ಉಡುಪಿ,ಬ್ರಹ್ಮಾವರ,ಸಿದ್ಧಾಪುರ ದ ಹೀರೋಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿ,ಬ್ರಹ್ಮಾವರ,ಸಿದ್ಧಾಪುರ ದ ಹೀರೋಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔸ಸೇಲ್ಸ್ ಮ್ಯಾನೇಜರ್-1 -ಉಡುಪಿ🔸ಬ್ರಾಂಚ್ ಮ್ಯಾನೇಜರ್- 1 -ಸಿದ್ಧಾಪುರ/ಬ್ರಹ್ಮಾವರ🔸ಸೇಲ್ಸ್ ಕನ್ಸಲ್ಟೆಂಟ್-2-ಸಿದ್ಧಾಪುರ/ಬ್ರಹ್ಮಾವರ🔸ಸರ್ವಿಸ್ ಮ್ಯಾನೇಜರ್-1-ಬ್ರಹ್ಮಾವರ🔸ಸರ್ವಿಸ್ ಅಡ್ವೈಸರ್-1-ಸಿದ್ಧಾಪುರ🔸ಮೆಕ್ಯಾನಿಕ್ಸ್ -5 (ಎಲ್ಲಾ ಶಾಖೆಗಳಿಗೆ ಬೇಕಾಗಿದ್ದಾರೆ) ಆಕರ್ಷಕ ಸಂಬಳ + PF / ESI ಮತ್ತು ಇನ್ಸೆಂಟಿವ್ ಸೌಲಭ್ಯವಿದೆ. ನಿಮ್ಮ ರೆಸ್ಯೂಮ್ ಅನ್ನು ಕಳುಹಿಸಿ. [email protected] ಸಂಪರ್ಕಿಸಿ: +91 7996210666
ಬಜೆಟ್ ನಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಗೆ 250 ಕೋಟಿ ರೂ. ಅನುದಾನ ಮಂಜೂರಾತಿಗೆ ಸಿಎಂಗೆ ಮನವಿ- ಎಂ.ಎ. ಗಫೂರ್

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಸಹಿತ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇರಳ ಹಾಗೂ ಗೋವಾ ಮಾದರಿಯಲ್ಲಿ ಸಿಆರ್ ಝಡ್ ನಿಯಮಾವಳಿಯಲ್ಲಿ ಸಡಿಲಿಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮುಂದಿನ ಬಜೆಟ್ ನಲ್ಲಿ ಕರಾವಳಿ ಅಭಿವೃದ್ಧಿ […]
ಉಡುಪಿ: ನ.23ರಂದು ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 23ರಂದು ಸಂಜೆ 4.30ಕ್ಕೆ ಉಡುಪಿಯ ಶಾರದಾ ಮಂಟಪ ರಸ್ತೆಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ಡಾ. […]
ಕಾರ್ಕಳ ಕ್ರೈಸ್ಟ್ ಕಿಂಗ್‌ನ ಅಭಿಷ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರೀಮಂಜೇಶ್ವರ ಬೈಂದೂರು, ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ 14ರ ವಯೋಮಿತಿಯ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಎಂಟನೇ ತರಗತಿಯ ಅಭಿಷ್ 400 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ.
ಹಿರಿಯ ಅಧಿಕಾರಿಗಳೆಂದು ಸುಳ್ಳು ಹೇಳಿ ಮಹಿಳೆಗೆ ವಂಚನೆ: ಬರೋಬ್ಬರಿ 32 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ!

ಬೆಂಗಳೂರು: ಸಿಬಿಐ, ಆರ್‌ಬಿಐ ಹಿರಿಯ ಅಧಿಕಾರಿಗಳೆಂದು ಸುಳ್ಳು ಹೇಳಿ ಮಹಿಳೆಯೊಬ್ಬಳಿಂದ ಬರೋಬ್ಬರಿ 32 ಕೋಟಿ ರೂ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಏನು?ಮಹಿಳೆಯೊಬ್ಬಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಮುಂಬೈನ ಅಂಧೇರಿಯಿಂದ ಆಕೆಯ ಹೆಸರಿನಲ್ಲಿ ಬುಕ್ ಮಾಡಲಾದ ಪ್ಯಾಕೇಜ್‌ನಲ್ಲಿ ನಾಲ್ಕು ಪಾಸ್‌ಪೋರ್ಟ್‌ಗಳು, ಮೂರು ಕ್ರೆಡಿಟ್ ಕಾರ್ಡ್‌ಗಳು ಮತ್ತು ಎಂಡಿಎಂಎ ಸೇರಿದಂತೆ ನಿಷೇಧಿತ ವಸ್ತುಗಳು ಇವೆ ಎಂದು ಹೆದರಿಸಲು ಪ್ರಾರಂಭಿಸಿದ್ದಾನೆ. ಈ ವೇಳೆ ಆಕೆ ನಾನು ಮುಂಬೈಗೆ ಪ್ರಯಾಣಿಸಿಲ್ಲ ಎಂದು ತಿಳಿಸಿದ್ದರೂ, ಆಕೆಗೆ ಆರೋಪಿಗಳು ತಮ್ಮ ಗುರುತನ್ನು […]