ಪತಿ- ಅತ್ತೆಯ ಕಿರುಕುಳ: ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!

ಹಾಸನ: ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ […]

ಎಸ್.ಕೆ.ಗೋಲ್ಡ್‌ ಸ್ಮಿತ್ಸ್ ಸೊಸೈಟಿಗೆ ವಜ್ರಮಹೋತ್ಸವ ಪೂರೈಸಿದ ಸಹಕಾರಿ ಸಂಘ ವಿಶೇಷ ಪ್ರಶಸ್ತಿ.

ಮಂಗಳೂರು: ಕರಾವಳಿ ಉತ್ಸವ ಕ್ರೀಡಾಂಗಣದಲ್ಲಿ ಜರುಗಿದಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಇವರಿಂದ ವಜ್ರಮಹೋತ್ಸವ ಪೂರೈಸಿದ ಸಹಕಾರಿ ಸಂಘ ವಿಶೇಷ ಪ್ರಶಸ್ತಿಯನ್ನು ಎಸ್.ಕೆ.ಗೋಲ್ಡ್‌ ಸ್ಮಿತ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ […]

ಉಡುಪಿ: ದೈವ ನರ್ತಕರಿಂದ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಿಗೆ ವಿಶಿಷ್ಟ ರೀತಿಯಲ್ಲಿ ಸನ್ಮಾನ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೀತೋತ್ಸವ ನಡೆಯುತ್ತಿದೆ. ನವೆಂಬರ್ 28 ರಂದು ಪ್ರಧಾನಿ ಮೋದಿ ಕೂಡ ಗೀತೋತ್ಸವಕ್ಕೆ ಭೇಟಿ ಕೊಡುವ ಕಾರ್ಯಕ್ರಮ ಆಯೋಜನೆಗೊಂಡಿದೆ. ಈ ಮಧ್ಯೆ ಗೀತಾ ಮಹೋತ್ಸವದ ವೇಳೆ ದೈವದ ಆರಾಧನೆ ನಡೆಸುವ ಪಾಣಾರ ಸಮುದಾಯದವರ ವಾರ್ಷಿಕ ಉತ್ಸವ ನಡೆಸಲಾಯಿತು. ದೈವ ನರ್ತಕರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭ ನಡೆದವು. ಈ ವೇಳೆ ದೈವ ನರ್ತಕರು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರನ್ನು ವಿಶಿಷ್ಟ ರೀತಿಯಲ್ಲಿ ಸನ್ಮಾನಿಸಿದರು. ಮಠದ ವತಿಯಿಂದ ಪಾಣಾರ ಸಂಘದವರಿಗೆ ಕೃಷ್ಣಾನುಗ್ರಹ […]

ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರ 2 ಕೃತಿಗಳು ಲೋಕಾರ್ಪಣೆ

ಉಡುಪಿ: ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರು ಯಕ್ಷಗಾನದ ಬಗ್ಗೆ 7 ಕೃತಿಗಳನ್ನು ಬರೆದು ಬಿಡುಗಡೆ ಮಾಡಿರುವುದು ಓರ್ವ ಕಲಾವಿದನಾಗಿ ಯಕ್ಷಲೋಕಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕಟೀಲು ಕ್ಷೇತ್ರದ ರಥಬೀದಿಯಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಏಳನೇ ಮೇಳದ ಉದ್ಘಾಟನೆ ಮತ್ತು ಈ ವರ್ಷದ ತಿರುಗಾಟದ ಆರಂಭೋತ್ಸವಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಯಕ್ಷಗಾನದ ಹಾಸ್ಯಗಾರ ರವಿಶಂಕರ […]

ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲ್: ಮೂವ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಕುಂದಾಪುರ: ಭಾರತ ಸರ್ಕಾರದ ಇಂಧನ ಸಚಿವಾಲಯ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲಿನ ಎಂಟನೇ ತರಗತಿ ವಿದ್ಯಾರ್ಥಿಯಾದ ವಿನೀಶ್ ಆಚಾರ್ಯ ಮತ್ತು ಆರನೇ ತರಗತಿಯ ವಿದ್ಯಾರ್ಥಿನಿಯಾದ ಪ್ರಣಮ್ಯ ಆಚಾರ್ಯ ಹಾಗೂ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾದ ಸಾನಿಧ್ಯ ಆಚಾರ್ಯ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹೆಚ್ ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿಯವರು ಅಭಿನಂದಿಸಿದ್ದಾರೆ.