಾಚರಣೆ ಸಂಭ್ರಮ”

ಕಾರ್ಕಳ: ಕಾರ್ಕಳ ತಾಲ್ಲೂಕು ಸಾಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 14 ಶುಕ್ರವಾರದಂದು ಜರುಗಿದ ” ಮಕ್ಕಳ ದಿನಾಚರಣೆ”_ಚಿಣ್ಣರ ಲೋಕ” ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮುಗ್ಧ ಮನಸ್ಸಿನ ಮಕ್ಕಳಲ್ಲಿ ಉತ್ಸಾಹದ ಚಿಲುಮೆ ಹರಿಸಬೇಕಾದದ್ದು ಹೆತ್ತವರ ಆದ್ಯ ಕರ್ತವ್ಯ. ಬೆಳೆಯುವ ಸಿರಿಯನ್ನು ಮೊಳಕೆಯಲ್ಲಿ ಗುರುತಿಸಿ ಪ್ರೋತ್ಸಾಹಿಸಿದಾಗ, ಅದ್ಭುತ ಪ್ರತಿಭೆಗಳ ಅನಾವರಣ ಸಾಧ್ಯ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಮಕ್ಕಳ […]
ಉಡುಪಿ:ಪೊಲೀಸ್ ಇಲಾಖೆಗೆ ಸಮನಾಗಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕದಳದ ಸೇವೆ ಅನನ್ಯ: ಹರಿರಾಂ ಶಂಕರ್

ಉಡುಪಿ: ಗೃಹರಕ್ಷಕದಳವು ಪೊಲೀಸ್ ಇಲಾಖೆಗೆ ಸರಿಸಮನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕೊರೋನಾ ಕಾಲದಲ್ಲಿಗೃಹರಕ್ಷಕದಳದ ಕಾರ್ಯವೈಖರಿಯು ಜನರಿಂದ ಮೆಚ್ಚುಗೆ ಪಡೆದಿದೆ. ಗೃಹರಕ್ಷಕದಳದ ಸಿಬ್ಬಂದಿಗಳು ಪೊಲೀಸರ ಮಾದರಿಯಲ್ಲೇ ಸೇವೆ ನೀಡಿದೇಶದಲ್ಲಿ ಹೆಸರುವಾಸಿಯಾಗಿದ್ದು ಗೃಹರಕ್ಷಕದಳದ ಸೇವೆ ಅನನ್ಯವಾಗಿದೆ ಎಂದು ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಂ ಶಂಕರ್ ಹೇಳಿದರು. ಅವರು ಶುಕ್ರವಾರ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿ ಹೆಚ್ಚು ಜನಸಂದಣಿ ಸೇರುವ ಕಾರ್ಯಕ್ರಮಗಳಲ್ಲಿ […]