ಬಾಂಗ್ಲಾದೇಶ: ಶೇಖ್ ಹಸೀನಾಗೆ ಮರಣದಂಡನೆ ಶಿಕ್ಷೆ!

ಬಾಂಗ್ಲಾದೇಶ: ಕಳೆದ ವರ್ಷದ ವಿದ್ಯಾರ್ಥಿ ದಂಗೆಯ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ( Sheikh Hasina) ಅವರಿಗೆ ದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ) ಮರಣದಂಡನೆ ವಿಧಿಸಿದೆ. ಸುದೀರ್ಘ ವಿಚಾರಣೆಯ ನಂತರ, ನ್ಯಾಯಾಲಯವು ಹಸೀನಾ ಅವರನ್ನು ಮಾರಕ ಕ್ರಮಕ್ಕೆ ಆದೇಶಿಸಿದ್ದಕ್ಕಾಗಿ ತಪ್ಪಿತಸ್ಥರೆಂದು ಘೋಷಿಸಿತು, ಹಿಂಸಾಚಾರಕ್ಕೆ ಪ್ರಚೋದನೆ, ಪ್ರತಿಭಟನಾಕಾರರನ್ನು ಕೊಲ್ಲಲು ಆದೇಶಗಳನ್ನು ಹೊರಡಿಸುವುದು ಮತ್ತು ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ದಂಗೆಯ ಸಮಯದಲ್ಲಿ ದೌರ್ಜನ್ಯಗಳನ್ನು […]
ಉಡುಪಿ:ತ್ರಿಶಾ ವಿದ್ಯಾ ಪಿಯು ಕಾಲೇಜು: ವಾರ್ಷಿಕ ಕ್ರೀಡಾಕೂಟ

ಉಡುಪಿ:ಕಟಪಾಡಿಯ ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು, ಉಡುಪಿ ಮೈದಾನದಲ್ಲಿ ಶನಿವಾರ ನಡೆಯಿತು. ಶ್ರೀಯುತ ಅಶ್ವಿನ್ ಸನಿಲ್ ಕುರ್ಕಾಲು ಧ್ವಜಾರೋಹಣ ನೆರವೇರಿಸಿ, ಸೋಲನ್ನು ಜಯಿಸಿ ಸಾಧನೆ ಮಾಡಿದ ನನ್ನ ಅನುಭವದಂತೆ, ಪ್ರತಿಯೊಬ್ಬ ವಿದ್ಯಾರ್ಥಿಯೂ ಶ್ರಮ ಮತ್ತು ದೃಢಸಂಕಲ್ಪದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯ’ ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿ ನಮಿತಾ ಜಿ. ಭಟ್. ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ […]
ಉಡುಪಿ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಹೆಗ್ಡೆ ಅವರಿಗೆ ತೌಳುವ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ

ತುಳುನಾಡ ರಕ್ಷಣಾ ವೇದಿಕೆ ರಿ., ತುಳುನಾಡ ಸೂರ್ಯ ಪತ್ರಿಕೆವತಿಯಿಂದ ಸಹಕಾರ ಸಪ್ತಾಹ-2025 ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ಉಡುಪಿ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಪ್ರಸ್ತುತ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ರಾಜೇಶ್ ಹೆಗ್ಡೆ ಯವರಿಗೆ ತೌಳುವ ಸಹಕಾರಿ ರತ್ನಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ಸ್ವಸ್ತಿ ಶೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜೈನ ಮಠ ಮೂಡುಬಿದ್ರೆ(ಆಶೀರ್ವಚನ), ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ […]
ಬನ್ನಂಜೆ ಬಿಲ್ಲವರ ಸೇವಾ ಸಂಘ: ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ

ಉಡುಪಿ: ಉಡುಪಿ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು, ಪ್ರತಿಯೊಬ್ಬ ಮಕ್ಕಳು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಆದರ್ಶ ವ್ಯಕ್ತಿಗಳಾಗಿ ಬದುಕಬೇಕು. ನಾವು ಎತ್ತರದ ಸ್ಥಾನಕ್ಕೆ ತಲುಪಿದ ಬಳಿಕ ಸಮಾಜದ ಋಣ […]
ಹುಟ್ಟೂರಿನ ಸನ್ಮಾನ ಎಲ್ಲಕ್ಕಿಂತ ಮಿಗಿಲಾದುದು- ಸಂಸದ ಕೋಟ

ಉಡುಪಿ: ವ್ಯಕ್ತಿಗೆ ಎಷ್ಟೇ ಸನ್ಮಾನಗಳು, ಗೌರವಗಳು ಸಿಕ್ಕಿದರೂ ಹುಟ್ಟೂರಿನ ಸನ್ಮಾನ ಎಲ್ಲಕ್ಕಿಂತ ಮಿಗಿಲಾದುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅಭಿನಂದನಾ ಸ್ವಾಗತ ಸಮಿತಿ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಟ್ಟಕಡೆಯ ಸಮಾಜಕ್ಕೆ ಸೇರಿದ ವ್ಯಕ್ತಿಗಳು ಉನ್ನತ ಹುದ್ದೆಗೇರುವುದು ಸುಲಭದ ಮಾತಲ್ಲ. ಅಂತದ್ದರಲ್ಲಿ ಮರಾಠಿ ಸಮುದಾಯದ ರಾಜೇಶ್ ಪ್ರಸಾದ್ ಅವರು ಉನ್ನತ ಹುದ್ದೆಗೇರುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ […]